
ಬೆಂಗಳೂರು: ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಡಾ.ಬಿ.ಡಿ.ಭೂಕಾಂತ್ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದು ರಾಜ್ಯ ಸರ್ಕಾರ ಆದೇಶಿಸಿದೆ.
ಡಾ. ಬಿ.ಡಿ.ಭೂಕಾಂತ್ ಅಧ್ಯಕ್ಷರಾಗಿರುವ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳ ಸೇರಿ 54 ನಿಗಮ-ಮಂಡಳಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಕಳೆದ ವಾರ ಆದೇಶಿಸಿತ್ತು.
ಆದರೆ, ಭೂಕಾಂತ್ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ಮೂಡಿತ್ತು. ಅಲ್ಲದೆ, ಈ ಕೂಡಲೇ ಅವರಿಗೆ ನೀಡಲಾದ ಸ್ಥಾನಮಾನವನ್ನು ಹಿಂಪಡೆಯುವಂತೆಯೂ ಸರ್ಕಾರವನ್ನು ಒತ್ತಾಯಿಸಿದ್ದರು. ಕಾರ್ಯಕರ್ತರ ಒತ್ತಡಕ್ಕೆ ಮಣಿದಿರುವ ಸರ್ಕಾರ ಭೂಕಾಂತ್ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನವನ್ನು ಹಿಂಪಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.