ಮುಖ್ಯಮಂತ್ರಿ ಆಗುವ ಸಿದ್ದು, ಡಿಕೆಶಿ ಕನಸು ನನಸಾಗಲ್ಲ: ಸಿಎಂ ಬೊಮ್ಮಾಯಿ

By Kannadaprabha News  |  First Published Apr 5, 2023, 11:26 AM IST

ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿದ್ದಾರೆ. ಆದರೆ, ಆ ಕನಸು ನನಸಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 


ಬೆಂಗಳೂರು (ಏ.05): ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿದ್ದಾರೆ. ಆದರೆ, ಆ ಕನಸು ನನಸಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ಖಾಸಗಿ ಚಾನಲ್ ಸಂದರ್ಶನವೊಂದರಲ್ಲಿ ಮತ್ತೆ ಮುಖ್ಯಮಂತ್ರಿ ಆಗುವ ಇಚ್ಛೆ ವ್ಯಕ್ತಪಡಿಸಿ ಏನೋ ಬಯಸಿದ್ದಾರೆ. ಆದರೆ, ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಇಲ್ಲದಿರುವ ಸೀಟಾಗಿ ಗುದ್ದಾಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕಾಗಿ, ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೋರಾಡುತ್ತಿದೆ.

ಜನರಿಗೆ, ಕರ್ನಾಟಕಕ್ಕೆ ಒಳ್ಳೆಯದು ಮಾಡಬೇಕು ಎಂಬ ಯೋಚನೆ ಮಾಡಿಲ್ಲ’ ಎಂದರು. ‘ಸಿದ್ದರಾಮಯ್ಯ ಹೇಳಿರುವುದು ಅಲ್ಲಿ ಆಂತರಿಕವಾಗಿ ನಡೆಯುತ್ತಿರುವ ವಿದ್ಯಮಾನಗಳ ಪ್ರತಿಬಿಂಬ. ಡಿ.ಕೆ.ಶಿವಕುಮಾರ್‌ ಹೋದ ಕಡೆಯಲ್ಲೆಲ್ಲ ‘ನಾನೇ ಮುಖ್ಯಮಂತ್ರಿ, ನನಗೆ ಆಶೀರ್ವಾದ ಮಾಡಿ’ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನೇ ಸಿಎಂ ಎನ್ನುತ್ತಿದ್ದಾರೆ. ಮುಖ್ಯಮಂತ್ರಿ ಮಾಡುವುದು ಜನ. ಆದರೆ ಜನರ ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ’ ಎಂದರು. ಕಳೆದ ಮೂರು ನಾಲ್ಕು ದಿನಗಳ ಬೆಳವಣಿಗೆ ಗಮನಿಸಿದರೆ ಬಿಜೆಪಿಗೆ ಸಂಪೂರ್ಣ ಬಹುಮತ. ಕೆಲವು ಕ್ಷೇತ್ರಗಳಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ. ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ನಾಯಕರಿಗೆ ಆತ್ಮವಿಶ್ವಾಸವಿದೆ ಎಂದರು.

Tap to resize

Latest Videos

ಬಿಎಸ್‌ವೈ, ಸಿದ್ದರಾಮಯ್ಯ ಒಳಒಪ್ಪಂದ: ದೇವೇಗೌಡ ಹೊಸ ಬಾಂಬ್‌

ಬೊಮ್ಮಾಯಿಗೆ ಎಸ್ಸಿಎಸ್ಟಿಒಕ್ಕೂಟದ ಅಭಿನಂದನೆ: ರಾಜ್ಯದ ಬಿಜೆಪಿ ಸರ್ಕಾರವು ಮೀಸಲಾತಿ ಕುರಿತು ಕೈಗೊಂಡ ನಿರ್ಣಯದ ಹಿನ್ನೆಲೆಯಲ್ಲಿ ಗುರುವಾರ ಹುಬ್ಬಳ್ಳಿಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಇತರರನ್ನು ರಾಜ್ಯ ಪರಿಶಿಷ್ಟಜಾತಿ ಸಮುದಾಯಗಳ ಒಕ್ಕೂಟದ ವತಿಯಿಂದ ಅಭಿನಂದಿಸಲಾಗುವುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ. ಮಂಗಳವಾರ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ತೀರ್ಮಾನವು ಸಾಗತಾರ್ಹ. 

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದ ಸದಸ್ಯರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರನ್ನು ಅಭಿನಂದಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ವಿವಿಧ ಮೋರ್ಚಾಗಳ ಮುಖಂಡರು, ಪಕ್ಷದ ಕಾರ್ಯಕರ್ತರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಹಲವು ದಶಕಗಳ ಹೋರಾಟಕ್ಕೆ ಸಿಕ್ಕ ಗೆಲುವು ಇದಾಗಿದೆ. ಸಾಮಾಜಿಕ ನ್ಯಾಯದ ಪರವಾಗಿ ನಮ್ಮ ಸರ್ಕಾರ ಇದೆ. ಒಳಮಿಸಲಾತಿ ಹೆಚ್ಚಳಕ್ಕೆ ಕೇಂದ್ರದ ಅನುಮತಿಗಾಗಿ ಕಳುಹಿಸಲಾಗಿದೆ. ಇದನ್ನು ಹಬ್ಬದ ರೀತಿಯಲ್ಲಿ ಆಚರಿಸಬೇಕು. ಒಳಮೀಸಲಾತಿ ಸಂಬಂಧ ಕೆಲವೆಡೆ ಇರುವ ಗೊಂದಲಗಳನ್ನು ನಿವಾರಿಸಲಾಗುತ್ತಿದೆ. ಬಂಜಾರ, ಬೋವಿ ಇತರೆ ಸಮಾಜಗಳನ್ನು ಪರಿಶಿಷ್ಟಪಟ್ಟಿಯಿಂದ ಹೊರತರಬೇಕೇ ಎಂದು ಕೇಳಿ ಕಾಂಗ್ರೆಸ್‌ ಸರ್ಕಾರ ಇದ್ದಾಗ ರಾಷ್ಟ್ರೀಯ ಆಯೋಗವು ಪತ್ರ ಬರೆದಿತ್ತು. ಆದರೆ, ಕಾಂಗ್ರೆಸ್‌ನವರು ಉತ್ತರ ನೀಡದೆ ಕಡತವನ್ನು ಮೂಲೆಗುಂಪು ಮಾಡಿತ್ತು. 

ಒಂದೇ ಕ್ಷೇತ್ರಕ್ಕೆ ಸಿದ್ದು ಕಟ್ಟಿಹಾಕಲು ಯತ್ನ: ಕೆಲವು ನಾಯಕರಿಂದ ಹೈಕಮಾಂಡ್‌ ಮೇಲೆ ಒತ್ತಡ

ಬಿಜೆಪಿ ಸರ್ಕಾರವು ಈ ಸಮಾಜವನ್ನು ಮೀಸಲಾತಿಯಿಂದ ಕೈಬಿಡುವುದಿಲ್ಲ ಎಂದು ತೀರ್ಮಾನಿಸಿ ರಾಷ್ಟ್ರೀಯ ಆಯೋಗಕ್ಕೂ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!