
ಬೆಂಗಳೂರು (ಮೇ.24): ನಾಡಗೀತೆಯನ್ನು ಅವಮಾನ ಮಾಡಿದ, ರಾಷ್ಟ್ರಗೀತೆಯನ್ನು ಗೇಲಿ ಮಾಡಿದ ರೋಹಿತ್ ಚಕ್ರತೀರ್ಥನಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರನ್ನಾಗಿ ಬಿಜೆಪಿ ಸರ್ಕಾರ ನೇಮಕ ಮಾಡಿದೆ. ಸರ್ಕಾರಕ್ಕೆ ನಾಚಿಕೆ, ಮಾನ-ಮರ್ಯಾದೆ ಇದ್ದರೆ ಕೂಡಲೇ ಆತನನ್ನು ಕಿತ್ತು ಹಾಕಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕುವೆಂಪು ಅವರ ಬಗ್ಗೆ ಹಾಗೂ ನಾಡಗೀತೆ ಬಗ್ಗೆ ಲಘುವಾಗಿ ಮಾತನಾಡಲು ಹೋಗಬಾರದು. ಅವರು ರಾಷ್ಟ್ರಕವಿ. ಅಂತಹವರ ಬಗ್ಗೆ ಗೇಲಿ ಮಾಡಿದವರಿಗೆ ಪಠ್ಯಪುಸ್ತಕ ಪರಿಷ್ಕರಣೆ ಜವಾಬ್ದಾರಿ ನೀಡುವುದು ಮೂರ್ಖತನ. ಪಠ್ಯ ಪರಿಷ್ಕರಣೆ ಮಾಡಲು ವಿಷಯ ತಜ್ಞರ ಸಮಿತಿ ಮಾಡಬೇಕು, ದೇಶ ಮತ್ತು ಸಮಾಜದ ಹಿತದೃಷ್ಟಿಯಿಂದ ಯಾರ ಪಠ್ಯ ಇರಬೇಕು, ಯಾರ ಪಠ್ಯ ಇರಬಾರದು ಎಂದು ಅವರು ನಿರ್ಧಾರ ಮಾಡಲಿ. ರೋಹಿತ್ ಚಕ್ರತೀರ್ಥ ಆರ್‌ಎಸ್‌ಎಸ್‌ನವರು, ಅವರ ಬದಲು ಯಾವುದೇ ಪಕ್ಷ ಹಾಗೂ ಸಂಘಟನೆಗೆ ಸೇರದ ವಿಷಯ ತಜ್ಞರನ್ನು ಅಧ್ಯಕ್ಷರನ್ನಾಗಿ ಮಾಡಲಿ ಎಂದರು.
Textbook controversy ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಗೂ ರೋಹಿತ್ ಚಕ್ರತೀರ್ಥ ಅಧ್ಯಕ್ಷ
ಭಗತ್‌ಸಿಂಗ್, ಮಹಾತ್ಮ ಗಾಂಧಿ, ಡಾ.ಬಿ.ಆರ್. ಅಂಬೇಡ್ಕರ್, ನಾರಾಯಣ ಗುರುಗಳ ವಿಚಾರಗಳನ್ನು ಓದುವುದರಿಂದ ದೇಶಭಕ್ತಿ, ಸಹಿಷ್ಣುತೆ, ಸೌಹಾರ್ದತೆಯ ಮೌಲ್ಯಗಳು ಉದ್ದೀಪನಗೊಳ್ಳುತ್ತವೆ. ಬುದ್ಧ, ಬಸವಣ್ಣ, ಕನಕದಾಸರು ಇವರೆಲ್ಲ ಸಮಾಜ ಸುಧಾರಕರು. ಇಂಥವರ ಬಗ್ಗೆ ಮಕ್ಕಳಿಗೆ ಹೇಳಿ. ವಿದ್ಯಾರ್ಥಿಗಳನ್ನು ಜಾತ್ಯತೀತ ಹಾಗೂ ವೈಜ್ಞಾನಿಕ ಮನೋಭಾವದಿಂದ ನೋಡಬೇಕು. ಮಕ್ಕಳ ಜ್ಞಾನ ವಿಕಾಸವಾಗಬೇಕೋ? ಸಂಕುಚಿತವಾಗಬೇಕೋ? ಎಂದು ಪ್ರಶ್ನಿಸಿದರು.
ದಿಲ್ಲಿಗೆ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್: ಕಾಂಗ್ರೆಸ್ ವರಿಷ್ಠರ ಬುಲಾವ್!
ಹೆತ್ತವರಿಗೆ ಹೆಗ್ಗಣ ಮುದ್ದು: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಆರ್‌ಎಸ್‌ಎಸ್‌ನವರು, ಹೆಡಗೇವಾರ್ ಕೂಡ ಆರ್‌ಎಸ್‌ಎಸ್‌ನವರು, ರೋಹಿತ್ ಚಕ್ರತೀರ್ಥ ಕೂಡ ಆರ್‌ಎಸ್‌ಎಸ್‌ನವರು. ಹೀಗಾಗಿಯೇ ಹೆತ್ತವರಿಗೆ ಹೆಗ್ಗಣ ಮುದ್ದು ಎನ್ನುವಂತೆ ಅವರು ಹೆಡಗೇವಾರ್ ಪಠ್ಯ ಅಳವಡಿಸಿದ್ದಾರೆ. ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದವರ ಇತಿಹಾಸವನ್ನು ಪಠ್ಯದಲ್ಲಿ ಸೇರಿಸಲಿ. ಅದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಇವರಿಂದ ದೇಶಕ್ಕೆ ಏನು ಕೊಡುಗೆ ಸಿಕ್ಕಿದೆ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.