
ಕಾರವಾರ (ಅ.17): ಭ್ರಷ್ಟಾಚಾರ ಮತ್ತು ಕಳ್ಳತನ ಮಾಡುವವರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಿದರೆ ಒಳ್ಳೆಯದು. ಆದರೆ, ಇಂತಹ ವಿಷಯಗಳಲ್ಲಿ ಸ್ಟಿಂಗ್ ಆಪರೇಷನ್ ಮಾಡುವುದು ಸಮಂಜಸವಲ್ಲ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ದಾಖಲಾಗಿದೆಯೇ ಅಥವಾ ಅವರ ಆಪ್ತರ ವಿರುದ್ಧ ದಾಖಲಾಗಿದೆಯೇ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದರು. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ತಮ್ಮ ಬಳಿ ಗೃಹ ಖಾತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಅಭಿವೃದ್ಧಿಯ ಆಧಾರದ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಹಿಂದೂ- ಮುಸ್ಲಿಂ ಭಾವನಾತ್ಮಕ ವಿಚಾರಗಳನ್ನು ಬಳಸಿಕೊಂಡು ಅಧಿಕಾರಕ್ಕೇರಿದೆ ಎಂದು ಆರೋಪಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಆಡಳಿತದ ಸಾಧನೆಗಳೇನು ಎಂಬುದನ್ನು ಮಾಧ್ಯಮಗಳು ಪ್ರಶ್ನಿಸಬೇಕು ಎಂದರು.
ಕೇಂದ್ರ ಸರ್ಕಾರ ಅದಾನಿ ಮತ್ತು ಅಂಬಾನಿ ಅವರ ಸಾಲದ ವಿಚಾರಕ್ಕೆ ಹೆಚ್ಚಿನ ಗಮನ ನೀಡುತ್ತಿದ್ದು, ಸಣ್ಣ ಉದ್ದಿಮೆದಾರರು ಹಾಗೂ ವ್ಯಾಪಾರಿಗಳ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಲಾಡ್ ಆರೋಪಿಸಿದರು. ದೇಶದಲ್ಲಿ ನಿರುದ್ಯೋಗ ಹೆಚ್ಚುತ್ತಿದ್ದು, ಶಿಕ್ಷಣದ ಖಾಸಗೀಕರಣದಿಂದ ಬಡ ಮತ್ತು ಮಧ್ಯಮ ವರ್ಗದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಡಿಸಿಸಿ ಅಧ್ಯಕ್ಷ ಜಿ.ಟಿ. ನಾಯ್ಕ, ಕಾಂಗ್ರೆಸ್ ಮುಖಂಡ ವಿ.ಎಸ್. ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಕಲ್ಗುಟ್ಕರ್ ಮತ್ತಿತರರು ಇದ್ದರು. ಕಾಳಿ ಹುಲಿ ಸಂರಕ್ಷಿತ ಪ್ರದೇಶದ ತನಿಖಾ ಶ್ವಾನ ಕ್ವೀಪರ್ ಇನ್ನಿತರರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.