
ವರದಿ- ಜಗದೀಶ್ ಏಷ್ಯಾನೆಟ್ ಸುವರ್ಣನ್ಯೂಸ್
ರಾಮನಗರ (ಡಿ.15): ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇದ್ದು, ಮೂರು ಪಕ್ಷಗಳು ತನ್ನದೇ ಆದ ಸ್ಟಾರ್ಟಜಿ ಮಾಡ್ತಿದ್ದಾರೆ. ಆ ನಿಟ್ಟಿನಲ್ಲಿ ಮಾಜಿ ಸಿಎಂ ಹೆಚ್ ಡಿಕೆ ಪಂಚರತ್ನ ರಥಯಾತ್ರೆ ಮೂಲಕ ರಾಜ್ಯ ಪ್ರವಾಸಕ್ಕೆ ತೆರಳಲಿದ್ದು, ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಸ್ವಕ್ಷೇತ್ರದ ಜನರಿಗೆ ಸಂದೇಶ ಕೊಡಲು ತಿರುಪತಿ ಮಾದರಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಚುನಾವಣಾ ರಣಕಹಳೆ ಮೊಳಗಿಸಲು ಹೊರಟಿದ್ದಾರೆ.
ಜಗಮಗಿಸುತ್ತಿರುವ ವಿದ್ಯುತ್ ದೀಪಾಲಂಕಾರ, ಎಚ್.ಡಿ. ಕುಮಾರಸ್ವಾಮಿ ಅವರಿಗೆಗೆ ಶುಭ ಕೋರಿರುವ ಬ್ಯಾನರ್ ಗಳು ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ರಾಮನಗರ ನಗರ ಪ್ರದೇಶದಲ್ಲಿ. ಸಾರ್ವತ್ರಿಕ ಚುನಾವಣೆಗೆ ಇನ್ನೂ ಕೆಲವೇ ಕೆಲವು ತಿಂಗಳು ಬಾಕಿ ಇದ್ದು, ಈ ಭಾರಿ ಶತಾಯಗತಾಯ ಅಧಿಕ್ಕಾರಕ್ಕೇರಲು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪಂಚರತ್ನ ಯೋಜನೆಯ ರಥಯಾತ್ರೆ ಮೂಲಕ ರಾಜ್ಯ ಪ್ರವಾಸ ಹೊರಟಿದ್ದಾರೆ. ಈಗಾಗಲೇ ಮೊದಲ ಹಂತದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು ಭಾಗಗಳಲ್ಲಿ ರಥಯಾತ್ರೆ ಮುಗಿಸಿರುವ ಕುಮಾರಸ್ವಾಮಿ, ಇಂದಿನಿಂದ ಸ್ವಕ್ಷೇತ್ರದಲ್ಲಿ ರಥಯಾತ್ರೆಯನ್ನು ಅಧ್ದೂರಿಯಾಗಿ ಆರಂಭಿಸಿದ್ದಾರೆ.
ಮೂರು ತಲೆಮಾರಿನ ಜೋಡಿ ದಂಪತಿ ಭಾಗಿ: ಇಂದು ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ರಥಯಾತ್ರೆ ನಡೆಸಿದ್ದು, ನಾಳೆ ರಥಯಾತ್ರೆ ರಾಮನಗರ ತಲುಪಲಿದೆ. ಅಂದಹಾಗೆ ನಾಳೆ ಹೆಚ್ ಡಿಕೆ ಹುಟ್ಟು ಹಬ್ಬ ಹಿನ್ನಲೆ ಅದ್ದೂರಿಯಾಗಿ ಹುಟ್ಟು ಹಬ್ಬ ಆಚರಣೆ ಮಾಡಲು ಈಗಾಗಲೇ ಕಾರ್ಯಕರ್ತರು ಭರ್ಜರಿ ಸಿದ್ದತೆ ನಡೆಸಿಕೊಂಡಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ ತಿರುಪತಿ ಮಾದರಿಯಲ್ಲಿ ದೇವಸ್ಥಾನದ ಸೆಟ್ ನಿರ್ಮಿಸಲಾಗಿದ್ದು, ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡ ದಂಪತಿ, ಹೆಚ್ ಡಿಕೆ ದಂಪತಿ, ನಿಖಿಲ್ ಕುಮಾರಸ್ವಾಮಿ ದಂಪತಿ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನ ಸೇರಿಸುವ ಗುರಿ ಹೊಂದಿದ್ದಾರೆ.
ತಿರುಪತಿ ಮೂಲ ದೇವರ ಆಹ್ವಾನ: ಅಂದಹಾಗೆ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಭರ್ಜರಿ ಪ್ರಚಾರ ಮಾಡಿದ್ದು, ತಿರುಪತಿ ಮೂಲ ದೇವರನ್ನು ತರಲಾಗಿದೆ. ಈಗಾಗಲೇ ರಥಯಾತ್ರೆ ಎಲ್ಲೆಡೆ ಸಂಚಾರ ನಡೆಸುವ ಮೂಲಕ ಭರ್ಜರಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಬರುವಂತಹ ಎಲ್ಲಾ ಭಕ್ತಾದಿಗಳಿಗೂ ಊಟದ ವ್ಯವಸ್ಥೆ ಜೊತೆಗೆ ತಿರುಪತಿಯ ಲಡ್ಡು ನೀಡಲಾಗುತ್ತದೆ. ಮುಂದಿನ ಬಾರಿ ಮತ್ತೊಮ್ಮೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ ಎಂಬ ಸಂಕಲ್ಪದೊಂದಿಗೆ ಈ ಕಾರ್ಯಕ್ರಮ ನಡೆಸಲಾಗುತ್ತಿದೆ. ಸಮಾರಂಭಕ್ಕೆ ಬರುಬಂತಹ ಮಹಿಳೆಯರಿಗೆ ಬಾಗಿನ ನೀಡುವ ಕಾರ್ಯಕ್ರಮ ಕೂಡ ಹಮ್ಮಿಕೊಂಡಿದ್ದಾರೆ.
ಜೆಡಿಎಸ್ ಗ್ರಾಫ್ ಏರ್ತಿದೆ, 123 ಸೀಟು ಗೆಲ್ತೀವಿ: ಎಚ್.ಡಿ.ಕುಮಾರಸ್ವಾಮಿ
ಒಟ್ಟಾರೆ ಚುಮಾವಣೆ ವೇಳೆ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ಮೂಲಕ ಕ್ಷೇತ್ರದ ಜನರಿಗೆ ಮತ್ತಷ್ಟು ಹತ್ತಿರ ಆಗಲು ಕುಮಾರಸ್ವಾಮಿ ಹೊರಟಿದ್ದು, ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತದೆ ಕಾದು ನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.