
ಬೆಂಗಳೂರು,(ಜೂನ್.20): ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ(ಜೂನ್.20) ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮುಖ್ಯವಾಗಿ ಬೆಂಗಳೂರಿನಲ್ಲಿ ಇಂದು(ಸೋಮವಾರ) ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಲಿದ್ದಾರೆ.
ಇನ್ನು ಮೋದಿ ಕರ್ನಟಕಕ್ಕೆ ಆಗಮಿಸುತ್ತಿರುವುದಿರಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದ ಮೂಲಕ ಅವರು ಸ್ವಾಗತಕೋರಿದ್ದಾರೆ. ಅಲ್ಲದೇ ಮೋದಿ ಉದ್ಘಾಟಿಸಲಿರುವ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನಮ್ಮ ಸರ್ಕಾರದ ಕನಸು ಎಂದಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಬರೆದುಕೊಂಡಿದ್ದು ಈ ಕೆಳಗಿನಂತಿದೆ ನೋಡಿ...
ಮೋದಿಗಾಗಿ ವಿಶೇಷ ಮೈಸೂರು ಪೇಟ, ಮಹಾರಾಜರಂತೆ ಕೆಂಪು ಪೇಟೆ ತೊಡಿಸಲು ತಯಾರಿ
ಐದು ವರ್ಷಗಳ ಹಿಂದೆ (4-10-2017)ರಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬೆಂಗಳೂರಿಗೆ ಬಂದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆಯಾದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಕಾಲದ ಮಧುರ ಮತ್ತು ಸಾರ್ಥಕ ನೆನಪು.
ವಿಶ್ವಕಂಡ ಅಪ್ರತಿಮ ಆರ್ಥಿಕ ತಜ್ಞ ಡಾ.ಬಿ.ಆರ್. ಅಂಬೇಡ್ಕರ್ ಅವರ 125ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ನೆನಪಿಗೆ ಅರ್ಥಪೂರ್ಣವಾದ ಸ್ಮಾರಕರೂಪದಲ್ಲಿ ಯೋಜನೆಯೊಂದನ್ನು ರೂಪಿಸಬೇಕೆಂಬ ನಮ್ಮ ಸರ್ಕಾರದ ಕನಸು ನನಸಾಗಿ ರೂಪುಗೊಂಡದ್ದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್.
ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ಸ್ಥಾಪನೆಗೆ 2017ರಲ್ಲಿಯೇ 43.45 ಎಕರೆ ಜಮೀನು ಮತ್ತು ಹೊಸ ಕಟ್ಟಡ ಸಹಿತ ಮೂಲಸೌಕರ್ಯ ನಿರ್ಮಾಣಕ್ಕೆ 350 ಕೋಟಿ ರೂಪಾಯಿ ಮಂಜೂರು ಮಾಡಿದ್ದ ನಮ್ಮ ಸರ್ಕಾರ ಬದ್ಧತೆಯಿಂದ ಈ ಯೋಜನೆಯನ್ನು ಸಾಕಾರಗೊಳಿಸಿತ್ತು.
ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ಕಟ್ಟಡದ ಶಂಕುಸ್ಥಾಪನೆ ಮಾಡಿದ್ದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ಈ ಕಟ್ಟಡವನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಿದ್ದು ನಮ್ಮ ಸರ್ಕಾರದ ಹೆಮ್ಮೆಯ ಸಾಧನೆ. ಜ್ಞಾನಭಾರತಿ ಕ್ಯಾಂಪಸ್ ನಲ್ಲಿಯೇ ಇದ್ದ ಕಟ್ಟಡದಲ್ಲಿಯೇ 2017ರ ಜೂನ್ ನಲ್ಲಿ B.Sc(Honours) Economics ತರಗತಿಗಳು ಪ್ರಾರಂಭವಾಗಿತ್ತು. ಪ್ರಧಾನಿ ನರೇಂದ್ರಮೋದಿ ಅವರು ಇಂದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ನ ನೂತನ ಆವರಣವನ್ನು ಉದ್ಘಾಟಿಸುತ್ತಿದ್ದಾರೆ. ಈ ಸಮಾರಂಭಕ್ಕೆ ಶುಭ ಹಾರೈಸುವೆ ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.