
ಬೆಂಗಳೂರು, (ಡಿ.28): ಒಂದಿಲ್ಲೊಂದು ವಿವಾದಾತ್ಮ ಹೇಳಿಕೆ ನೀಡಿ ಸುದ್ದಿಯಾಗುತ್ತಿದ್ದ ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಅನಂತ್ ಕುಮಾರ್ ಹೆಗಡೆ ವಿರುದ್ಧದ ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಕ್ರಿಮಿನಲ್ ಕೇಸ್ನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.
ಬಾಯಿ ಬೊಂಬಾಯಿ ಸಂಸದ ಹೆಗಡೆಗೆ ದಿಲ್ಲಿಯಿಂದ ಬಂತು ನೋಟಿಸ್
ಇಸ್ಲಾಂ ಧರ್ಮ ಜಗತ್ತಿಗೇ ಒಂದು ಬಾಂಬ್ ಎಂದು ಅನಂತ್ ಕುಮಾರ್ ಹೆಗಡೆ ಅವರು 2016ರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಮುರಾದ್ ಹುಸೇನ್ ದೂರು ನೀಡಿದ್ದರು. ಅನಂತ್ ಹೆಗಡೆ ಪರ ವಕೀಲ ಸಂತೋಷ್ ನಗರಾಳೆ ವಾದ ಮಂಡಿಸಿದ್ದರು.
ಉದ್ದೇಶ ಪೂರ್ವಕವಾಗಿ ಹೇಳಿಕೆ ನೀಡಿಲ್ಲ, ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶವೂ ಇರಲಿಲ್ಲ ಎಂದು ನ್ಯಾಯಾಲಯದ ಎದುರು ಹೇಳಿದ್ದರು.
ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್. ಇನವಳ್ಳಿ ಕೇಸ್‌ನಿಂದ ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅನಂತ್ ಕುಮಾರ್ ಹೆಗಡೆ ಆರೋಪ ಮುಕ್ತರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.