
ಬೆಂಗಳೂರು(ನ.29): ಲೋಕಸಭಾ ಚುನಾವಣೆಗೆ ಗ್ಯಾರಂಟಿ ಯೋಜನೆಗಳನ್ನೇ ಪ್ರಮುಖವಾಗಿ ಬಿಂಬಿಸಲು ಕಾಂಗ್ರೆಸ್ ನಾಯಕತ್ವ ನಿರ್ಧರಿಸಿದ್ದು, ಇದಕ್ಕಾಗಿ ಜನವರಿ ಮಾಸದಿಂದ ಮೂರು ತಿಂಗಳವರೆಗೆ ರಾಜ್ಯಾದ್ಯಂತ ಗ್ಯಾರಂಟಿ ಯೋಜನೆ ಕುರಿತು ಜಾಗೃತಿ ಆಂದೋಲನ ಕೈಗೊಳ್ಳಲು ತೀರ್ಮಾನಿಸಿದೆ.
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಕರ್ನಾಟಕದಲ್ಲಿ 5 ವರ್ಷವೂ ಗ್ಯಾರಂಟಿ ಯೋಜನೆ ಇರುತ್ತವೆ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಕುರಿತು ರಾಜ್ಯದ ಜನತೆಗೆ ಜಾಗೃತಿ ಮೂಡಿಸಲು ಹಾಗೂ ಈ ಬಗ್ಗೆ ಪ್ರಚಾರಾಂದೋಲನ ಕೈಗೊಳ್ಳಲು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಸರ್ಕಾರದ ಈ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಮುಟ್ಟಿಸಬೇಕು. ಇದಕ್ಕಾಗಿ ಜನವರಿ ಮಾಸದಿಂದ ಮಾರ್ಚ್ ವರೆಗೂ ಆಂದೋಲನವನ್ನು ಕೈಗೊಳ್ಳಬೇಕು. ಇದಕ್ಕೆ ಪಕ್ಷವೇ ರೂಪರೇಷೆ ರೂಪಿಸಬೇಕು ಎಂದು ನಿರ್ಧರಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.