
ಹುಮನಾಬಾದ್(ಫೆ.04): ಶೀಘ್ರದಲ್ಲೇ ತಾ.ಪಂ 5 ಸದಸ್ಯರು ಸೇರಿದಂತೆ 500ಕ್ಕೂ ಹೆಚ್ಚು ಜನ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಾ.ಪಂ ಮಾಜಿ ಸದಸ್ಯ ಶ್ರೀಮಂತ ಪಾಟೀಲ್ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ 30 ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿದ್ದೇನೆ. ಆದರೆ ಮುಖಂಡರು, ಕಾರ್ಯಕರ್ತರಿಗೆ ಸೂಕ್ತ ಸ್ಪಂದನೆ ನೀಡುತ್ತಿಲ್ಲ. ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರನ್ನು ಕಡಗಣನೆ ಮಾಡಲಾಗುತ್ತಿದೆ. ಆದ್ದರಿಂದ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದೇನೆ.
ಮುಂಬರುವ ದಿನಗಳಲ್ಲಿ ಸುಮಾರು 500ಕ್ಕೂ ಅಧಿಕ ಕಾರ್ಯಕರ್ತರು ಕೂಡ ಪಕ್ಷ ಸೇರ್ಪಡೆಯಾಗಲಿದ್ದಾರೆ. ಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಪಾಟೀಲ್ ಅವರನ್ನು ಅಧಿಕ ಮತಗಳಿಂದ ಗೆಲ್ಲಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Bidar: ಸಿ.ಟಿ.ರವಿಗೆ ಜೆಡಿಎಸ್ ಟಿಕೆಟ್ ಆಫರ್ ಕೊಟ್ಟ ಬಂಡೆಪ್ಪ ಖಾಶೆಂಪೂರ್
ಮಾಜಿ ತಾ.ಪಂ ಸದಸ್ಯ ಬಾಬು ಟೈಗರ್ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಸ್ಥಳೀಯ ಮುಖಂಡರು ತಮ್ಮ ಸ್ವಂತ ಲಾಭಕ್ಕಾಗಿ ಕಾರ್ಯಕರ್ತರನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ, ಹೊರತಾಗಿ ಸಾಮಾನ್ಯ ಕಾರ್ಯಕರ್ತರಿಗೆ ಯಾವುದೇ ಸ್ಥಾನಮಾನ ಇಲ್ಲ. ಬಿಜೆಪಿ ಕಾರ್ಯಕರ್ತರ ಪಕ್ಷ ಎಂದು ಕೇವಲ ನಾಮಕೆವಾಸ್ತೆ ಇದೆ ಎನ್ನುವ ಪರಿಸ್ಥಿತಿ ಎದುರಾಗಿದೆ.
ರಾಜ್ಯದಲ್ಲಿ ಕೂಡ ಬಡವರಿಗೆ ಒಂದು ನ್ಯಾಯ, ಶ್ರೀಮಂತರಿಗೆ ಒಂದು ನ್ಯಾಯ ನೀಡಲಾಗುತ್ತಿದೆ. ಇದರಿಂದ ಬಿಜೆಪಿ ಸಿರಿವಂತರ ಪಕ್ಷವಾಗಿದೆ. ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಆರೋಪಗಳು ಇಲ್ಲದೆ ಪಾರದರ್ಶಕವಾಗಿ ಹೊರಬಂದಿದ್ದಾರೆ. ಅವರು, ರಾಜ್ಯದ ಬಡವರಿಗೆ ಅನೇಕ ಯೋಜನೆಗಳನ್ನು ನೀಡಿರುವುದು ಇಲ್ಲಿ ಸ್ಮರಿಸಬೇಕಾಗುತ್ತದೆ ಎಂದು ತಿಳಿಸಿದರು. ದಲಿತ ಸಂಘಟನೆಯ ಮುಖಂಡ ಗೌತಮ ಚವ್ಹಾಣ, ಅನೀಲ ದೊಡ್ಡಿ, ಶ್ರೀಮಂತ ಸೇರಿದಂತೆ ಅನೇಕರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.