CM ಬಿಎಸ್ ಯಡಿಯೂರಪ್ಪ ಹಾಗು ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪ ದೂರು ವಜಾ!

By Suvarna NewsFirst Published Jul 8, 2021, 7:31 PM IST
Highlights
  • ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್
  • ಬಿಎಸ್‌ವೈ ಹಾಗೂ ಕುಟುಂಬದ ಮೇಲಿನ ಭ್ರಷ್ಟಾಚಾರ ಆರೋಪ ಅರ್ಜಿ ವಜಾ
  • ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

ಬೆಂಗಳೂರು(ಜು.08): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗು ತಣ್ಣಾದ ಬಳಿಕ ನಿರಾಳರಾಗಿದ್ದ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಇದೀಗ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಸಲ್ಲಿಕೆಯಾಗಿದ್ದ ಭ್ರಷ್ಟಾಚಾರ ಆರೋಪ ದೂರನ್ನು ಜನಪ್ರತನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ.

ಸರ್ಕಾರಿ‌‌ ನೌಕರರ ವರ್ಗಾವಣೆಗೆ ಸಿಎಂ ಗ್ರೀನ್ ಸಿಗ್ನಲ್: ಕೊನೆಗೂ ಸಚಿವರಿಗೆ ಸಿಕ್ತು ಅಧಿಕಾರ

ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬಸ್ಥರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಈ ಕುರಿತು ತನಿಖೆಗೆ ಆದೇಶಿಸುವಂತೆ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ ಅರ್ಜಿ ಸಲ್ಲಿಸಿದ್ದರು. ಆದರೆ ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ನೀಡದ ಹಿನ್ನಲೆಯಲ್ಲಿ ಖಾಸಗಿ ದೂರನ್ನು ವಜಾಗೊಳಿಸುವುದಾಗಿ ವಿಶೇಷ ನ್ಯಾಯಾಲಯ ಹೇಳಿದೆ.
 
ಯಡಿಯೂರಪ್ಪ ಮತ್ತು ಇತರ 8 ಜನರ ವಿರುದ್ಧದ ಸಲ್ಲಿಕೆಯಾಗಿರುವ ಭ್ರಷ್ಟಾಚಾರ ಆರೋಪ ದೂರಿಗೆ ರಾಜ್ಯಪಾಲರ ಅನುಮೋದನೆಯ ಇಲ್ಲದ ಕಾರಣ ದೂರನ್ನು ನಿರ್ವಹಿಸಲಾಗುವುದಿಲ್ಲ ಎಂದು ಕೋರ್ಟ್ ಹೇಳಿದೆ. ಯಡಿಯೂರಪ್ಪ ಹಾಗೂ ಅವರ ಕುಟುಂಬದ 9 ಸದಸ್ಯರು BDA ಪ್ರಾಧಿಕಾರದ ವಸತಿ ಯೋಜನೆಗಾಗಿ ಖಾಸಗಿ ಕಂಪನಿಗಳ ಜೊತೆಗಿನ ಒಪ್ಪಂದದಲ್ಲಿ  ಲಂಚ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಮತ್ತೆ ಲಾಕ್‌ಡೌನ್ ಎಚ್ಚರಿಕೆ ಕೊಟ್ಟ ಸಿಎಂ ಯಡಿಯೂರಪ್ಪ

ಯಡಿಯೂರಪ್ಪ ಹಾಗೂ ಅವರ ಕುಟುಂಬ ಕೋಟ್ಯಾಂತರ ರೂಪಾಯಿ ಅಕ್ರಮ ಆದಾಯಗಳಿಸಿದ್ದಾರೆ. ಈ ಆದಾಯವನ್ನು ಅಕ್ರಮವಾಗಿ ವರ್ಗಾಣವೆ ಮಾಡಲಾಗಿದೆ. ಯಡಿಯೂರಪ್ಪ ಅವರ ಕುಟುಂಬ ಸದಸ್ಯರ ಒಡೆತನದ ಕಂಪನಿಗಳೆ ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು. ಇದೀಗ ಈ ದೂರನ್ನು ವಜಾಗೊಳಿಸಲಾಗಿದೆ.

click me!