ಸದನದ ಗೌರವ ಕಾಪಾಡಲು ಕೈಜೋಡಿಸಿ: ಬಸವರಾಜ ಹೊರಟ್ಟಿ

Kannadaprabha News   | Asianet News
Published : Feb 24, 2021, 08:11 AM IST
ಸದನದ ಗೌರವ ಕಾಪಾಡಲು ಕೈಜೋಡಿಸಿ: ಬಸವರಾಜ ಹೊರಟ್ಟಿ

ಸಾರಾಂಶ

ಸದನ ನಿಯಂತ್ರಣಕ್ಕೆ ಅಭಿಪ್ರಾಯ ತಿಳಿಸಲು ಮೇಲ್ಮನೆ ಸದಸ್ಯರಿಗೆ ಪತ್ರ| ಶಾಸನಸಭೆಯ ಕಾರ್ಯಕಲಾಪಗಳಲ್ಲಿ ಸದಸ್ಯರು ಹೆಚ್ಚು ಹೆಚ್ಚು ಚರ್ಚೆಯಲ್ಲಿ ಪಾಲ್ಗೊಳ್ಳಬೇಕು| ಕಲಾಪಗಳಿಗೆ ಅಡ್ಡಿಪಡಿಸುವುದು, ಧಿಕ್ಕಾರಗಳನ್ನು ಕೂಗುವುದು ಸದನದ ಗೌರವಕ್ಕೆ ತಕ್ಕದ್ದಲ್ಲ: ಹೊರಟ್ಟಿ| 

ಬೆಂಗಳೂರು(ಫೆ.24): ಸದನದ ನಿಯಮಗಳು ಮತ್ತು ಸತ್ಸಂಪ್ರದಾಯಗಳಿಗೆ ಚ್ಯುತಿ ಬಾರದಂತೆ ಮುನ್ನಡೆಸಿಕೊಂಡು ಹೋಗಲು ಸದನ ನಿಯಂತ್ರಣ, ಸದಸ್ಯರ ಪಾತ್ರ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಭಿಪ್ರಾಯಗಳನ್ನು ಮುಕ್ತವಾಗಿ ತಿಳಿಸಬೇಕು ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದಸ್ಯರಿಗೆ ಪತ್ರ ಬರೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಸದನದ ಘನತೆ ಮತ್ತು ಗೌರವವನ್ನು ಹೆಚ್ಚಿಸಿಕೊಂಡು ಹೋಗುವ ನಿಟ್ಟಿನಲ್ಲಿ ಈ ಬಾರಿ ಕೆಲವು ಅಮೂಲಾಗ್ರ ಬದಲಾವಣೆ ಮಾಡುವ ಕುರಿತು ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಮುಕ್ತ ಮನಸ್ಸಿನಿಂದ ಹಂಚಿಕೊಳ್ಳಬೇಕು. ಇತ್ತೀಚೆಗಿನ ದಿನದಲ್ಲಿ ಪ್ರಶ್ನೋತ್ತರ ಅವಧಿ ಒಂದು ಗಂಟೆಯೊಳಗೆ ಮುಕ್ತಾಯಗೊಳ್ಳದೆ 2-3 ಗಂಟೆಗಳ ಕಾಲ ನಡೆಯುತ್ತಿರುವ ಕಾರಣ ಬೇರೆ ಕಲಾಪಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸದಸ್ಯರು ತಮ್ಮ ಸಲಹೆ, ಅಭಿಪ್ರಾಯಗಳನ್ನು ತಿಳಿಸಬೇಕು ಎಂದು ಉಲ್ಲೇಖ ಮಾಡಲು ಉದ್ದೇಶಿಸಿದ್ದಾರೆ.

ಸಭಾಪತಿಯಾಗುತ್ತಿದ್ದಂತೆಯೇ ಮಹತ್ವದ ರೂಲ್ಸ್ ಜಾರಿಗೆ ತರಲು ಮುಂದಾದ ಹೊರಟ್ಟಿ

ಶಾಸನಸಭೆಯ ಕಾರ್ಯಕಲಾಪಗಳಲ್ಲಿ ಸದಸ್ಯರು ಹೆಚ್ಚು ಹೆಚ್ಚು ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂಬುದು ನನ್ನ ಅನಿಸಿಕೆ. ಇತ್ತೀಚೆಗೆ ವಿಧೇಯಕಗಳ ಪರ್ಯಾಲೋಚನೆ ಮತ್ತು ಅಂಗೀಕಾರಕ್ಕಾಗಿ ಚರ್ಚೆ ನಡೆಯುವ ವೇಳೆ ಸಾಕಷ್ಟು ಗೊಂದಲ ಉಂಟಾಗುವ ಪ್ರಸಂಗಗಳಿವೆ.

ಜನಹಿತಕ್ಕಾಗಿ ರೂಪಿಸಲ್ಪಡುವ ಕಾನೂನುಗಳ ಆಳವಾದ ಅಧ್ಯಯನ ಮತ್ತು ಅದರ ಸಾಧಕ ಬಾಧಕಗಳ ಬಗ್ಗೆ ಸದಸ್ಯರು ಪಕ್ಷಾತೀತವಾಗಿ ಬೆಳಕು ಚೆಲ್ಲುವಂತಹ ಚರ್ಚೆಗಳಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಎಲ್ಲ ಸದಸ್ಯರ ಹಕ್ಕು. ಆದರೆ, ಅದನ್ನೇ ಅಸ್ತ್ರ ಮಾಡಿಕೊಂಡು ಕಲಾಪಗಳಿಗೆ ಅಡ್ಡಿಪಡಿಸುವುದು, ಧಿಕ್ಕಾರಗಳನ್ನು ಕೂಗುವುದು ಸದನದ ಗೌರವಕ್ಕೆ ತಕ್ಕದ್ದಲ್ಲ. ಸದನದ ಗೌರವ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸದಸ್ಯರು ಕೈ ಜೋಡಿಸಬೇಕು ಎಂದು ಮನವಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ - ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ