
ನವದೆಹಲಿ(ಜ.26): ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದು ಕರ್ನಾಟಕದ ರಾಜಕೀಯದಲ್ಲಿ ದೊಡ್ಡ ಬೆಳವಣಿಗೆ ಯಾಗಿದೆ. ಅವರ ಆಗಮನ ದಿಂದ ಆನೆ ಬಲ ಬಂದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಬರಮಾಡಿಕೊಂಡ ನಂತರ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯರಾದ ಶೆಟ್ಟರ್ ಬೀಜೆಪಿ ಸೇರಿದ್ದು ಸಂತಸ ತಂದಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು, ಮರಳಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.
ಘರ್‌ವಾಪ್ಸಿ ಪ್ರಕ್ರಿಯೆ 1.5 ತಿಂಗಳಿಂದಿತ್ತು: ಜಗದೀಶ್ ಶೆಟ್ಟರ್
ಶೆಟ್ಟರ್ ಅವರು ಮರಳಿ ತಮ್ಮ ಮನೆಗೆ ಬಂದಿದ್ದಾರೆ. ಇದು ಪಕ್ಷದ ಸದಸ್ಯರಲ್ಲಿ ಸಂತಸ ಮೂಡಿಸಿದೆ. ಕರ್ನಾಟಕ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆಗೆ ಅವರ ಸೇರ್ಪಡೆ ಆನೆ ಬಲ ಸಿಕ್ಕಂತಾಗಿದೆ. ಶೆಟ್ಟರ್ ಅವರ ಈ ನಿರ್ಧಾರವನ್ನು ಪಕ್ಷದ ಎಲ್ಲ ನಾಯಕರು ಸ್ವಾಗತಿಸಿದ್ದು, ಕಾರ್ಯಕರ್ತರಲ್ಲಿ ಹರ್ಷ ಮೂಡಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲ್ಲುವ ಸಂಕಲ್ಪಕ್ಕೆ ಬಲ ಬಂದಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.