ವಿಧಾನಸಭೆ ಪ್ರಚಾರ ಅಖಾಡಕ್ಕೆ ಕಾಲಿಟ್ಟ ಸೋನಿಯಾಗಾಂಧಿ: ಬಿಜೆಪಿ ವಿರುದ್ಧ ವಾಗ್ದಾಳಿ!

Published : May 06, 2023, 08:03 PM ISTUpdated : May 06, 2023, 08:06 PM IST
ವಿಧಾನಸಭೆ ಪ್ರಚಾರ ಅಖಾಡಕ್ಕೆ ಕಾಲಿಟ್ಟ ಸೋನಿಯಾಗಾಂಧಿ: ಬಿಜೆಪಿ ವಿರುದ್ಧ ವಾಗ್ದಾಳಿ!

ಸಾರಾಂಶ

ಬಿಜೆಪಿಯ ಸ್ವಾರ್ಥಕ್ಕಾಗಿ ಕರ್ನಾಟಕವನ್ನು ಬಲಿ ಕೊಡಬೇಡಿ. ಬಿಜೆಪಿಯ ಲೂಟಿ, ಕಮೀಷನ್ ಮುಕ್ತವಾದ ಸರ್ಕಾರಕ್ಕಾಗಿ ಕಾಂಗ್ರೆಸ್ ಮೇಲೆ ಭರವಸೆ ಇಟ್ಟು ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಕಾಂಗ್ರೆಸ್ ವಕ್ತಾರೆ ಸೋನಿಯಾಗಾಂಧಿ ಮನವಿ ಮಾಡಿದ್ದಾರೆ.

ಹುಬ್ಬಳ್ಳಿ (ಮೇ 06): ಬಿಜೆಪಿಯ ಸ್ವಾರ್ಥಕ್ಕಾಗಿ ಕರ್ನಾಟಕವನ್ನು ಬಲಿ ಕೊಡಬೇಡಿ. ಬಿಜೆಪಿಯ ಲೂಟಿ, ಕಮೀಷನ್ ಮುಕ್ತವಾದ ಸರ್ಕಾರಕ್ಕಾಗಿ ಕಾಂಗ್ರೆಸ್ ಮೇಲೆ ಭರವಸೆ ಇಟ್ಟು ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಕಾಂಗ್ರೆಸ್ ವಕ್ತಾರೆ ಸೋನಿಯಾಗಾಂಧಿ ಮನವಿ ಮಾಡಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಮುಕ್ತಾಯಕ್ಕೆ ಒನ್ನೊಂದೇ ದಿನ ಬಾಕಿ ಎನ್ನುವಾಗ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಪರ ಪ್ರಚಾರಕ್ಕಾಗಿ ಹುಬ್ಬಳ್ಳಿಗೆ ಆಗಮಿಸಿದ ಕಾಂಗ್ರೆಸ್‌ ವಕ್ತಾರೆ ಸೋನಿಯಾಗಾಂಧಿ ಅವರು, ಇಂದಿರಾಗಾಂಧಿ ಅವರು ರಾಜಕೀಯ ಜೀವನದಲ್ಲಿ ಹೋರಾಡುತ್ತಿದ್ದಾಗ ಚಕ್ಕಮಗಳೂರು ಜನರು ಕೈ ಹಿಡಿಸಿದ್ದರು. 24 ವರ್ಷಗಳ ಹಿಂದೆ ಬಳ್ಳಾರಿ ಜನರು ನನಗೆ ಬೆಂಬಲಿಸಿದ್ದರು. ಆದರೆ, ಈಗ ರಾಜ್ಯದಲ್ಲಿ ಬಿಜೆಪಿಯ ಲೂಟಿ, ಕಮೀಷನ್ ಮುಕ್ತವಾದ ಸರ್ಕಾರಕ್ಕಾಗಿ ಕಾಂಗ್ರೆಸ್ ಮೇಲೆ ಭರವಸೆ ಇಟ್ಟು ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಮಲ್ಲಿಕಾರ್ಜುನ ಖರ್ಗೆ ಹತ್ಯೆಗೆ ಸ್ಕೆಚ್‌ ಹಾಕಿದ ಬಿಜೆಪಿ ಅಭ್ಯರ್ಥಿ ಬಂಧಿಸಿ: ಸಿದ್ದರಾಮಯ್ಯ ಆಗ್ರಹ

ಕನ್ನಡದಲ್ಲಿಯೇ ಭಾಷಣ ಆರಂಭ: ಸಹೋದರ ಸಹೋದರಿಯರಿಗೆ ನಮಸ್ಕಾರ ಎಂದು ಭಾಷಣ ಪ್ರಾರಂಭ ಮಾಡಿದ ಸೋನಿಯಾಗಾಂಧಿ, ರಾಜ್ಯದ ಭವಿಷ್ಯ ಇನ್ನುಮುಂದೆ ಬದಲಾಗಲಿದೆ ಅನ್ನೋ ವಿಶ್ವಾಸವಿದೆ. ಕರ್ನಾಟಕದ ಜನರು ವಿವಿಧ ಕ್ಷೇತ್ರಗಳಲ್ಲಿ ದೇಶದ ಹೆಸರನ್ನು ಬೆಳಗಿಸಿದ್ದೀರಿ. ದೇಶದಲ್ಲಿ ದ್ವೇಷ ಹರಡುವವರ ವಿರುದ್ಧ ಭಾರತ್ ಜೋಡೋ ಯಾತ್ರೆ ಮಾಡಲಾಗಿತ್ತು. ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣ ತೊಲಗಿಸುವವರೆಗೆ ಅಭಿವೃದ್ಧಿ ಸಾಧ್ಯವಿಲ್ಲ. ಬಿಜೆಪಿಯವರು ದರೋಡೆಯೆ ದಂಧೆಯಾಗಿ ಮಾಡಿಕೊಂಡಿದ್ದಾರೆ. 40 ಪರ್ಸೆಂಟ್ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಸರ್ಕಾರಕ್ಕೆ ಸೊಕ್ಕು ಬಂದಿದ್ದು ಜನರ ಪ್ರಶ್ನೆಗಳಿಗೆ ಉತ್ತರಿಸಲ್ಲ ಎಂದು ಕಿಡಿಕಾರಿದರು.

ಬಿಜೆಪಿ ಧಮ್ಕಿ ಹಾಕುವ ಸರ್ಕಾರ: ಸಂವಿಧಾನಾತ್ಮಕ ಸಂಸ್ಥೆಗಳನ್ನು ತಮ್ಮ ಜೇಬಲ್ಲಿವೆ ಎಂದು ಭಾವಿಸುತ್ತಾರೆ. ಪ್ರಜಾಪ್ರಭುತ್ವ ಹೀಗೆ ನಡೆಯುತ್ತಾ? ಇವರು ಧಮ್ಕಿ ಹಾಕುತ್ತಾರೆ. ಬಿಜೆಪಿ ಸೋತರೆ ಜಗಳವಾಗುತ್ತೆ, ಮೋದಿ ಆಶಿರ್ವಾದ ಸಿಗಲ್ಲಾ ಅಂತಾರೆ. ಕರ್ನಾಟಕದ ಜನರನ್ನು ಇಷ್ಟೊಂದು ಕೇವಲವಾಗಿ ಭಾವಿಸಬೇಡಿ. ಕರ್ನಾಟಕದ ಜನರು ಯಾರದೋ ಆಶಿರ್ವಾದ ಬಯಸಲ್ಲಾ. ಇಲ್ಲಿನ ಜನರಿಗೆ ತಮ್ಮ ಶಕ್ತಿ, ಪರಿಶ್ರಮದ ಮೇಲೆ ವಿಶ್ವಾಸವಿದೆ. ಕರ್ನಾಟಕದ ಜನರು ಯಾರಿಗೂ ಹೆದರಲ್ಲಾ. ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆ ಭರ್ಜರಿ ಆಫರ್: ಮತ ಚಲಾಯಿಸಿದವರಿಗೆ ಶೇ.50 ರಿಯಾಯಿತಿ

ಬಸವಣ್ಣ, ಕುವೆಂಪು ಭಾವನೆ ಕದಡುವ ಬಿಜೆಪಿ: ಈಗಾಗಲೇ ನಂದಿನಿಯನ್ನು ಲೂಟಿ ಮಾಡಿ ಹಾಳು ಮಾಡುತ್ತಿದ್ದಾರೆ. ಜನರು ತಮ್ಮ ಹಣೆಬರಹದ ನಿರ್ಧಾರ ತಾವೇ ಮಾಡುತ್ತಾರೆ. ಕರ್ನಾಟಕ ಬಸವೇಶ್ವರರ ಪುಣ್ಯ ಭೂಮಿಯಾಗಿದೆ. ಬಸವೇಶ್ವರರು ಎಲ್ಲರಿಗೂ ಸಮಾನತೆಯ ಸಂದೇಶ ಸಾರಿದ್ದರು. ಮಹಾನ್ ಕವಿ ಕುವೆಂಪು ಅವರ ಜನ್ಮ ಭೂಮಿ, ಅವರ ಭಾವನೆಯನ್ನು ಪ್ರತಿನಿತ್ಯ ಬಿಜೆಪಿ ಕದಡುತ್ತಿದೆ. ಬಿಜೆಪಿಯ ಸ್ವಾರ್ಥಕ್ಕಾಗಿ ಕರ್ನಾಟಕವನ್ನು ಬಲಿ ಕೊಡಬೇಡಿ. ಲೂಟಿ, ಕಮೀಷನ್ ಮುಕ್ತವಾದ ಸರ್ಕಾರಕ್ಕಾಗಿ ಕಾಂಗ್ರೆಸ್ ಮೇಲೆ ಭರವಸೆ ಇಡಿ. ರಾಜಸ್ಥಾನ, ಹಿಮಾಚಲ, ಛತ್ತೀಸಘಡದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಎಲ್ಲಾ ಭರವಸೆ ಈಡೇರಿಸಿದೆ. ಕರ್ನಾಟಕ ಯಾವುದೇ ಸನ್ನಿವೇಶದಲ್ಲೂ ನಿಮ್ಮ ವಿಶ್ವಾಸ ಉಳಿಸಿಕೊಳ್ಳಲಿದೆ. ಎಲ್ಲಾ ಭಾಗ್ಯಗಳನ್ನು ಈಡೇರಿಸುತ್ತೇವೆ. ಬಿಜೆಪಿಯಿಂದ ಕರ್ನಾಟಕದ ಲೂಟಿ ತಡೆಯಲು ಕಾಂಗ್ರೆಸ್‌ನ ಅಭ್ಯರ್ಥಿಗಳನ್ನು ಗೆಲ್ಲಿಸಿ. ಪ್ರಗತಿಯ ಗ್ಯಾರಂಟಿ ಕೊಡುವ ಸರ್ಕಾರ ತರಲು ಆಶಿರ್ವದಿಸಿ ಎಂದು ಸೋನಿಯಾಗಾಂಧಿ ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ