ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿರುವದನ್ನು ಕಾಂಗ್ರೆಸ್ ಹೈ ಕಮಾಂಡ್ ಅಧಿಕೃತವಾಗಿ ಘೋಷಿಸಿದ್ದು, ಕ್ಯಾಬಿನೆಟ್‌ನಲ್ಲಿ ಏಕೈಕ ಉಪಮುಖ್ಯಮಂತ್ರಿಯಾಗಿ ಡಿಕ ಶಿವಕುಮಾರ್ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ನವೆದೆದಹಲಿ(ಮೇ.18): ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿರುವುದನ್ನು ಕಾಂಗ್ರೆಸ್ ಹೈ ಕಮಾಂಡ್ ಅಧಿಕೃತವಾಗಿ ಘೋಷಿಸಿದ್ದು, ನಾಲ್ಕೈದು ಮಂದಿ ಉಪ್ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಲಿದ್ದಾರೆಂಬ ಸುದ್ದಿಗೂ ತೆರೆ ಎಳೆದಿದ್ದು, ಡಿ.ಕೆ.ಶಿವಕುಮಾರ್ ಮಾತ್ರ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದು, ಪ್ರತಿಯೊಂದೂ ಊಹಾಪೋಗಳಿಗೂ ತೆರೆ ಎಳೆದಿದ್ದಾರೆ. ಮೇ.20 ರ ಮಧ್ಯಾಹ್ನ 12.30ಕ್ಕೆ ಸಿದ್ದರಾಮಯ್ಯ 2ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಜೊತೆಗೆ ಆರು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಡಾ.ಜಿ ಪರಮೇಶ್ವರ್, ಎಂ.ಬಿ ಪಾಟೀಲ್, ಕೆಎಚ್ ಮುನಿಯಪ್ಪ, ಹೆಚ್‌ಕೆ ಪಾಟೀಲ್, ಬಿಕೆ ಹರಿಪ್ರಸಾದ್, ಸತೀಶ್ ಜಾರಕಿಹೊಳಿ ಹಾಗೂ ಯುಟಿ ಖಾದರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆಂಬ ಮಾಹಿತಿ ಸಿಕ್ಕಿದ್ದು, ಯಾರು, ಯಾವ ಖಾತೆಯನ್ನು ವಹಿಸಿಕೊಳ್ಳಲಿದ್ದಾರೆಂಬುದಿನ್ನೂ ಸ್ಪಷ್ಟವಾಗಿಲ್ಲ. ಇಂದು ಸಂಜೆಯೇ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಿಎಂ ಹಾಗೂ ಉಪಮುಖ್ಯಮಂತ್ರಿ ಹೆಸರನ್ನು ಕಾಂಗ್ರೆಸ್ ಶಾಸಕರ ಮೂಲಕವೇ ಘೋಷಣೆ ಮಾಡಲಿದ್ದಾರೆ. ಇದೇ ವಳೆ ಮೊದಲ ಹಂತದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವರು ಹೆಸರನ್ನೂ ಅಖೈರುಗೊಳಿಸಲಾಗುತ್ತದೆ.
ನಿಯೋಜಿತ ಸಿಎಂ ಸಿದ್ದರಾಮಯ್ಯ ಕಟೌಟ್‌ಗೆ ಕ್ಷೀರಾಭಿಷೇಕ
ಸಿಎಂ ಕುರ್ಚಿಗಾಗಿ ನಡೆದಿದ್ದು ಹಗ್ಗ ಜಗ್ಗಾಟ:
Karnataka Assembly Election 2023ಗೆ ಮೇ 10ರಂದು ಏಕ ಹಂತದ ಚುನಾವಣೆ ನಡೆದಿದ್ದು, ಮೇ 13ರಂದು ಫಲಿತಾಂಶ ಘೋಷಣೆಯಾಗಿತ್ತು. ಎಲ್ಲರ ನಿರೀಕ್ಷೆಗಳನ್ನು ಸುಳ್ಳು ಮಾಡಿದ್ದ ಕರುನಾಡ ಮತದಾರರ, ಕಾಂಗ್ರೆಸ್‌ಗೆ 135 ಸ್ಥಾನಗಳನ್ನು ನೀಡುವ ಮೂಲಕ ನಿಚ್ಛಳ ಬಹುಮಂತ ತಂದು ಕೊಟ್ಟಿದ್ದರು. ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿಗಳಿಗಾಗಿ ವೋಟು ಹಾಕಿದ್ದು, ಭಾರತದಲ್ಲೆಡೆ ನೆಲ ಕಚ್ಚುತ್ತಿರುವ ಕಾಂಗ್ರೆಸ್‌ಗೆ ಬಲ ತುಂಬಿತ್ತು. ಆದರೆ, ಸಿಎಂ ಕುರ್ಚಿಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಹಗ್ಗ ಜಗ್ಗಾಟ ನಡೆದಿದ್ದು. ಸಿಎಂ ಬಗ್ಗೆ ಸಾಕಷ್ಟು ಕುತೂಹಲ ಹೆಚ್ಚಾಗಿತ್ತು. ಪಟ್ಟು ಬಿಡದ ಡಿ.ಕೆ.ಶಿವಕುಮಾರ್ ತಾವೇ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸಿದ್ದು, ತಮಗೇ ಸಿಎಂ ಸ್ಥಾನ ನೀಡಬೇಕು. ಇಲ್ಲದಿದ್ದರೆ ಯಾವುದೇ ಸ್ಥಾನವೂ ಬೇಡವೆಂಬ ಬೇಡಿಕೆ ಮುಂದಿಟ್ಟಿದ್ದರು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ಹೈ ಕಮಾಂಡ್ ಡಿಕೆಶಿಯನ್ನು ಸಮಾಧಾನ ಮಾಡಲು ಯತ್ನಿಸಿದ್ದರೂ ಯಾವುದೇ ಫಲ ನೀಡಿರಲಿಲ್ಲ. ಆದರೆ, ಸೋನಿಯಾ ಗಾಂಧಿ ಕರೆ ಮಾಡಿ ಹಠ ಮಾಡಿದ ಡಿಕೆಶಿಯನ್ನು ಸಮಾಧಾನ ಮಾಡಿದ್ದು, ಉಪ ಮುಖ್ಯಮಂತ್ರಿ ಜೊತೆಗೆ ಇನ್ನೆರಡು ಪ್ರಬಲ ಖಾತೆಗಳನ್ನು ನೀಡುವ ಭರವಸೆ ನೀಡಿದ್ದಾರೆನ್ನಲಾಗಿದೆ. ಅಲ್ಲದೇ ಮೊದಲು 30 ತಿಂಗಳ ಕಾಲ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ, ಮತ್ತೆ ಉಳಿದ ಸಮಯಕ್ಕೆ ಡಿಕೆಶಿ ಅಧಿಕಾರದ ಗದ್ದುಗೆ ಏರುತ್ತಾರೆಂಬ ಸಂಧಾನದ ಸೂತ್ರವನ್ನು ಹೈ ಕಮಾಂಡ್ ಮುಂದಿಟ್ಟಿದ್ದು, ಶಿವಕುಮಾರ್ ಸಂತೋಷದಿಂದ ಒಪ್ಪಿಕೊಂಡಿದ್ದಾರೆನ್ನಲಾಗಿದೆ.
ಯಾರು ಯಾರಿಗೆ ಸಿಗಲಿದೆ ಮಂತ್ರಿಗಿರಿ?
ಎಲ್ಲೆಡೆಯಿಂದ ಹರಿದು ಬರುತ್ತಿದೆ ಶುಭ ಹಾರೈಕೆಗಳು:
ಬೆಂಗಳೂರಿನ ಸಿದ್ದರಾಮಯ್ಯ ನಿವಾಸದ ಎದುರು ಬಿಗಿ ಭದ್ರತೆ ಹೆಚ್ಚಿಸಲಾಗಿದ್ದು, ರಾಜ್ಯದ ಎಲ್ಲೆಡೆಯಿಂದ ನಿಯೋಜಿತ ಮುಖ್ಯಮಂತ್ರಿಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಕಟೌಟಿಗೆ ಕ್ಷೀರಾಭಿಷೇಕ ನೆರವೇರಿಸಿ, ತಮ್ಮ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಕೊಪ್ಪಳದ ಕನಕದಾಸ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದವರು ಪಟಾಕಿ ಸಿಡಿಸಿ. ಸಿಹಿ ಹಂಚಿ ಸಂಭ್ರಮಿಸಿದರು. ಸಿದ್ದರಾಮಯ್ಯ ಎರಡನೇ ಅವಧಿಗೆ ಸಿಎಂ ಆಗಿ ಮತ್ತು ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಆಯ್ಕೆಯಾಗಿ ಉತ್ತಮ ಆಡಳಿತ ನೀಡುವ ಭರವಸೆಯೊಂದಿಗೆ ಕೈ ಅಧಿಕಾರಕ್ಕೆ ಬರುತ್ತಿರುವುದು ಹೆಮ್ಮೆ ತಂದಿದೆ ಎಂದರು.
ಈ ವೇಳೆ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಅವರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಪಕ್ಷಕ್ಕೆ ಎರಡು ಕಣ್ಣು ಇದ್ದ ಹಾಗೆ ಇಬ್ಬರೂ ಸೇರಿ ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸಲಿದ್ದಾರೆ. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಪಕ್ಷ ಜಯಭೇರಿ ಭಾರಿಸುವ ಮೂಲಕ ದೇಶದಲ್ಲಿ ಹೊಸ ಮನ್ವಂತರ (Transformation) ಸೃಷ್ಟಿಸಲಿದೆ ಅದಕ್ಕೆ ಪಕ್ಷ ಮೊದಲು ಎಂದು ಎಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು ಈಗಿನಿಂದಲೇ ಶ್ರಮವಹಿಸಿ ಕೆಲಸ ಮಾಡಬೇಕು. ಬರುವ ಸೋಮುವಾರದಿಂದಲೇ ಪಕ್ಷ ಸಂಘಟನೆಯ ಕೆಲಸ ಆರಂಭವಾಗುತ್ತದೆ> ವಿಶೇಷವಾಗಿ ಮಹಿಳಾ ಸಂಘಟನೆ ಬಲಿಷ್ಠ ಗೊಳಿಸುವ ನಿಟ್ಟಲ್ಲಿ ಕೆಲಸ ಮಾಡುವುದಾಗಿ ಇಬ್ಬರೂ ನಾಯಕರಿಗೆ ಶುಭ ಹಾರೈಸಿದರು.