ರಾಜ್ಯದಲ್ಲಿ ಬೆಡ್, ಆಕ್ಸಿಜನ್ ಕೊರತೆ: ಮಹತ್ವದ ಕಾರ್ಯಕ್ಕೆ ಮುಂದಾದ ಕಾಂಗ್ರೆಸ್

By Suvarna News  |  First Published Apr 27, 2021, 7:40 PM IST

ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಿರುವುದರಿಂದ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಸರಿಯಾಗಿ ಸಿಗುತ್ತಿಲ್ಲ. ಇದರಿಂದ ಸೊಂಕಿತರ ಪರದಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಮಹತ್ವದ ಕಾರ್ಯಕ್ಕೆ ಮುಂದಾಗಿದೆ.


ಬೆಂಗಳೂರು, (ಏ.27): ಕಾಂಗ್ರೆಸ್ ನಿಂದ ರಾಜ್ಯಮಟ್ಟ ಕೋವಿಡ್ ಸೆಂಟರ್ ಮಾಡುತ್ತೇವೆ. ಖಾಸಗಿ ಆಸ್ಪತ್ರೆಗಳಿಗೆ ಡ್ರಗ್ ,ಔಷದಿ ಸರಬರಾಜು ಮಾಡಲಾಗುತ್ತಿಲ್ಲ. ಅವರ ಸಹಾಯಕ್ಕೂ ಕಾಂಗ್ರೆಸ್ ನಿಲ್ಲುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರು ಕೋವಿಡ್ ಸಮಯದಲ್ಲಿ ಯಾವ ರೀತಿ ಜವಬ್ದಾರಿ ನಿಭಾಯಿಸಬೇಕು ಎಂದು ಸಲಹೆ ನೀಡಿದ್ದಾರೆ. ಆಸ್ಪತ್ರೆಗಳ ಮಾಹಿತಿ ಹೇಗೆ ಪಡೆಯಬೇಕು? ಸಾಮಾನ್ಯ ಜನರಿಗೆ ಹೇಗೆ ಸಹಾಯ ಮಾಡಬೇಕು? ಕಾಂಗ್ರೆಸ್ ಪಕ್ಷ ನಿಭಾಯಿಬೇಕಾದ ಜವಬ್ದಾರಿ ಬಗ್ಗೆ ಸಲಹೆ ನೀಡಿದ್ದಾರೆ ಎಂದರು.

Latest Videos

undefined

ಕೋವಿಡ್ ಅಂಕಿ-ಸಂಖ್ಯೆಯನ್ನು ಸರ್ಕಾರ ಮುಚ್ಚಿಡುತ್ತಿದ್ಯಾ? ಸ್ಪಷ್ಟನೆ ಕೊಟ್ಟ ಸುಧಾಕರ್

ರಾಜ‍ಯದಲ್ಲಿ ಏಕಾಏಕಿಯಾಗಿ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತದೆ. ಜನರಿಗೆ ಆರ್ಥಿಕ ಪ್ಯಾಕೇಜ್ ನೀಡಬೇಕು. ಪ್ಯಾಕೇಜ್ ಕೊಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ. ಯಾವ ರೀತಿ ಒತ್ತಾಯ ಮಾಡಬೇಕು ಎಂದು ನಾವು ಚರ್ಚೆ ಮಾಡುತ್ತೇವೆ ಎಂದರು.

ಇದೇ ವೇಳೆ ಅಕ್ಕಿ ಪ್ರಮಾಣ ಕಡಿತ ವಿಚಾರವಾಗಿ ಮಾತನಾಡಿದ ಅವರು, ಏಳು ಕೆಜಿ ಅಕ್ಕಿ ಕೊಡುತ್ತಿದ್ದರು, ಅದನ್ನು ಎರಡು ಕೆಜಿ ಮಾಡಿದ್ದಾರೆ. ಸರ್ಕಾರಕ್ಕೆ ನಾಚಿಕೆಯಾಗಬೇಕು. ಇವರೇನು ಇವರ ಕೈಯಿಂದ ಕೊಡುತ್ತಿದ್ದಾರೆಯೇ? ಇದಕ್ಕಿಂತ ದುರಂತ ‌ಮತ್ತೊಂದಿಲ್ಲ ಎಂದು ಸರ್ಕಾರದ ನಡೆಗೆ ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದರು.

click me!