Council Election karnataka : ಬಿಎಸ್‌ವೈ- ಎಚ್‌ಡಿಕೆ ಜತೆ ಚರ್ಚಿಸಿ ಹೊಸ ನಿರ್ಧಾರ

Kannadaprabha News   | Asianet News
Published : Dec 02, 2021, 07:00 AM IST
Council Election karnataka :   ಬಿಎಸ್‌ವೈ- ಎಚ್‌ಡಿಕೆ ಜತೆ ಚರ್ಚಿಸಿ ಹೊಸ ನಿರ್ಧಾರ

ಸಾರಾಂಶ

ವಿಧಾನಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌- ಬಿಜೆಪಿ ಮಧ್ಯೆ ಮೈತ್ರಿ ವಿಷಯ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಅವರು ಚರ್ಚಿಸಿ ಅಂತಿಮ ತೀರ್ಮಾನ

 ಹುಬ್ಬಳ್ಳಿ (ಡಿ.02): ವಿಧಾನಪರಿಷತ್‌ ಚುನಾವಣೆಯಲ್ಲಿ(MLC Election) ಜೆಡಿಎಸ್‌- ಬಿಜೆಪಿ(JDS - BJP) ಮಧ್ಯೆ ಮೈತ್ರಿ ವಿಷಯವಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ (BS Yediyurappa) ಹಾಗೂ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಸ್ಪಷ್ಟಪಡಿಸಿದರು. ಬುಧವಾರ ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡ (HD Devegowda) ಹಾಗೂ ಪ್ರಧಾನಿ ನರೇಂದ್ರ ಮೋದಿ ನಿನ್ನೆಯಷ್ಟೇ ಚರ್ಚೆ ನಡೆಸಿದ್ದಾರೆ. ಹಲವಾರು ವಿಷಯಗಳ ಕುರಿತು ಚರ್ಚಿಸಿದ್ದಾರೆ. ಅದರಲ್ಲಿ ಸ್ಥಳೀಯವಾಗಿ ಮೈತ್ರಿ ಮಾಡಿಕೊಳ್ಳುವುದು ಸೇರಿದೆ. ಈ ಬಗ್ಗೆ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಕಿರಿಯ ವೈದ್ಯರಿಗೆ ಶಿಷ್ಯವೇತನ:  ಕಿರಿಯ ವೈದ್ಯರು (Doctors) ರಾಜ್ಯಾದ್ಯಂತ ಮುಷ್ಕರ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಈಗಾಗಲೇ ಹಣವನ್ನು ಬಿಡುಗಡೆ ಮಾಡಲಾಗಿದೆ. ಕೆಲವು ಕಾಲೇಜುಗಳಲ್ಲಿ ದಾಖಲೆಗಳಿಲ್ಲದೆ ಪಾವತಿಗೆ ತೊಂದರೆಯಾಗಿದೆ. ದಾಖಲೆಗಳಿದ್ದವರಿಗೆ ಕೋವಿಡ್‌-19ರ ವಿಶೇಷ ಭತ್ಯೆ ಹಾಗೂ ಶಿಷ್ಯವೇತನ ಪಾವತಿಸಲು ಈಗಾಗಲೇ ಸೂಚಿಸಲಾಗಿದೆ. 2- 3 ದಿನಗಳಲ್ಲಿ ಎಲ್ಲರಿಗೂ ಹಣವನ್ನು ಜಮೆಯಾಗಲಿದೆ ಎಂದರು.

ಮೂಲ ಸೌಕರ್ಯ:  ಹೊಸ ತಾಲೂಕುಗಳಿಗೆ ಮೂಲ ಸೌಲಭ್ಯ ನೀಡಿಲ್ಲವೆಂದು ಹೈಕೋರ್ಟ್‌ (High Court) ಸರ್ಕಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕುರಿತ ಪ್ರಶ್ನೆಗೆ ಉತ್ತರಿಸಿ, ಕೋವಿಡ್‌ (Covid) ಕಾರಣದಿಂದ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಕನಿಷ್ಠ ಸೌಲಭ್ಯಗಳನ್ನು ಹೊಸ ತಾಲೂಕುಗಳಿಗೆ ಒದಗಿಸಲಾಗುವುದು ಎಂದರು.

ಗುತ್ತಿಗೆಗಾರರ ಕಮಿಷನ್‌ ವಿಚಾರದಲ್ಲಿ ತನಿಖೆಯನ್ನು ಪ್ರಧಾನ ಕಾರ್ಯದರ್ಶಿಗಳಿಗೆ ವಹಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಟೆಂಡರ್‌ಗೆ ಅನುಮತಿ ನೀಡುವ ಎಂಜಿನಿಯರ್‌ಗಳು ಬೇರೆ. ಪ್ರಧಾನ ಕಾರ್ಯದರ್ಶಿಗಳು ಮೇಲ್ಮನವಿ ಪ್ರಾಧಿಕಾರವಾಗಿರುವುದರಿಂದ ಅವರಿಗೆ ವಹಿಸಲಾಗಿದೆ ಎಂದರು.

ಬಿಜೆಪಿ ಅಭ್ಯರ್ಥಿ ಆಯ್ಕೆ ನಿಶ್ಚಿತ:  ವಿಧಾನಪರಿಷತ್‌ ಚುನಾವಣೆಯಲ್ಲಿ (MLC Election) ಹಾವೇರಿಯಿಂದಲೇ ಬಿಜೆಪಿ (BJP) ಬಂಡಾಯ ಅಭ್ಯರ್ಥಿ ಕಣಕ್ಕಿಳಿದಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಲ್ಲಿಕಾರ್ಜುನ ಹಾವೇರಿ ಒಮ್ಮೆ ಬಿಜೆಪಿ ಎನ್ನುತ್ತಾರೆ. ಹಿಂದೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಎಪಿಎಂಸಿ ಅಧ್ಯಕ್ಷರಾಗಿದ್ದರು. ಅವರಿಗೆ ಸ್ಥಿರವಾದ ನಿಲುವಿಲ್ಲ. ಆದರೆ ಅವರ ಸ್ಪರ್ಧೆಯಿಂದ ಯಾವ ಪರಿಣಾಮವೂ ಉಂಟಾಗುವುದಿಲ್ಲ. ನಮ್ಮ ಪಕ್ಷದ ಅಭ್ಯರ್ಥಿ ಪ್ರದೀಪ ಶೆಟ್ಟರ್‌ ಮೊದಲ ಪ್ರಾಶಸ್ತ್ಯದ ಮತಗಳಿಂದ ಆಯ್ಕೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈತ್ರಿ ಮೇಲೆ ಕಣ್ಣು: 

ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವ ಕುರಿತು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಅವರು ಇನ್ನೆರಡು ದಿನದಲ್ಲಿ ಪ್ರತಿಕ್ರಿಯೆ ನೀಡಬಹುದು. ಕಾದು ನೋಡೋಣ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ(BS Yediyurappa) ಹೇಳಿದ್ದಾರೆ. 

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನ ಪರಿಷತ್‌ ಚುನಾವಣೆಯಲ್ಲಿ(Vidhan Parishat Election) ಜೆಡಿಎಸ್‌ನೊಂದಿಗೆ(JDS) ಹೊಂದಾಣಿಕೆ ಮಾಡಿಕೊಳ್ಳುವ ಕುರಿತು ನಾನೇ ಪ್ರಸ್ತಾಪ ಮಾಡಿದ್ದೇನೆ. ಕುಮಾರಸ್ವಾಮಿ(HD Kumaraswamy) ಅವರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡೋಣ ಎಂದರು.

ಪರಿಷತ್‌ ಚುನಾವಣೆಯಲ್ಲಿ ಬಜೆಪಿ(BJP) ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸಲಿದೆ. ಅದರಲ್ಲಿ ಅನುಮಾನ ಬೇಡ. 20 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಅದರಲ್ಲಿ ಕನಿಷ್ಠ 15 ಸ್ಥಾನದಲ್ಲಿ ನಾವು ಗೆಲುವು ಸಾಧಿಸುವುದು ನಿಶ್ಚಿತ. ಪ್ರಚಾರಕ್ಕೆ ಹೋದ ಕಡೆಯಲ್ಲೆಲ್ಲಾ ಬಿಜೆಪಿ ಪರವಾದ ಅಭಿಪ್ರಾಯ ಕೇಳಿಬರುತ್ತಿದೆ. ಅಲ್ಲದೆ, ಸರ್ಕಾರದ(Government of Karnataka) ಅಭಿವೃದ್ಧಿ ಕೆಲಸವನ್ನು ಪ್ರತಿಯೊಬ್ಬರು ಮೆಚ್ಚಿಕೊಂಡಿದ್ದಾರೆ. ಇದೆಲ್ಲವೂ ನಮಗೆ ವರದಾನವಾಗಲಿದೆ ಎಂದರು.

ಬಿಜೆಪಿಗೆ ಬೆಂಬಲ ಜೆಡಿಎಸ್‌ಗೆ ಬಿಟ್ಟದ್ದು: ಡಿಕೆಶಿ

‘ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಆಯಾ ಪಕ್ಷಗಳ ತತ್ವ, ಸಿದ್ಧಾಂತದ ಪ್ರಕಾರ ಅವರು ಯಾರಿಗೆ ಬೆಂಬಲ ನೀಡಬೇಕು ಎಂಬುದು ಅವರಿಗೆ ಬಿಟ್ಟವಿಚಾರ. ಅವರು ಏನಾದರೂ ಮಾಡಿಕೊಳ್ಳಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌(DK Shivakumar) ಹೇಳಿದ್ದಾರೆ.

ಬಿಜೆಪಿಯವರು ನಮ್ಮ ಬೆಂಬಲ ಕೇಳಿದ್ದಾರೆ ಎಂದಿರುವ ಜೆಡಿಎಸ್‌ ನಾಯಕ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅದು ಆಯಾ ಪಕ್ಷಗಳ ತತ್ವ, ಸಿದ್ಧಾಂತ. ಯಾರಿಗೆ ಬೆಂಬಲ ನೀಡಬೇಕು ಎಂಬುದು ಅವರಿಗೇ ಬಿಟ್ಟಿದ್ದು. ಅವರು ಏನಾದರೂ ಮಾಡಿಕೊಳ್ಳಲಿ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌
ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ಕೊಡಿ ಎಂದು ಸಮಯ ಬಂದಾಗ ಕೇಳುವೆ: ಸಚಿವ ಮಹದೇವಪ್ಪ