
ಭಾಲ್ಕಿ(ಏ.23): ಬೀದರ್ ಜಿಲ್ಲೆ ಭಾಲ್ಕಿಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತನೊಬ್ಬನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ.
ಮಾನಹಳ್ಳಿ ಗ್ರಾಮದ ಗಣೇಶ ಶಾಲಿವಾನ ಯರಬಾಗೆ (23) ಗಾಯಗೊಂಡ ಯುವಕ. ಸಂಜೆ 6 ಗಂಟೆ ವೇಳೆ ಪಟ್ಟಣದ ಇಶಾನ್ ಕಾಲೋನಿಯಲ್ಲಿ ಅವರು ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿದ್ದರು. ಆಗ ಮೂವರು ಯುವಕರು ಅವರ ಮೇಲೆ ಏಕಾಏಕಿ ದಾಳಿ ಮಾಡಿ, ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಚಾಕುವಿನಿಂದ ಇರಿದು ಗಾಯಗೊಳಿಸಿ, ಪರಾರಿಯಾಗಿದ್ದಾರೆ. ಗಾಯಗೊಂಡ ಅವರಿಗೆ ತಕ್ಷಣವೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್‌ಗೆ ಕಳುಹಿಸಲಾಗಿದೆ.
ದೇವೇಗೌಡರಂತೆ ಕುಳಿತಲ್ಲೆ ಟಿಕೆಟ್ ಘೋಷಣೆ ಬಿಜೆಪಿಯಲ್ಲಿ ನಡೆಯಲ್ಲ: ಸಂಸದ ತೇಜಸ್ವಿ ಸೂರ್ಯ
ಔರಾದ್ ಮೂಲದ ರಾಬೀನ್ ಸೂರ್ಯಕಾಂತ್, ಪಟ್ಟಣದ ನಿವಾಸಿ ಸಂಗಮೇಶ ಸ್ವಾಮಿ, ಖಟಕ್ ಚಿಂಚೋಳಿ ಗ್ರಾಮದ ಸಂಗಮೇಶ ಚನಶೆಟ್ಟಿ ಹಲ್ಲೆ ನಡೆಸಿದವರು ಎಂದು ಗುರುತಿಸಲಾಗಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ವಿಷಯ ತಿಳಿದು ಶಾಸಕ ಈಶ್ವರ ಖಂಡ್ರೆಯವರು ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿ, ಸೋಲಿನ ಭಯದಿಂದ ಬಿಜೆಪಿಯವರು ಈ ರೀತಿ ಗೂಂಡಾವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.