ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಸಿದ್ದರಾಮಯ್ಯ ಕಿವಿಮಾತು

By Kannadaprabha News  |  First Published Sep 28, 2023, 2:20 AM IST

ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದರು.


ಚಾಮರಾಜನಗರ (ಸೆ.28): ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದರು.

ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ಧೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೈ ಮಾದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

Tap to resize

Latest Videos

undefined

ಕೋರ್ಟ್‌ ಹೊರಗೆ ಕಾವೇರಿ ಸಮಸ್ಯೆ ಪರಿಹಾರಕ್ಕೆ ನಾವು ಸಿದ್ಧ: ಸಿಎಂ ಸಿದ್ದರಾಮಯ್ಯ

ತಾಯಿ ಜೊತೆ ನಡೆದು ಬರುತ್ತಿದ್ದೆ: ನನ್ನ ತಾಯಿ ಮಹಾಲಯ ಅಮವಾಸ್ಯೆ ಸಂದರ್ಭದಲ್ಲಿ ನಡೆದುಕೊಂಡು ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದರು. ನಾನು ಸಹ ಒಂದೆರಡು ಬಾರಿ ನಡೆದುಕೊಂಡು ಅವರ ಜೊತೆ ಬಂದಿದ್ದೆ, ಆಗ ಅಂತರಗಂಗೆಯಲ್ಲಿ ಆ ಕಲುಷಿತ ನೀರಿನಲ್ಲೇ ಸ್ನಾನ ಮಾಡಿ ಭಕ್ತಿ ಮೆರೆಯುತ್ತಿದ್ದವು. ಇದೀಗ ಪ್ರಾಧಿಕಾರ ರಚನೆಯಾದ ಮೇಲೆ ಬಹಳಷ್ಟು ಸುಧಾರಿಸಿದೆ. ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ. ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅದ್ಧೂರಿ ಮದುವೆ ಬೇಡ: ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ. ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ. ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ಧೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು. ಸುತ್ತೂರು ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಪಟ್ಟದ ಗುರುಸ್ವಾಮಿಗಳು, ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಅಧ್ಯಕ್ಷತೆಯನ್ನು ಹನೂರು ಶಾಸಕ ಎಂ.ಆರ್.ಮಂಜುನಾಥ್ ವಹಿಸಿದ್ದರು. 

ಜಿಲ್ಲಾ ಉಸ್ತುವಾರಿ ಹಾಗೂ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಚ್‌.ಎಂ.ಗಣೇಶ್‌ ಪ್ರಸಾದ್‌, ಮರಿತಿಬ್ಬೇಗೌಡ, ತಿಮ್ಮಯ್ಯ, ಮಾಜಿ ಶಾಸಕರಾದ ಆರ್‌.ನರೇಂದ್ರ, ಜಿ.ಎನ್‌.ನಂಜುಂಡಸ್ವಾಮಿ, ಗ್ರಾಪಂ ಅಧ್ಯಕ್ಷೆ ಅರ್ಚನ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್‌, ಜಿಲ್ಲಾಧಿಕಾರಿ ಶಿಲ್ಪಾನಾಗ್‌, ಎಸ್ಪಿ ಪದ್ಮಿನಿ ಸಾಹು, ಜಿಪಂ ಸಿಇಓ ಆನಂದ್‌ ಪ್ರಕಾಶ್‌ ಮೀನಾ, ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಇದ್ದರು.

ಕಾವೇರಿ ವಿಚಾರದಲ್ಲಿ ನಮ್ಮಲ್ಲಿಯೇ ಒಗ್ಗಟ್ಟಿಲ್ಲ: ಎಚ್‌.ಡಿ.ದೇವೇಗೌಡ ಬೇಸರ

ರಾಷ್ಟ್ರಪತಿ ಭವನ ಇನ್ನು ಮುಂದೆ ತಪೋಭವನ: ಮಲೈ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಹದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು. ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರ ಸಲಹೆಯಂತೆ ತಪೋಭವನ ಎಂದು ಬದಲಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

click me!