ಕಾಂಗ್ರೆಸ್ ಶಾಸಕ ಅಖಂಡ ಮನೆಗೆ ಬೆಂಕಿ ಪ್ರಕರಣದಲ್ಲಿ ಸ್ವಾಮೀಜಿ ಎಂಟ್ರಿ: ಸಿಎಂಗೆ ಮಹತ್ವದ ಮನವಿ

By Suvarna NewsFirst Published Nov 14, 2020, 6:50 PM IST
Highlights

ಬೆಂಗಳೂರಿನ ಗಲಭೆಯಲ್ಲಿ ಕಾಂಗ್ರೆಸ್ ಶಾಸಕ ಅಖುಂಡ ಶ್ರೀನಿವಾಸ್ ಮೂರ್ತಿ ಅವರ ನಿವಾಸಕ್ಕೆ ಬೆಂಕಿ ಪ್ರಕರಣದಲ್ಲಿ ಸ್ವಾಮೀಜಿಗಳು ಅಖಾಡಕ್ಕಿಳಿದಿದ್ದಾರೆ.

ಬೆಂಗಳೂರು, (ನ.14) : ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ನ್ಯಾಯ ಒದಗಿಸಿ ಕೊಡುವಂತೆ ಭೋವಿ ಸಮುದಾಯದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

ಇಂದು (ಶನಿವಾರ) ಸಿಎಂ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ ಶ್ರೀಗಳು ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ನಡೆದು ಮೂರು ತಿಂಗಳು ಆದರೂ ಇನ್ನು ಆರೋಪಿಗಳನ್ನು ಬಂಧಿಸಿಲ್ಲ ಅಲ್ಲದೆ ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಪತ್ ರಾಜ್ ನನ್ನು ಇನ್ನು ಬಂಧಿಸಿಲ್ಲ ಕೂಡಲೇ ಈ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದರು.

ಖಡಕ್ ಎಚ್ಚರಿಕೆ ಕೊಟ್ಟ ಡಿಕೆಶಿ, ಬಿಜೆಪಿ ಸೇರ್ತಾರಾ ಕಾಂಗ್ರೆಸ್ ಶಾಸಕ..?

ಅಖಂಡ ಶ್ರೀನಿವಾಸ್ ಮೂರ್ತಿ ಯನ್ನು ಜೀವಂತವಾಗಿ ಸುಡಲು ಸಂಪತ್ ರಾಜ್ ಪ್ರಯತ್ನ ಮಾಡಿದ್ದಾರೆ, ಅಲ್ಲದೆ ಶ್ರೀನಿವಾಸ್ ಮೂರ್ತಿ ಮೇಲೆ ದೌರ್ಜನ್ಯವನ್ನು ಎಸಗಿದ್ದಾನೆ ಕೂಡಲೇ ಆತನನ್ನು ಬಂಧಿಸಿ ಡಿಜಿ ಹಳ್ಳಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸುವಂತೆ ಸಿಎಂಗೆ ಶ್ರೀಗಳು ಒತ್ತಾಯಿಸಿದರು.

ಶ್ರೀಗಳ ಮನವಿಗೆ ಪ್ರಿತಿಕ್ರಿಯಿಸಿದ ಮುಖ್ಯಮಂತ್ರಿಗಳು ಆದಷ್ಟು ಬೇಗ ಸಂಪತ್ ರಾಜ್ ಹಾಗೂ ಇದಕ್ಕೆ ಸಂಬಂಧ ಪಟ್ಟ ಆರೋಪಿಗಳನ್ನು ಬಂಧಿಸಲು ಕ್ರಮ ಜರಗಿಸುವುದಾಗಿ ಭರವಸೆಯನ್ನು ನೀಡಿದರು.

click me!