ಸಿದ್ದರಾಮಯ್ಯ ಸಿಎಂ ಆಗಿ 5 ವರ್ಷವೂ ಇರ್ತಾರೆ: ಶಾಸಕ ಕೊತ್ತೂರು ಮಂಜುನಾಥ್

ಸಿದ್ದರಾಮಯ್ಯ ಅವರು 5 ವರ್ಷದ ಅವಧಿಗೆ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

Siddaramaiah will remain CM for 5 years Says MLA Kottur Manjunath

ಕೋಲಾರ (ಫೆ.17): ಸಿದ್ದರಾಮಯ್ಯ ಅವರು 5 ವರ್ಷದ ಅವಧಿಗೆ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರು 5 ವರ್ಷ ಸಿಎಂ ಆಗಿ ಇರಲಿದ್ದು, 2028ರಲ್ಲೂ ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ. ಇದಕ್ಕೆ ಯಾರಿಂದಲೂ ಅಭ್ಯಂತರವಿಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯೂ ಆಗುವುದಿಲ್ಲ ಎಂದರು. ಒಬ್ಬರಿಗೆ ಒಂದೇ ಹುದ್ದೆಯೆಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷ ಬೇರೆ, ಸರ್ಕಾರ ಬೇರೆಯಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏನು ಹೇಳುತ್ತಾರೋ ಅದೇ ಅಂತಿಮ ತೀರ್ಮಾನವಾಗಲಿದೆ. ಸಚಿವ ಸಂಪುಟ ವಿಸ್ತರಣೆ ಕುರಿತು ನನಗೆ ಗೊತ್ತಿಲ್ಲ ಎಂದರು.

ಸಿಎಸ್‌ಆರ್ ಹಣ ಶಿಕ್ಷಣ ಕ್ಷೇತ್ರಕ್ಕೆ ಬಳಕೆಯಾಗಲಿ: ಗ್ರಾಮಾಂತರ ಪ್ರದೇಶ ಬಡ ವಿದ್ಯಾರ್ಥಿಗಳು ಶುಲ್ಕ ಪಾವತಿಸಲು ಸಾಧ್ಯವಾಗದೆ ಕಾಲೇಜು ಶಿಕ್ಷಣದಿಂದ ವಂಚಿತರಾಗುತ್ತಿದ್ದು ಮಲಬಾರ್‌ನಂತಹ ಕಂಪನಿಯು ತನ್ನ ಸಿಎಸ್‌ಆರ್ ಅನುದಾನವನ್ನು ವಿದ್ಯಾರ್ಥಿವೇತನದ ಮೂಲಕ ಅನುಕೂಲ ಮಾಡಿಕೊಟ್ಟಿದೆ. ಇದರ ಸದುಪಯೋಗ ಪಡಿಸಿಕೊಂಡು ಪ್ರತಿಯೊಬ್ಬರೂ ಉನ್ನತ ಶಿಕ್ಷಣ ಪಡೆಯುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಲಬಾರ್ ಸಂಸ್ಥೆಯಿಂದ ಸಿಎಸ್‌ಆರ್ ಅನುದಾನದಡಿ ಸುಮಾರು ಜಿಲ್ಲೆಯ ೭೨೧ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ ೬೧.೬೬ ಲಕ್ಷ ರೂಗಳ ವಿದ್ಯಾರ್ಥಿವೇತನವನ್ನು ವಿತರಿಸಿ ಮಾತನಾಡಿದ ಅವರು ಸಮಾಜದಲ್ಲಿ ಬದಲಾವಣೆ ಶಿಕ್ಷಣದಿಂದ ಮಾತ್ರವೇ ಸಾಧ್ಯ ಎಂದರು.

Latest Videos

ಕನಿಷ್ಠ 10 ಪದವಿ ಪಡೆಯಿರಿಜಿಲ್ಲೆಯ ಕೋಲಾರ, ಬಂಗಾರಪೇಟೆ, ಮಾಲೂರು, ಮಾಸ್ತಿ, ಮುಳಬಾಗಿಲು ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿಯರಿಗೆ ಒಟ್ಟು ೬೧ ಲಕ್ಷ ೬೬ ಸಾವಿರ ರು.ಗಳ ವಿದ್ಯಾರ್ಥಿವೇತನ ನೀಡಿದ್ದಾರೆ. ಇದೊಂದು ಒಳ್ಳೆಯ ಕೆಲಸವಾಗಿದೆ. ಆಸ್ತಿ ಏನೂ ಇಲ್ಲದ ಸಮಯದಲ್ಲಿ ಅಂಬೇಡ್ಕರ್ ೫೪ ಪದವಿ ಮಾಡಿದ್ದರು. ಈಗ ಎಲ್ಲ ಸೌಲಭ್ಯ ಇರುವ ನೀವು ಕನಿಷ್ಠ ೧೦ ಡಿಗ್ರಿಯಾದರೂ ಮಾಡಬೇಕು ಎಂದು ತಿಳಿಸಿದರು. ಎಂಎಲ್‌ಸಿ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಎಲ್ಲವನ್ನೂ ಸರ್ಕಾರದಿಂದ ನಿರೀಕ್ಷಿಸಲು ಆಗುವುದಿಲ್ಲ. ಖಾಸಗಿ ಕಂಪನಿಗಳ ಲಾಭಾಂಶವನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. 

ಒಳ್ಳೆಯ ಕೆಲಸಗಳಿಗೆ ಭಗವಂತ ಯಾವ ರೂಪದಲ್ಲಾದರೂ ಸಹಾಯ ಮಾಡುತ್ತಾನೆ: ನಿಖಿಲ್ ಕುಮಾರಸ್ವಾಮಿ

ಹೆಣ್ಣು ಮಕ್ಕಳು ಸಹ ಎಲ್ಲಾ ವಿಭಾಗದಲ್ಲಿ ನಿಭಾಯಿಸುವ ಶಕ್ತಿ ಮತ್ತು ಅವಕಾಶಗಳು ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿ ಮಲಬಾರ್ ಜೋನಲ್ ಮುಖ್ಯಸ್ಥ ಶರಿಪುದ್ದೀನ್, ಮಹಿಳಾ ಸಬಲೀಕರಣ ಉದ್ದೇಶದಿಂದ ಸರ್ಕಾರಿ ಕಾಲೇಜು ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿವೇತನ ನೀಡುತ್ತಿದ್ದೇವೆ. ಆದಾಯದ ಶೇ ೫ರಷ್ಟು ಹಣ ಸಿಎಸ್‌ಆರ್ ಅನುದಾನದಲ್ಲಿ ನೀಡಲಾಗಿದೆ. ಸಂಸ್ಥೆಯು ಶಿಕ್ಷಣ ಜೊತೆಗೆ ಹಸಿವು ಮುಕ್ತ ಭಾರತ, ಅಜ್ಜಿಮನೆ, ಮಾನವೀಯ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು,ಪಪೂ ಶಿಕ್ಷಣ ಇಲಾಖೆ ಪ್ರಭಾರಿ ಉಪ ನಿರ್ದೇಶಕ ಬಾಲಕೃಷ್ಣ, ಬಂಗಾರಪೇಟೆ ಪಿಯು ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ, ಮಲಬಾರ್ ಸಂಸ್ಥೆಯ ಅಲ್ತಾಫ್, ಸಾಧಿಕ್ ಇದ್ದರು.

vuukle one pixel image
click me!