
ಮೈಸೂರು, (ಜುಲೈ.03): ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ಅವಧಿ ಬಾಕಿ ಇದೆ. ಆಗಲೇ ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳಿಗಳು ಗರಿಗೆದರಿವೆ.
ಬಿಜೆಪಿಗೆ ಹೋಗಿರುವ 14 ಶಾಸಕರು ವಾಪಸ್ ಕಾಂಗ್ರೆಸ್‌ಗೆ ಬರಲು ಅರ್ಜಿ ಹಾಕಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಕ್ತ ಕಂಠದಿಂದ ಹೇಳಿದ್ದಾರೆ. ಇದರ ಮಧ್ಯೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬಿಜೆಪಿ ಸೇರಿದ 17 ಶಾಸಕರಿಗೆ ಕಾಂಗ್ರೆಸ್ ಮತ್ತೆ ಮಣೆ..? ರಾಜ್ಯ ರಾಜಕಾರಣದಲ್ಲಿ ಸಂಚಲನ
ಮೈಸೂರಿನಲ್ಲಿ ಇಂದು (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹಾಗೂ ಬಿಜೆಪಿಯ ಕೆಲ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರುವ ಪ್ರಯತ್ನದಲ್ಲಿ ಇದ್ದಾರೆ. ಕೆಲ ಶಾಸಕರು ನಮ್ಮ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದರು.
ಆದರೆ ಅವರು ಯಾರು ಎಂಬುದನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಬೇರೆ ಪಕ್ಷದ ಶಾಸಕರುಗಳ ಸೇರ್ಪಡೆ ಬಗ್ಗೆ ಒಂದು ಸಮಿತಿ ಇದೆ. ಅದನ್ನು ಸಮಿತಿ ತೀರ್ಮಾನ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.
ಇನ್ನು ಇದೇ ವೇಳೆ ಜಿ.ಪಂ ತಾ.ಪಂ. ಚುನಾವಣೆಗೆ ಮೀಸಲಾತಿ ಪ್ರಕಟಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ದೆ. ನಾವು ಚುನಾವಣೆಗೆ ಸಿದ್ಧರಿದ್ದೇವೆ. ಕೋವಿಡ್ ಸಂದರ್ಭದಲ್ಲಿ ಪಕ್ಷ ನಿರಂತರವಾಗಿ ಸಂಘಟನೆಯಲ್ಲಿ ತೊಡಗಿಕೊಂಡಿದೆ. ಕಳೆದ ಗ್ರಾ.ಪಂ. ಚುನಾವಣೆ ಕಾಂಗ್ರೆಸ್‌ಗೆ ಉತ್ತಮ ಫಲಿತಾಂಶ ಬಂದಿದೆ. ಮೈಸೂರು, ಚಾಮರಾಜನಗರದಲ್ಲಿ ಪಕ್ಷ ಶಕ್ತಿಯುತವಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.