
ಮೈಸೂರು (ನ.05): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ. ಉಪ ಚುನಾವಣೆ ಫಲಿತಾಂಶದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
"
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿವೆ. ನನಗೆ ದೆಹಲಿಯಿಂದ ಬಂದಿರುವ ಮಾಹಿತಿ ಆಧಾರದ ಮೇಲೆ ಹೇಳುವುದಾದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ.
'40 ಸಾವಿರ ಮತ ಅಂತರದಲ್ಲಿ ಬಿಜೆಪಿ ಗೆಲ್ಲುತ್ತೆ : ಅತ್ತೆ-ಸೊಸೆ ಬೇಗ ಒಂದಾಗಬೇಕು' .
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವುದಿಲ್ಲ. ಇದಕ್ಕೆ ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದೂ ಕಾರಣ ಇರಬಹುದು. ಆದರೆ ಹಲವು ದಿನಗಳಿಂದ ಮುಖ್ಯಮಂತ್ರಿ ಬದಲಾಯಿಸುವ ಚಿಂತನೆಯಲ್ಲಿ ಬಿಜೆಪಿ ಇದೆ, ಈ ವಿಚಾರದಲ್ಲಿ ನಾನು ತುಂಬಾ ವಿಶ್ವಾಸದಿಂದಿದ್ದೇನೆ ಎಂದು ತಿಳಿಸಿದರು. ಇದೇ ವಿಚಾರವನ್ನು ಸಿದ್ದರಾಮಯ್ಯ ಟ್ವೀಟ್ ಸಹ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.