ಗ್ರಾಮ ಪಂಚಾಯಿತಿ ಅವಧಿ ಮುಕ್ತಾಯ: ಬಿಎಸ್‌ವೈಗೆ ಸಿದ್ದು ಪ್ರಜಾಪ್ರಭುತ್ವ, ಸಂವಿಧಾನದ ಪಾಠ

By Suvarna News  |  First Published May 16, 2020, 4:56 PM IST

ಹಾಲಿ ಗ್ರಾಮ ಪಂಚಾಯಿತಿಗಳ ಅವಧಿ ಮುಕ್ತಾಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರದ ಮೂಲಕ ಪ್ರಜಾಪ್ರಭುತ್ವ, ಸಂವಿಧಾನದ ಪಾಠ ಮಾಡಿದ್ದಾರೆ.


ಬೆಂಗಳೂರು, (ಮೇ.16): ಲಾಕ್‌ಡೌನ್‌ ಪರಿಣಾಮ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯೋದು ಅನುಮಾನವಾಗಿದೆ. ರಾಜ್ಯದ 6021 ಗ್ರಾಮ ಪಂಚಾಯತ್‌ಗಳ ಅವಧಿ ಇದೇ ಮೇ/ಜೂನ್ ತಿಂಗಳಿನಲ್ಲಿ ಅವಧಿ ಮುಕ್ತಾಯಗೊಳ್ಳಲಿದೆ. 

ಆದ್ದರಿಂದ ಚುನಾವಣೆ ನಡೆಸಬೇಕಿತ್ತು. ಆದರೆ, ಇದೀಗ ಕೊರೋನಾ ಇರುವುದರಿಂದ ಎಲೆಕ್ಷನ್‌ ನಡೆಸುವುದು ಅಸಾಧ್ಯ ಮಾತು.ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಆಡಳಿತ ಸಮಿತಿ ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ.

Tap to resize

Latest Videos

undefined

ಲಾಕ್‌ಡೌನ್: ಗ್ರಾಮ ಪಂಚಾಯತ್​ ಎಲೆಕ್ಷನ್ ಡೌಟ್, ಬೇರೆ ತೀರ್ಮಾನ ಕೈಗೊಂಡ ಸರ್ಕಾರ

ಆದ್ರೆ, ಇದಕ್ಕೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದು, ಗ್ರಾಮ ಪಂಚಾಯಿತಿಗಳ ಅವಧಿ ವಿಸ್ರರಣೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಸಿಎಂಗೆ ಪತ್ರ ಬರೆದಿದ್ದಾರೆ. ಅದು ಈ ಕೆಳಗಿನಂತಿದೆ.

ಸಿದ್ದರಾಮಯ್ಯ ಪತ್ರ ಇಂತಿದೆ.
5 ವರ್ಷಗಳ ಹಿಂದೆ ರಾಜ್ಯದ 6024 ಗ್ರಾಮ ಪಂಚಾಯತಿಗಳಿಗೆ  ನಡೆದ ಚುನಾವಣೆಗಳಲ್ಲಿ 97060 ಸದಸ್ಯರು ಆಯ್ಕೆಯಾಗಿರುತ್ತಾರೆ. ಅವರ ಅವಧಿ ಮುಕ್ತಾಯದ ಹಂತದಲ್ಲಿದೆ.

ಆದರೆ ಕೊರೋನಾ ಸೋಂಕಿನ ಹೆಸರು ಹೇಳಿಕೊಂಡು ಸರ್ಕಾರ ಚುನಾವಣೆಗಳನ್ನು ಮುಂದೂಡುವ ಪ್ರಯತ್ನ ನಡೆಸುತ್ತಿದೆ. ಹೀಗೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ.

ಈ ಹಿಂದೆ ಹಲವು ಪ್ರಕರಣಗಳಲ್ಲಿ ನ್ಯಾಯಾಲಯಗಳು ಸಹ ನಿಗಧಿ ಪಡಿಸಿದ ಅವಧಿಯ ಒಳಗೆ ಚುನಾವಣೆಗಳನ್ನು ನಡೆಸುವಂತೆ ಸರ್ಕಾರಗಳಿಗೆ ನಿರ್ದೇಶನಗಳನ್ನು ನೀಡಿವೆ.

ಕೊರೋನಾ ಬಿಕ್ಕಟ್ಟಿನ ನೆಪದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಆಡಳಿತಾಧಿಕಾರಿಗಳನ್ನು ಮತ್ತು ನಾಮ ನಿರ್ದೇಶಿತ ಆಡಳಿತ ಸಮಿತಿಗಳನ್ನು ರಚಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ಸರ್ಕಾರ ಒಂದು ವೇಳೆ ಹೀಗೆ ಮಾಡಿದ್ದೆ ಆದರೆ ಅದು ಪ್ರಜಾಪ್ರಭುತ್ವದ ಮತ್ತು ಸಂವಿಧಾನದ ಆಶಯಗಳಿಗೆ ಸಂಪೂರ್ಣ ವಿರುದ್ಧವಾಗುತ್ತದೆ.

ಗ್ರಾಮ ಪಂಚಾಯತಿಗಳ ಕಾರ್ಯ ವೈಖರಿಯ ಬಗ್ಗೆ ಏನೇನೂ ತಿಳಿವಳಿಕೆ ಇಲ್ಲದವರನ್ನು, ನಿರ್ಧಿಷ್ಠ ಸಿದ್ಧಾಂತಗಳ ಹಿನ್ನೆಲೆಯವರನ್ನು ಸೇರಿಸಿ ಆಡಳಿತ ಸಮಿತಿ ರಚಿಸಿದರೆ ಪ್ರಜಾಪ್ರಭುತ್ವಕ್ಕೆ ಮಾರಕ. ಇದರಿಂದ ಗ್ರಾಮೀಣ ಕರ್ನಾಟಕ  ತೀವ್ರ ಅನ್ಯಾಯಕ್ಕೆ ತುತ್ತಾಗುತ್ತದೆ. 

ಆದ್ದರಿಂದ ಯಾವುದೇ ಕಾರಣಕ್ಕೂ ಹೊಸ ಆಡಳಿತ  ಸಮಿತಿ ರಚಿಸುವ , ಆಡಳಿತಾಧಿಕಾರಿ ನೇಮಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು. 

ಪ್ರಸ್ತುತ ಅಧಿಕಾರದಲ್ಲಿರುವ ಎಲ್ಲ ಗ್ರಾಮ ಪಂಚಾಯಿತಿಗಳನ್ನು ಮತ್ತು ಸದಸ್ಯರನ್ನು ಮುಂದಿನ ಚುನಾವಣೆ ನಡೆಸುವವರೆಗೆ ಮುಂದುವರಿಸಬೇಕು ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

click me!