ಶೃಂಗೇರಿ ಶಾಸಕ ರಾಜೇಗೌಡರಿಗೆ ಬಂಡಾಯದ ಬಿಸಿ: ಮಹಮ್ಮದ್‌ ಇಲಿಯಾಸ್‌ ಬಂಡಾಯ ಸ್ಪರ್ಧೆ

Published : Mar 30, 2023, 11:24 PM IST
ಶೃಂಗೇರಿ ಶಾಸಕ ರಾಜೇಗೌಡರಿಗೆ ಬಂಡಾಯದ ಬಿಸಿ: ಮಹಮ್ಮದ್‌ ಇಲಿಯಾಸ್‌ ಬಂಡಾಯ ಸ್ಪರ್ಧೆ

ಸಾರಾಂಶ

ಕಾಫಿನಾಡು ಚಿಕ್ಕಮಗಳೂರಿನ ಏಕೈಕ ಕಾಂಗ್ರೆಸ್ ಶಾಸಕನವಿರುದ್ಧ ಕೈ ಪಾಳಯದಲ್ಲಿ ಬಂಡಾಯದ ಬಾವುಟ ಹಾರಿಸಲಾಗಿದೆ. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡರಿಗೆ ಬಂಡಾಯದ ಬಿಸಿ ತಟ್ಟಲಾರಂಭಿಸಿದೆ.

ವರದಿ :ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ 
ಚಿಕ್ಕಮಗಳೂರು (ಮಾ.30): ಕಾಫಿನಾಡು ಚಿಕ್ಕಮಗಳೂರಿನ ಏಕೈಕ ಕಾಂಗ್ರೆಸ್ ಶಾಸಕನವಿರುದ್ಧ ಕೈ ಪಾಳಯದಲ್ಲಿ ಬಂಡಾಯದ ಬಾವುಟ ಹಾರಿಸಲಾಗಿದೆ. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡರಿಗೆ ಬಂಡಾಯದ ಬಿಸಿ ತಟ್ಟಲಾರಂಭಿಸಿದೆ.

ಒಂದು ಲಕ್ಷ ಖರ್ಚು ಮಾಡಿದರೆ ಅದರಿಂದ 100 ಜನಕ್ಕೆ ನೀರು ಕೊಡಬಹುದು. ಅದನ್ನ ಬಿಟ್ಟು ಶಾಸಕರು ಯಾರ್ದೋ ತೋಟದಲ್ಲಿ 35 ಲಕ್ಷ ರೂಪಾಯಿ ಖರ್ಚು ಮಾಡಿ ಚೆಕ್ ಡ್ಯಾಂ ನಿರ್ಮಿಸುತ್ತಾರೆ. ಶಾಸಕರಿಂದ ಶೃಂಗೇರಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದ ಮೊಹಮ್ಮದ್ ಇಲಿಯಾಸ್ ಕಾಂಗ್ರೆಸ್‌ನಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ. 

Karnataka election 2023: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಪ್ರಕಟ: 4 ಕ್ಷೇತ್ರ ನಿಗೂಢ!

ಶೃಂಗೇರಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಹಿನ್ನಡೆ :  ಶೃಂಗೇರಿ ಹಾಲಿ ಶಾಸಕ ಟಿ.ಡಿ. ರಾಜೇಗೌಡರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿಯಲು ಅವರು ಸಿದ್ಧತೆ ನಡೆಸಿದ್ದಾರೆ.  ಶೃಂಗೇರಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಾಂಗ್ರೆಸ್ ಮುಖಂಡ ಇಲಿಯಾಸ್ ಸ್ಪರ್ಧೆ ನಡೆಸಲು ಎಲ್ಲ ತಯಾರಿ ನಡೆಸಿದ್ದಾರೆ. ಕಾಂಗ್ರೆಸ್‌ ಪಕ್ಷದ ಮುಖಂಡರು ಹಾಗೂ ಹಾಲಿ ಶಾಸಕರ ನಡೆಯಿಂದ ಬೇಸತ್ತು ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಸ್ವತಃ ಇಲಿಯಾಸ್‌ ಘೋಷಣೆ ಮಾಡಿದ್ದಾರೆ. ಇನ್ನು ಶಾಸಕ ರಾಜೇಗೌಡರು ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ: ಖಾಂಡ್ಯ ಹೋಬಳಿಯ ದೇವದಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋರಿಗಂಡಿಯ ಕಾಂಗ್ರೆಸ್ ಕಾರ್ಯಕರ್ತ ಮೊಹಮ್ಮದ್ ಇಲಿಯಾಸ್ ಸುದ್ದಿಗೋಷ್ಠಿ ನಡೆಸಿ ಬಂಡಾಯದ ಬಾವಟ ಹಾರಿಸಿದ್ದಾರೆ. ಶೃಂಗೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ ನಿಷ್ಠಾವಂತರಾಗಿ ಸೇವೆ ಸಲ್ಲಿಸಿದ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ. ಅಷ್ಟೆ ಅಲ್ಲದೆ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಹಿನ್ನಡೆಯಾಗಿದೆ. ಈ ಬಗ್ಗೆ ಹಲವಾರು ಬಾರಿ ಶಾಸಕರಿಗೆ ಹಾಗೂ ಪಕ್ಷದ ಹಿರಿಯ ನಾಯಕರಿಗೆ ಮನವರಿಕೆ ಮಾಡಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪ ಮಾಡಿದರು.

ಪ್ರತಿ ಹಳ್ಳಿಯಲ್ಲೂ ಸಭೆ:  ಈ ಹಿನ್ನಲೆಯಲ್ಲಿ ಕಾಂಗ್ರೆಸ್‌ನ ಮನನೊಂದ ಕಾರ್ಯಕರ್ತರೆಲ್ಲರೂ ಸಭೆ ಸೇರಿ ಬಂಡಾಯವಾಗಿ ಸ್ಪರ್ಧೆ ಮಾಡುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಾರಿಯ ಶೃಂಗೇರಿ ಕ್ಷೇತೆಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಲಾಗುವುದು. ಜೊತೆಗೆ, ಶೃಂಗೇರಿ ಕ್ಷೇತ್ರದ ಹಳ್ಳಿಗಳ ಪ್ರತಿಯೊಬ್ಬರ ಮನೆಗೂ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳ ಸಮಸ್ಯೆ ಬಗ್ಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಹರೀಶ, ಸಂತೋಷ್, ಕಿರಣ್, ಹರೀಶ್, ಆರವಿಂದ ಮತ್ತಿತರರು ಇದ್ದರು.

ಮಲೆನಾಡಿನಲ್ಲಿ ನಿಲ್ಲದ ಬಹಿಷ್ಕಾರದ ಕೂಗು, ಶಾಸಕ ಟಿ ಡಿ ರಾಜೇಗೌಡ ವಿರುದ್ದ ಆಕ್ರೋಶ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ಕ್ಷೇತ್ರದ ಟಿಕೆಟ್‌ ಘೋಷಣೆ:  ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ 124 ಅಭ್ಯರ್ಥಿಗಳ ಮೊದಲ ಪಟ್ಟಿಬಿಡುಗಡೆ ಮಾಡಿದೆ. ಜಿಲ್ಲೆಯ ಶೃಂಗೇರಿ ಕ್ಷೇತ್ರದಿಂದ ಹಾಲಿ ಶಾಸಕ ಟಿ.ಡಿ.ರಾಜೇಗೌಡ ಅವರ ಹೆಸರು ನಿರೀಕ್ಷೆಯಂತೆ ಮೊದಲ ಪಟ್ಟಿಯಲ್ಲಿಯೇ ಫೈನಲ್‌ ಮಾಡಲಾಗಿದೆ. ಇನ್ನುಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕುತೂಹಲ ವ್ಯಕ್ತವಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿ(Congress candidate) ಹೆಸರು ಪ್ರಕಟವಾದ ನಂತರದಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರ(Shringeri assembly constituency)ದಲ್ಲಿ ಚುನಾವಣಾ ಅಖಾಡದ ಸ್ಪಷ್ಟಚಿತ್ರಣ ಹೊರ ಬಿದ್ದಿದೆ. ಜೆಡಿಎಸ್‌ನಿಂದ ಸುಧಾಕರ ಶೆಟ್ಟಿಸ್ಪರ್ಧೆ ಮಾಡಲು ಈಗಾಗಲೇ ಪಕ್ಷ ಹೆಸರು ಘೋಷಣೆ ಮಾಡಿದೆ. ಬಿಜೆಪಿಯಿಂದ ಮಾಜಿ ಸಚಿವ ಡಿ.ಎನ್‌.ಜೀವರಾಜ್‌ ಅವರು ಸ್ಪರ್ಧೆ ಮಾಡಲಿದ್ದಾರೆ. ಅಂದರೆ ಮೂರು ಪಕ್ಷಗಳ ಅಭ್ಯರ್ಥಿಗಳು ಬಹುತೇಕ ಅಂತಿಮಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ