
ಹುಣಸಗಿ(ನ.07): ರಾಜ್ಯ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ. 5 ವರ್ಷಗಳವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದು, ಸರ್ಕಾರ ಸುಭದ್ರವಾಗಿರುತ್ತದೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ತಿಳಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದಲ್ಲಿ ನನಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲವೆಂದು, ಯಾವತ್ತು ಅಸಮಾಧಾನ ಮಾಡಿಕೊಂಡಿಲ್ಲ. ರಾಜ್ಯ ಕಾಂಗ್ರೆಸ್ ಪ್ರಭಾವಿ ನಾಯಕರು ಹಾಗೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ನನಗೆ ಯಾವುದೇ ಅಸಮಾಧಾನ ಇಲ್ಲವೆಂದು ತಿಳಿಸಿದರು.
ನಾನು ಯಾವುದೇ ಆಸೆಗಳು ಇಟ್ಟುಕೊಂಡಿಲ್ಲ, ಪಕ್ಷದಲ್ಲಿ ನಿಷ್ಠೆಯಿಂದ ಕಾರ್ಯೋನ್ಮುಖವಾಗಿದ್ದೇನೆ. ಈಗಾಗಲೇ ಹುಣಸಗಿಯಲ್ಲಿ ಸರಕಾರಿ ಸಕಲ ಕಚೇರಿಗಳು ಸ್ಥಾಪನೆಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ಈ ನಿಟ್ಟಿನಲ್ಲಿ ಸರಕಾರವು ಕೂಡ ನೂತನ ತಾಲೂಕಿಗೆ ಅಗತ್ಯ ಇರುವ ಇಲಾಖೆಗಳನ್ನು ಕಲ್ಪಿಸಿಕೊಡಲಿದೆ. ಈಗಾಗಲೇ ಬಿಇಓ ಕಚೇರಿಗೆ ಕಟ್ಟಡ ಪರಿಶೀಲಿಸಿದೆ. ಇನ್ನು ಅವಶ್ಯ ಇರುವ ಇಲಾಖೆಗಳನ್ನು ಹಂತ ಹಂತವಾಗಿ ದೊರಿಕಿಸಿಕೊಡಲಾಗುವುದು ಎಂದು ಭರವಸೆ ನೀಡಿದ ಅವರು, ಸಮಗ್ರ ಇಲಾಖೆಗಳೊಂದಿಗೆ ಮಿನಿ ವಿಧಾನಸೌಧವನ್ನು 2 ವರ್ಷಗಳಲ್ಲಿಯೇ ಕಲ್ಪಿಸಲು ಚಿಂತಿಸಲಾಗಿದೆ ಎಂದರು.
ಸರ್ಕಾರ ಪತನ ಕಾಂಗ್ರೆಸ್ಸಿಗರಿಂದಲೇ ಆಗುತ್ತೆ: ಮಾಜಿ ಸಚಿವ ಬಿ.ಸಿ. ಪಾಟೀಲ್
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ್, ಬಸವರಾಜ ಬಳಿ, ನಿಂಗಣ್ಣ ಬಾಚಿಮಟ್ಟಿ, ಚನ್ನಯ್ಯಸ್ವಾಮಿ ಹಿರೇಮಠ, ಆರ್.ಎಂ.ರೇವಡಿ, ಬಸವರಾಜ ಸಜ್ಜನ್ ಸೇರಿದಂತೆ ಇತರರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.