
ಬೆಂಗಳೂರು(ಫೆ.20): ರಾಜ್ಯದಲ್ಲಿ ಬೇರೆ ಬೇರೆ ಪಕ್ಷಗಳ ಹಲವು ಮುಖಂಡರು ಕಾಂಗ್ರೆಸ್ ಸೇರುತ್ತಿರುವ ಜತೆಗೆ ಒಂದಷ್ಟು ಜನ ಅನ್ಯಪಕ್ಷೀಯ ಹಾಲಿ ಶಾಸಕರೂ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುನರುಚ್ಚರಿಸಿದ್ದಾರೆ.
ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಪಕ್ಷಗಳ ಮುಖಂಡರ ಜತೆಗೆ ಹಾಲಿ ಶಾಸಕರು ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ. ಕೆಲವರಿಗೆ ನಮ್ಮ ಪಕ್ಷದಲ್ಲಿ ಸ್ಥಾನಮಾನ ನೀಡಲು ಕಷ್ಟವಾಗುತ್ತದೆ. ಮತ್ತೆ ಕೆಲವರನ್ನು ಸೇರ್ಪಡೆ ಮಾಡಿಕೊಳ್ಳಲಾಗುವುದು. ಈಗ ಆ ನಾಯಕರ ಹೆಸರು ಪ್ರಸ್ತಾಪ ಮಾಡುವುದಿಲ್ಲ. ಅವರ ಕಾಂಗ್ರೆಸ್ ಸೇರ್ಪಡೆ ಖಚಿತವಾಗುವವರೆಗೆ ನಾನು ಗಾಳಿಯಲ್ಲಿ ಗುಂಡು ಹೊಡೆದು ಅವರ ರಾಜಕೀಯ ಜೀವನಕ್ಕೆ ಅಡ್ಡಿಪಡಿಸುವುದಿಲ್ಲ ಎಂದರು.
ಸಿದ್ದು-ಡಿಕೆಶಿ ನಡುವೆ 'ಸಿಎಂ ಪಟ್ಟ'ದ ಜಿದ್ದು: ಕೋಲಾರದಲ್ಲಿ ಟಗರಿಗೆ ವಿಘ್ನ
ಬಿಜೆಪಿ ಕೇವಲ ಭಾವನೆ ಮೇಲೆ ರಾಜಕೀಯ ಮಾಡುತ್ತಿದ್ದು, ನಾವು ಬದುಕಿನ ವಿಚಾರವಾಗಿ ರಾಜಕೀಯ ಮಾಡುತ್ತೇವೆ. ಜನ ಕೂಡ ಅವರ ಹೊಟ್ಟೆಪಾಡು ಏನು ಎಂದು ಪ್ರಶ್ನಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಭಾವನಾತ್ಮಕ ವಿಚಾರವಾಗಿ ಅಶಾಂತಿ ಹೆಚ್ಚಾಗಿರುವ ಪರಿಣಾಮ ಅಲ್ಲಿ ಯಾರೊಬ್ಬರೂ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುತ್ತಿಲ್ಲ. ಹೀಗಾಗಿ ಬಿಜೆಪಿ ನಾಯಕ ಆಯನೂರು ಮಂಜುನಾಥ್ ಅವರೇ ಈ ವಿಚಾರವನ್ನು ಒಪ್ಪಿಕೊಂಡು ಮುಂದೆ ಇದನ್ನು ಬದಲಿಸಬೇಕು ಎಂಬ ಸಂದೇಶವನ್ನು ತಮ್ಮ ಪೋಸ್ಟರ್‌ನಲ್ಲಿ ಹಾಕಿಕೊಂಡಿದ್ದಾರೆ. ಇದು ಕೂಡ ಜನರು ಭಾವನೆಗಿಂತ ಬದುಕಿನ ಬಗ್ಗೆ ಆಲೋಚಿಸುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.