ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಪತ್ನಿ ಮೆಲಾನಿಯಾ ಟ್ರಂಪ್ ನೇತೃತ್ವದ ನಿಯೋಗ ಎರಡು ದಿನಗಳ ಭಾರತ ಭೇಟಿಗಾಗಿ ಸೋಮವಾರ ಬೆಳಿಗ್ಗೆ ಅಹಮದಾಬಾದ್‌ಗೆ ಆಗಮಿಸಿದ್ದು, ಪ್ರಧಾನಿ ಮೋದಿ ಬರಮಾಡಿಕೊಂಡರು. ಆದ್ರೆ, ಇದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ.
ಕಲಬುರಗಿ, (ಫೆ.24): ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಭಾರತಕ್ಕೆ ಆಗಮಿಸಿದ್ದರಿಂದ ಏನೂ ಪ್ರಯೋಜನವಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಕಲಬುರಗಿಯಲ್ಲಿ ಇಂದು (ಸೋಮವಾರ) ಖಾಸಗಿ ಹೋಟೆಲ್ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಭಾರತಕ್ಕೆ ಟ್ರಂಪ್ ಆಗಮನದಿಂದ ಏನು ಆಗುವುದಿಲ್ಲ. ಒಂದು ದೇಶದ ಅಧ್ಯಕ್ಷ ಆಗಮಿಸುತ್ತಿದ್ದಾರೆ ಅವರನ್ನು ಸ್ವಾಗತ ಮಾಡುತ್ತಿದ್ದಾರೆ ಎಂದರು.
ಭಾರತದಲ್ಲಿ ಟ್ರಂಪ್ ಮೋಡಿ, ಮತ್ತೆ ಪಾಕ್ ಜಿಂದಾಬಾದ್ ಎಂದ ಕಿಡಿಗೇಡಿ; ಫೆ.24ರ ಟಾಪ್ 10 ಸುದ್ದಿ!
ಅತಿಥಿಗೆ ಸ್ವಾಗತ ಮಾಡುವುದು ನಮ್ಮ ಕರ್ತವ್ಯ. ಆದರೆ, ಅದು ಅಗತ್ಯಕ್ಕಿಂತ ಹೆಚ್ಚಾಗಿದೆ ಎಂದು ಟೀಕಿಸಿದ ಅವರು, ಯಾವುದೇ ಆಮದು ಒಪ್ಪಂದಕ್ಕೆ ಮುಂದಾಗಬಾರದು ಎಂದು ಹೇಳಿದರು.
ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಶೀಘ್ರದಲ್ಲೆ ಆಗಲಿದ್ದು, ರಾಹುಲ್ ಗಾಂಧಿಯೇ ಮತ್ತೆ ಎಐಸಿಸಿ ಅಧ್ಯಕ್ಷ ರಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರು ಹೊಸ ಪಕ್ಷ ಆರಂಭಿಸಲಿದ್ದಾರೆ ಎಂಬ ಕಟೀಲ್ ಹೇಳಿಕೆ ಕುರಿತು ಮಾತನಾಡಿದ ಅವರು, ಕಟೀಲ್ ಗೆ ರಾಜಕೀಯ ಅನುಭವ ತೀರ ಕಡಿಮೆಯಾಗಿದ್ದು, ಅವರ ಮಾತಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
'ಟ್ರಂಪ್ ಭಾರತಕ್ಕೆ ಬಂದಿದ್ದು ನಮಗೆ ಹೆಮ್ಮೆ, ಅನಿವಾಸಿ ಭಾರತೀಯರಿಗೂ ಹೆಮ್ಮೆ'
15ನೇಹಣಕಾಸಿನ ಆಯೋಗದಿಂದ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದೆ. ಈ ವರ್ಷ ಒಂಬತ್ತು ಸಾವಿರ ಕೋಟಿ ಕಡಿಮೆಯಾಗಿದ್ದು, ಮುಂದಿನ ವರ್ಷ 11, 258 ಕೋಟಿ ರೂ. ಕಡಿಮೆಯಾಗಲಿದೆ. ಯಡಿಯೂರಪ್ಪ ಮತ್ತು 25 ಜನ ಎಂಪಿಗಳು ಏನು ಮಾಡ್ತಿದ್ದಾರೆ? ಇದರ ಬಗ್ಗೆ ಯಾರದ್ರು ಧ್ವನಿ ಎತ್ತುತ್ತಿದ್ದಾರಾ? ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಪ್ರವಾಹ ಬಂದಾಗಲು ಹೆಚ್ಚಿನ ಪರಿಹಾರ ನೀಡಲಿಲ್ಲ.ಅಲ್ಲದೇ, ಯಡಿಯೂರಪ್ಪ ಅವರು ನಿಯೋಗವನ್ನು ಕರೆದುಕೊಂಡು ಹೋಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರನ್ನು ಹೆದರುತ್ತಿದ್ದಾರೆ. ಯಡಿಯೂರಪ್ಪ ಅತ್ಯಂತ ದುರ್ಬಲ ಮುಖ್ಯಮಂತ್ರಿ ಎಂದು ಆರೋಪಿಸಿದರು.
ನಾನು ರಾಜಕೀಯ ಜೀವನದಲ್ಲಿ ಅಧಿಕಾರದ ಹಿಂದೆ ಹೋಗುವುದಿಲ್ಲ. ಬಿಜೆಪಿ ಅನೇಕರು ಅವರ ಪಕ್ಷ ತೊರೆಯಲು ಸಿದ್ಧ ರಾಗಿದ್ದಾರೆ. ಸದ್ಯ ಬಿಜೆಪಿ ಯಲ್ಲಿ ತಳಮಳ ಅಧಿಕಾರದ ಕಚ್ಚಾಟ ಪ್ರಾರಂಭವಾಗಿದೆ ಎಂದರು. ಬಿಜೆಪಿ ಕಚ್ಚಾಟದಿಂದ ಸರ್ಕಾರ ಬಿದ್ದರೆ, ಮತ್ತೆ ಅಧಿಕಾರ ಹಿಡಿಯುವ ಯಾವುದೇ ಯೋಚನೆ ತಮಗಿಲ್ಲ ಎಂದು ಸ್ಪಷ್ಟಪಡಿಸಿದರು.