ಇಂದಿರಾ ಗಾಂಧಿ ಹಂತಕನ ಪುತ್ರ ಫರೀದ್‌ ಕೋಟ್‌ನಿಂದ ಲೋಕಸಭೆಗೆ ಸ್ಪರ್ಧೆ

By Kannadaprabha News  |  First Published Apr 12, 2024, 6:21 AM IST

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಅವರ ಅಂಗರಕ್ಷಕ ಬೇಅಂತ್‌ ಸಿಂಗ್‌ ಅವರ ಪುತ್ರ ಸರಬ್ಜಿತ್‌ ಸಿಂಗ್‌ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಫರೀದ್‌ಕೋಟ್‌ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಪ್ರಕಟಿಸಿದ್ದಾರೆ. 


ಚಂಡೀಗಢ (ಏ.12): ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಅವರ ಅಂಗರಕ್ಷಕ ಬೇಅಂತ್‌ ಸಿಂಗ್‌ ಅವರ ಪುತ್ರ ಸರಬ್ಜಿತ್‌ ಸಿಂಗ್‌ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಫರೀದ್‌ಕೋಟ್‌ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಪ್ರಕಟಿಸಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ತಮಗೆ ಕ್ಷೇತ್ರದ ಜನತೆ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲು ಒತ್ತಾಯ ಮಾಡಿದ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ತಿಳಿಸಿದರು. ಇದಕ್ಕೂ ಮೊದಲು ಅವರು ಹಲವು ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದರೂ ಗೆಲುವು ಕಂಡಿಲ್ಲ. ಆಪರೇಷನ್‌ ಬ್ಲೂಸ್ಟಾರ್‌ ಕಾರ್ಯಾಚರಣೆ ನಡೆಸಿದಕ್ಕೆ ಪ್ರತಿಯಾಗಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅಂಗರಕ್ಷಕರಾಗಿದ್ದ ಬಿಯಾಂತ್ ಸಿಂಗ್ ಮತ್ತು ಸತ್ವಂತ್ ಸಿಂಗ್ ಅವರು ಅಕ್ಟೋಬರ್ 31, 1984 ರಂದು ಅವರ ನಿವಾಸದಲ್ಲಿ ಇಂದಿರಾಗಾಂಧಿಯನ್ನು ಕೊಂದಿದ್ದರು.

Tap to resize

Latest Videos

ಕಾಂಗ್ರೆಸ್‌ಗೆ ಕುಟುಂಬ ಮೊದಲು, ನನಗೆ ಭಾರತ ಮತ್ತು ನೀವು: ನರೇಂದ್ರ ಮೋದಿ

ಸರಬ್ಜಿತ್‌ ಸಿಂಗ್‌ ಅವರು 2004 ರ ಲೋಕಸಭಾ ಚುನಾವಣೆಯಲ್ಲಿ ಬಟಿಂಡಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಚುನಾವಣೆಯಲ್ಲಿ 1.13 ಲಕ್ಷ ಮತಗಳನ್ನು ಗಳಿಸಿದ್ದರೂ ಸೋತಿದ್ದರು. 2007 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬರ್ನಾಲಾದ ಭದೌರ್ ಕ್ಷೇತ್ರದಿಂದ ಸ್ಪರ್ಧಿಸಿ ವಿಫಲರಾಗಿದ್ದರು. ಇದೀಗ ಮತ್ತೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

click me!