
ಬೆಂಗಳೂರು (ಸೆ.17) : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಆಯ್ಕೆ ಮಾಡಲು ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿ ಅವರಿಗೆ ಸಂಪೂರ್ಣ ಅಧಿಕಾರ ನೀಡಿ ರಾಜ್ಯ ಕೆಪಿಸಿಸಿ ಸದಸ್ಯರ ಸಭೆಯಲ್ಲಿ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷರ ಆಯ್ಕೆಯ ಅಧಿಕಾರವನ್ನು ಸೋನಿಯಾಗಾಂಧಿ ಅವರಿಗೆ ವರ್ಗಾಯಿಸಿದ್ದು, ಸದ್ಯದಲ್ಲೇ ಡಿ.ಕೆ. ಶಿವಕುಮಾರ್ ಅವರನ್ನೇ ಮತ್ತೊಂದು ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿ ನೇಮಿಸಿ ಸೋನಿಯಾಗಾಂಧಿ ಅವರು ಆದೇಶ ಹೊರಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಮಾಜಿ ಸಚಿವ ದೇಶಪಾಂಡೆ ವಿರುದ್ಧ ಡಿಕೆಶಿ ಬಹಿರಂಗ ಆಕ್ರೋಶ
ಬೆಂಗಳೂರಿನ(Bengaluru) ಅಂಬೇಡ್ಕರ್ ಭವನ(Ambedkar Bhavana)ದಲ್ಲಿ ಚುನಾವಣಾಧಿಕಾರಿ ಸುದರ್ಶನ್ ನಾಚಿಯಪ್ಪನ್(Sudarshan nachiappan) ಸಮ್ಮುಖದಲ್ಲಿ ನಡೆದ ಕೆಪಿಸಿಸಿ ಸದಸ್ಯರ ಸಭೆಯಲ್ಲಿ ಕೆಪಿಸಿಸಿ(KPCC) ಅಧ್ಯಕ್ಷರ ಆಯ್ಕೆಯ ಅಧಿಕಾರವನ್ನು ಎಐಸಿಸಿ ಅಧ್ಯಕ್ಷರಿಗೆ ನೀಡಲು ಡಿ.ಕೆ. ಶಿವಕುಮಾರ್(D.K.Shivakumar) ನಿರ್ಣಯ ಮಂಡಿಸಿದರು. ಸಭೆಯಲ್ಲಿ ಹಾಜರಿದ್ದ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah), ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್(B.K.Hariprasad), ಕೆಪಿಸಿಸಿ ಕಾರ್ಯಾಧ್ಯಕ್ಷರು ಸೇರಿದಂತೆ ಎಲ್ಲಾ ಕೆಪಿಸಿಸಿ ಸದಸ್ಯರು ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿದ್ದರಿಂದ, ಅವಿರೋಧವಾಗಿ ನಿರ್ಣಯ ಅಂಗೀಕಾರಗೊಂಡಿದೆ.
ಸರ್ವಾನುಮತದಿಂದ ಅಂಗೀಕಾರ:
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರ ನೇಮಕದ ಅಧಿಕಾರವನ್ನು ಸೋನಿಯಾಗಾಂಧಿ ಅವರಿಗೆ ವಹಿಸುವ ನಿರ್ಣಯವನ್ನು ಕೆಪಿಸಿಸಿ ಸದಸ್ಯರೆಲ್ಲರೂ ಸರ್ವಾನುಮತದಿಂದ ಅಂಗೀಕರಿಸಿದ್ದಾರೆ. ಇದರ ಅನ್ವಯ ಸದ್ಯದಲ್ಲೇ ಸೋನಿಯಾ ನೇಮಕ ಮಾಡಲಿದ್ದಾರೆ ಎಂದು ಹೇಳಿದರು.
ಅ.2ರಂದು ಬದನವಾಳು ಗ್ರಾಮದಲ್ಲಿ ರಾಹುಲ್‌ಗಾಂಧಿ ನೇತೃತ್ವದಲ್ಲಿ ಗಾಂಧಿ ಜಯಂತಿ: ಡಿಕೆಶಿ
ಇದಕ್ಕೂ ಮೊದಲು ಮಾತನಾಡಿದ ಡಿ.ಕೆ. ಶಿವಕುಮಾರ್, ‘ಪಕ್ಷದ ಅಧ್ಯಕ್ಷನಾಗಿ ನನ್ನ ಅಧಿಕಾರ ಅವಧಿ ಮುಕ್ತಾಯದ ಹಂತಕ್ಕೆ ಬಂದಿದೆ. ಹೀಗಾಗಿ ಚುನಾವಣೆ ಪ್ರಕ್ರಿಯೆ ನಡೆಯಬೇಕಾಗಿತ್ತು. ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಮುಂದಿನ ತಿಂಗಳು ನಿಗದಿಯಾಗಿದ್ದು, ಸೆ.20 ರೊಳಗಾಗಿ ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬಗ್ಗೆ ನಿರ್ಣಯ ಆಗಬೇಕಿತ್ತು. ಹೀಗಾಗಿ ನಿರ್ಧಾರ ಮಾಡಿ ಹೈಕಮಾಂಡ್‌ಗೆ ಕಳುಹಿಸಲಾಗಿದೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.