ಭಾರತ ಐಕ್ಯತಾ ಯಾತ್ರೆಗೆ ಸೋನಿಯಾ, ಪ್ರಿಯಾಂಕಾ ಭಾಗಿ: ಡಿ.ಕೆ.ಶಿವಕುಮಾರ್‌

By Govindaraj S  |  First Published Sep 24, 2022, 3:21 AM IST

ರಾಜ್ಯದಲ್ಲಿ ಸೆ.30 ರಂದು ಪ್ರಾರಂಭವಾಗಲಿರುವ ‘ಭಾರತ ಐಕ್ಯತಾ ಯಾತ್ರೆ’ ವೇಳೆ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಅವರೂ ಭಾಗವಹಿಸಲಿದ್ದಾರೆ. ಪಾದಯಾತ್ರೆ ಯಶಸ್ಸಿಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.


ಬೆಂಗಳೂರು (ಸೆ.24): ರಾಜ್ಯದಲ್ಲಿ ಸೆ.30 ರಂದು ಪ್ರಾರಂಭವಾಗಲಿರುವ ‘ಭಾರತ ಐಕ್ಯತಾ ಯಾತ್ರೆ’ ವೇಳೆ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಅವರೂ ಭಾಗವಹಿಸಲಿದ್ದಾರೆ. ಪಾದಯಾತ್ರೆ ಯಶಸ್ಸಿಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಶುಕ್ರವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ರಣದೀಪ್‌ಸಿಂಗ್‌ ಸುರ್ಜೆವಾಲಾ ನೇತೃತ್ವದಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪೂರ್ವ ಸಿದ್ಧತೆ ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ರಾಹುಲ್‌ಗಾಂಧಿ ಅವರ ಜತೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಆದರೆ, ಇವರಿಬ್ಬರೂ ಯಾವ ದಿನ ಭಾಗವಹಿಸುತ್ತಾರೆ ಎಂಬ ಬಗ್ಗೆ ಸದ್ಯಕ್ಕೆ ಮಾಹಿತಿ ನೀಡುವುದಿಲ್ಲ. ಒಟ್ಟಾರೆ ಅಚ್ಚುಕಟ್ಟಾಗಿ ಯಾತ್ರೆ ನಿರ್ವಹಿಸಲು ಈಗಾಗಲೇ ಪ್ರಮುಖ ನಾಯಕರಿಗೆ ವಿವಿಧ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ. ಸಿದ್ಧತೆಗಳ ಬಗ್ಗೆ ವೇಣುಗೋಪಾಲ್‌ ಅವರಿಗೂ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.

Tap to resize

Latest Videos

ಭಾರತ್‌ ಜೋಡೋ ಯಾತ್ರೆ ಬಳಿಕ ದೇಶದಲ್ಲಿ ಬದಲಾವಣೆ ಗಾಳಿ: ಡಿ.ಕೆ.ಶಿವಕುಮಾರ್‌

‘ರಾಜ್ಯದಲ್ಲಿ ಈ ಯಾತ್ರೆ ಸೆ.30 ರಂದು ಬೆಳಗ್ಗೆ 9 ಗಂಟೆಗೆ ಗುಂಡ್ಲುಪೇಟೆಯಿಂದ ಆರಂಭವಾಗಲಿದೆ. ಅ. 2 ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬಳ್ಳಾರಿಯಲ್ಲಿ ಬೃಹತ್‌ ಸಾರ್ವಜನಿಕ ಸಮಾವೇಶ ನಡೆಯಲಿದೆ. ದಸರಾ ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಯಾತ್ರೆಗೆ ಬಿಡುವು ನೀಡಲಿದ್ದು, ರಾಹುಲ್‌ಗಾಂಧಿ ಅವರ ಯಾತ್ರೆಯಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶವಿದೆ’ ಎಂದರು.

ರಾಹುಲ್‌ ಗಾಂಧಿ ಅವರು ಯುವಕರು, ಮಹಿಳೆಯರು, ರೈತರು, ನಾಗರಿಕ ಸಮುದಾಯಗಳು, ವಿದ್ಯಾರ್ಥಿಗಳು, ಬುಡಕಟ್ಟು ಜನರ ಜತೆ ಒಂದೊಂದು ದಿನ ಮಾತುಕತೆ ನಡೆಸಲಿದ್ದಾರೆ. ಪ್ರತಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ, ಪಕ್ಷದ ಘಟಕಗಳು, ಪರಾಜಿತ ಅಭ್ಯರ್ಥಿಗಳು ಜನರನ್ನು ಕರೆ ತರಬೇಕು. ಆ ದಿನ ದಿನ ರಾಹುಲ್‌ ಗಾಂಧಿ ಅವರ ಜೊತೆ ಹೆಜ್ಜೆ ಹಾಕಲು ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳಿದರು.

ವೇಣುಗೋಪಾಲ್‌ ವಿಶ್ವಾಸ: ಕೆ.ಸಿ. ವೇಣುಗೋಪಾಲ್‌ ಮಾತನಾಡಿ, ಭಾರತ ಐಕ್ಯತಾ ಯಾತ್ರೆಗೆ ತಮಿಳುನಾಡು ಹಾಗೂ ಕೇರಳದಲ್ಲಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರೀಕ್ಷೆಗೂ ಮೀರಿ ಲಕ್ಷಾಂತರ ಜನ ಭಾಗವಹಿಸುತ್ತಿದ್ದಾರೆ. ಇದೀಗ ಕರ್ನಾಟಕ ರಾಜ್ಯದ ಸಿದ್ಧತಾ ಪರಿಶೀಲನಾ ಸಭೆ ಮಾಡಿದ್ದೇವೆ. ಪ್ರದೇಶ ಕಾಂಗ್ರೆಸ್‌ ಸಮಿತಿ ಹಾಗೂ ರಾಜ್ಯ ನಾಯಕರು ಮಾಡಿರುವ ಸಿದ್ಧತೆಗಳು ಎಐಸಿಸಿಗೆ ತೃಪ್ತಿ ತಂದಿದೆ. ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ನಿತ್ಯ ತಯಾರಿ ಕುರಿತು ಪರಿಶೀಲನೆ ನಡೆಸುತ್ತಿದ್ದು, ರಾಜ್ಯದಲ್ಲಿನ ಯಾತ್ರೆ ಅತ್ಯಂತ ಯಶಸ್ವಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PayCM Posters: ಪೇಸಿಎಂ ಪೋಸ್ಟರ್‌ ಅಂಟಿಸ್ತೀವಿ: ಡಿಕೆಶಿ, ಸಿದ್ದು ಸವಾಲ್‌

ರಾಹುಲ್‌ ಅಧ್ಯಕ್ಷತೆ ರಾಜ್ಯ ನಾಯಕರ ಒತ್ತಾಸೆ: ಎಐಸಿಸಿ ಅಧ್ಯಕ್ಷರ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌, ‘ರಾಹುಲ್‌ ಗಾಂಧಿಯವರು ಪಕ್ಷದ ಅಧ್ಯಕ್ಷರಾಗಿ ಮುಂದಾಳತ್ವ ವಹಿಸಬೇಕು ಎಂಬುದು ನಮ್ಮ ರಾಜ್ಯದ ಎಲ್ಲ ನಾಯಕರ ಒತ್ತಾಸೆ. ಆದರೆ, ಅವರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

click me!