ಖುಷ್ಬೂ ಬೆನ್ನಲ್ಲೇ ಮತ್ತೊಬ್ಬ ನಟಿ ಕಾಂಗ್ರೆಸ್‌ನಿಂದ ಬಿಜೆಪಿಗೆ?

Published : Nov 10, 2020, 11:45 AM IST
ಖುಷ್ಬೂ ಬೆನ್ನಲ್ಲೇ ಮತ್ತೊಬ್ಬ ನಟಿ ಕಾಂಗ್ರೆಸ್‌ನಿಂದ ಬಿಜೆಪಿಗೆ?

ಸಾರಾಂಶ

ನಟಿ ಖುಷ್ಬೂ ಬಳಿಕ ದಕ್ಷಿಣ ಭಾರತದ ಪ್ರಸಿದ್ಧ ನಟಿ ಎಂ. ವಿಜಯಶಾಂತಿ ಅವರು ಕೂಡ ಕಾಂಗ್ರೆಸ್‌ಗೆ ಗುಡ್‌ಬೈ| ತೆಲಂಗಾಣ ಉಪಚುನಾವಣೆ ಫಲಿತಾಂಶದ ಬಳಿಕ ನಟಿ ಬಿಜೆಪಿಗೆ ಸೇರ್ಪಡೆ?

ಹೈದರಾಬಾದ್(ನ.10)‌: ನಟಿ ಖುಷ್ಬೂ ಬಳಿಕ ದಕ್ಷಿಣ ಭಾರತದ ಪ್ರಸಿದ್ಧ ನಟಿ ಎಂ. ವಿಜಯಶಾಂತಿ ಅವರು ಕೂಡ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆ ಆಗುವ ಸಾಧ್ಯತೆ ಇದೆ. ತೆಲಂಗಾಣ ಉಪಚುನಾವಣೆ ಫಲಿತಾಂಶದ ಬಳಿಕ ವಿಜಯಶಾಂತಿ ತಮ್ಮ ನಿರ್ಧಾರವನ್ನು ಪ್ರಕಟಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.

ಭಾನುವಾರದಂದು ಟ್ವೀಟ್‌ ಮಾಡಿದ್ದ ವಿಜಯಶಾಂತಿ, ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್‌ಎಸ್‌ ಪಕ್ಷವು ಕಾಂಗ್ರೆಸ್‌ ಅನ್ನು ದುರ್ಬಲಗೊಳಿಸಿದ್ದು, ಬಿಜೆಪಿಯ ಬೆಳವಣಿಗೆಗೆ ಎಡೆ ಮಾಡಿಕೊಟ್ಟಿದೆ ಎಂದು ಹೇಳಿದ್ದರು. ಆದರೆ, ಪಕ್ಷದಲ್ಲಿ ವಿಜಯಶಾಂತಿ ಅವರನ್ನು ಕಡೆಗಣಿಸಲಾಗಿದ್ದು, ಇದರಿಂದ ಬೇಸರಗೊಂಡು ಪಕ್ಷ ತ್ಯಜಿಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್‌ನ ಮುಖಂಡರೊಬ್ಬರು ಹೇಳಿದ್ದಾರೆ.

ಆರಂಭದಲ್ಲಿ ಬಿಜೆಪಿಯಿಂದಲೇ ರಾಜಕೀಯ ಆರಂಭಿಸಿದ್ದ ವಿಜಯಶಾಂತಿ ಮೇದಕ್‌ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ ಆಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

‘ಕನ್ನಡಪ್ರಭ’ ಡ್ರಗ್ಸ್‌ ಅಭಿಯಾನ ವಿಧಾನಪರಿಷತ್ತಲ್ಲಿ ಪ್ರತಿಧ್ವನಿ
ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ