ನಕಲಿ ಸಹಿ, ಸೂರತ್‌ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಹೈಕೋರ್ಟ್‌ ಮೊರೆ ಹೋಗಲು ಕಾಂಗ್ರೆಸ್ ನಿರ್ಧಾರ

By Suvarna NewsFirst Published Apr 22, 2024, 9:37 AM IST
Highlights

ಲೋಕಸಭೆ ಚುನಾವಣೆಗೆ ಸೂರತ್‌ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ನಾಮಪತ್ರದಲ್ಲಿ ನಕಲಿ ಸೂಚಕರ ಸಹಿ ಇದೆ ಎಂಬ ಕಾರಣಕ್ಕೆ ತಿರಸ್ಕಾರ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಸೂರತ್‌: ಲೋಕಸಭೆ ಚುನಾವಣೆಗೆ ಸೂರತ್‌ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ನಾಮಪತ್ರದಲ್ಲಿ ನಕಲಿ ಸೂಚಕರ ಸಹಿ ಇದೆ ಎಂಬ ಕಾರಣಕ್ಕೆ ತಿರಸ್ಕಾರ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿ ಸೌರಭ್‌ ಪರ್ದಿ ತಮ್ಮ ಆದೇಶದಲ್ಲಿ, ‘ಕಾಂಗ್ರೆಸ್‌ ಪಕ್ಷದ ನೀಲೇಶ್‌ ಕುಂಬಾನಿ ಹಾಗೂ ಅವರ ಬದಲಿ ಅಭ್ಯರ್ಥಿ ಸುರೇಶ್‌ ಪಡ್ಸಾಲಾ ಅವರ ಅರ್ಜಿಗಳಲ್ಲಿ ಸೂಚಕರ ಸಹಿ ನಕಲಿ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಕಾರಣವಾಗಿ ನಾಮಪತ್ರ ತಿರಸ್ಕರಿಸಲಾಗಿದೆ ಎಂದಿದ್ದಾರೆ. ನಾಮಪತ್ರದಲ್ಲಿನ ಸೂಚಕರ ಸಹಿ ತಮ್ಮದಲ್ಲ ಎಂದು ಮೂವರು ತಮ್ಮ ಜಿಲ್ಲಾ ಚುನಾವಣಾ ಅಧಿಕಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಆಧಾರದ ಮೇರೆಗೆ ಕ್ರಮ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್‌ ಗೆದ್ದರೆ ಮೊದಲ ಅಧಿವೇಶನದಲ್ಲೇ ಸಿಎಎ ರದ್ದು: ಚಿದಂಬರಂ

ಹೈಕೋರ್ಟ್‌ ಮೊರೆ ಹೋಗಲಿದ್ದೇವೆ

ಅರ್ಜಿ ತಿರಸ್ಕಾರಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಇದು ಬಿಜೆಪಿಯ ಸಂಚಾಗಿದ್ದು, ಅದರಂತೆ ಚುನಾವಣಾ ಆಯೋಗ ವರ್ತಿಸಿದೆ. ಬಿಜೆಪಿಗೆ ಲೋಕಸಭೆ ಚುನಾವಣೆಯಲ್ಲಿ ಸೋಲು ಖಾತ್ರಿಯಾಗಿದ್ದು, ಹೀಗಾಗಿ ನಾಮಪತ್ರ ತಿರಸ್ಕಾರ ಮಾಡಿಸಿದೆ. ಇದರ ಜಿಲ್ಲಾ ಚುನಾವಣಾ ಅಧಿಕಾರಿ ವಿರುದ್ಧ ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ ಮೊರೆ ಹೋಗಲಾಗುವುದು ಎಂದು ಕಿಡಿಕಾರಿದೆ.

ನಾನು ಅಧೀರ್ ಸೋಲಿಸುವುದು ಖಚಿತ: ಯೂಸುಫ್‌ ಪಠಾಣ್‌

ಕೋಲ್ಕತಾ: ಪಶ್ಚಿಮ ಬಂಗಾಳದ ಬಹ್ರಾಂಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಅಧೀರ್‌ ರಂಜನ್‌ ಚೌಧರಿ ವಿರುದ್ಧ ಟಿಎಂಸಿಯಿಂದ ಕಣಕ್ಕೆ ಇಳಿದಿರುವ ಭಾರತ ಕ್ರಿಕೆಟ್‌ ತಂಡದ ಮಾಜಿ ಆಲ್‌ರೌಂಡರ್ ಯೂಸುಫ್‌ ಪಠಾಣ್‌, ಈ ಬಾರಿ ತಮ್ಮ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಪಠಾಣ್‌, ‘ದಿನ ಕಳೆದಂತೆ ನಾನು ಕ್ಷೇತ್ರದಲ್ಲಿ ಬಲ ಮತ್ತು ವಿಶ್ವಾಸ ಹೆಚ್ಚಿಸಿಕೊಳ್ಳುತ್ತಿದ್ದೇನೆ. ನಿಮ್ಮನ್ನೂ ಇನ್ನು ಎಲ್ಲಿಗೂ ಹೋಗಲು ಬಿಡಲ್ಲ ಎಂದು ಜನರು ಹೇಳುವಂತಹ ಕ್ಷೇತ್ರಕ್ಕೆ ಬಂದಿದ್ದು ನನ್ನ ಅದೃಷ್ಟ. ಈಗಾಗಲೇ ಇಲ್ಲಿನ ಜನ ನನ್ನನ್ನು ಒಪ್ಪಿಕೊಂಡಿದ್ದಾರೆ. ಚುನಾವಣೆ ಬಳಿಕವೂ ನಾನು ಇಲ್ಲಿಯೇ ಇರುತ್ತೇನೆ. ಕ್ಷೇತ್ರ ಬಿಟ್ಟು ಎಲ್ಲೂ ಹೋಗಲ್ಲ. ಈ ಬಾರಿ ಅಧೀರ್‌ ರಂಜನ್‌ ಚೌಧರಿಗೆ ಸೋಲು ಖಚಿತ, ನನ್ನ ಗೆಲುವು ನಿಶ್ಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಂಚಿಯಲ್ಲಿ ಇಂಡಿಯಾ ಮಹಾ ಶಕ್ತಿ ಪ್ರದರ್ಶನ: ಹೇಮಂತ್ ಸೊರೇನ್, ಕೇಜ್ರಿವಾಲ್‌ಗೆ ಖಾಲಿ ಕುರ್ಚಿ ಇಟ್ಟು ಗೌರವ

ಅಧೀರ್‌ ರಂಜನ್‌ ಚೌಧರಿ ತಳಮಟ್ಟದ ಜನರ ಸಂಪರ್ಕ ಕಳೆದುಕೊಂಡಿದ್ದಾರೆ. ಕೋವಿಡ್‌ ಸಮಯದಲ್ಲಿ ಅವರು ಜನರ ನೆರವಿಗೆ ಬರಲಿಲ್ಲ. ಕೇಂದ್ರದಿಂದ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ಸ್ಥಳೀಯ ಜನರಿಗೆ ಉದ್ಯೋಗದ ಅವಕಾಶವೇ ಇಲ್ಲ. 25 ವರ್ಷಗಳಿಂದ ಕ್ಷೇತ್ರವನ್ನು ಪ್ರತಿನಿಧಿಸಿದವರು ಈ ಬಗ್ಗೆ ಜನರಿಗೆ ಉತ್ತರಿಸಬೇಕು ಎಂದು ಆಗ್ರಹಿಸಿದರು.

click me!