ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸದಿದ್ದರೆ ಕ್ಷೇತ್ರಗಳಿಗೆ ಅನುದಾನ ಬರೋದಿಲ್ಲ. ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರ್ತಿಲ್ಲ. ಹೀಗಾಗಿ, ಬಸ್‌ನಲ್ಲಿ ಓಡಾಡೋದು ಸೇರಿ ಒಂದೆರಡು ಗ್ಯಾರಂಟಿ ಗಳನ್ನು ತೆಗೆಯಿರಿ ಎಂದು ಮುಖ್ಯಮಂತ್ರಿಗೆ ಹೇಳ್ತಿವಿ. ಅವರೇನು ತೀರ್ಮಾನ ಮಾಡ್ತಾರೆ ನೋಡೋಣ: ಹೊಸಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಆರ್. ಗವಿಯಪ್ಪ
ಹೊಸಪೇಟೆ(ನ.27): ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಶಾಸಕರ ಕ್ಷೇತ್ರಗಳಿಗೆ ಅನುದಾನವೇ ಬರುತ್ತಿಲ್ಲ. ಹೀಗಾಗಿ, ಬಸ್ಸಲ್ಲಿ ಓಡಾಡೋದು ಸೇರಿ ಎರಡು ಗ್ಯಾರಂಟಿ ಯೋಜನೆ ನಿಲ್ಲಿಸಲು ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆಂದು ಹೊಸಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಆರ್. ಗವಿಯಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಅವರು ಉಲ್ಟಾ ಹೊಡೆದಿದ್ದಾರೆ. ಗ್ಯಾರಂಟಿ ಯೋಜನೆಗಳು ಬಡವರ ಪರವಾಗಿದ್ದು, ಗ್ಯಾರಂಟಿ ನಿಲ್ಲಿಸುವ ಬಗ್ಗೆ ನಾನು ಮಾತನಾಡಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.
ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಇಪ್ಪಿತ್ತೇರಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಬೆಲ್ಲ ಕಾಲುವೆ ಆಧುನೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸದಿದ್ದರೆ ಕ್ಷೇತ್ರಗಳಿಗೆ ಅನುದಾನ ಬರೋದಿಲ್ಲ. ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರ್ತಿಲ್ಲ. ಹೀಗಾಗಿ, ಬಸ್‌ನಲ್ಲಿ ಓಡಾಡೋದು ಸೇರಿ ಒಂದೆರಡು ಗ್ಯಾರಂಟಿ ಗಳನ್ನು ತೆಗೆಯಿರಿ ಎಂದು ಮುಖ್ಯಮಂತ್ರಿಗೆ ಹೇಳ್ತಿವಿ. ಅವರೇನು ತೀರ್ಮಾನ ಮಾಡ್ತಾರೆ ನೋಡೋಣ. ಎರಡು ಗ್ಯಾರಂಟಿಗಳನ್ನು ರದ್ದು ಮಾಡುವುದರಿಂದ ಅನುದಾನ ಬರುವುದು ಸರಿಯಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಅನ್ನಭಾಗ್ಯ ನಡೆಸಲು ಆಗದೆ ಬಿಪಿಎಲ್ ಕಾರ್ಡ್ ರದ್ದು: ಜಗದೀಶ ಶೆಟ್ಟರ್
ಶಾಸಕರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ವಿವಾದದ ಬಳಿಕ ಅವರು ಉಲ್ಟಾ ಹೊಡೆದಿದ್ದಾರೆ. ಬಳಿಕ, ಸುದ್ದಿಗಾರರ ಜೊತೆ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದಲೇ ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಮೂರು ಸ್ಥಾನಗಳಲ್ಲಿ ಜಯ ಗಳಿಸಿದೆ. ಗ್ಯಾರಂಟಿ ನಿಲ್ಲಿಸುವ ಬಗ್ಗೆ ನಾನು ಮಾತನಾಡಿಲ್ಲ. ಅಭಿವೃದ್ಧಿ ವಿಚಾರ ಮಾತ್ರ ಮಾತನಾಡಿರುವೆ. ಜನರ ಬಳಿ ಮಾತನಾಡುವಾಗ ಕೆಲ ವಿಷಯ ಮಾತನಾಡಿರುವೆ. ನಮ್ಮ ಸರ್ಕಾರ ಗಟ್ಟಿಯಾಗಿದೆ. ನಮ್ಮದೇಸರ್ಕಾರದ ಯೋಜನೆ ಬಗ್ಗೆನಾನ್ಯಾಕೆ ಮಾತನಾಡಲಿ? ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಬಡವರ ಪರವಾಗಿದ್ದು, ಈ ಯೋಜನೆಗಳನ್ನು ಸರ್ಕಾರ ನಿಲ್ಲಿಸಲ್ಲ ಎಂದು ಸ್ಪಷ್ಟನೆ ನೀಡಿದರು.
ಗವಿಯಪ್ಪಗೆ ಶೋಕಾಸ್ ನೋಟಿಸ್: ಡಿಕೆಶಿ
ಬೆಂಗಳೂರು: ಗ್ಯಾರಂಟಿಯೋಜನೆಗಳಬಗ್ಗೆ ಮಾತನಾಡಿರುವ ಹೊಸಪೇಟೆ(ವಿಜಯನಗರ)ಶಾಸಕಗವಿಯಪ್ಪ ಅವರಿಗೆ ಪಕ್ಷದಿಂದ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಅಲ್ಲದೆ, ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳನ್ನು ಪ್ರಶ್ನಿಸಬಾರದು. ಮಾಡಿದರೆ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಗ್ಯಾರಂಟಿ ನಿಲ್ಲಿಸಿ ಅನುದಾನ ಕೊಡಿ ಎಂದು ಸಿದ್ದರಾಮಯ್ಯ ಅವರನ್ನು ಕೇಳುತ್ತಿದ್ದೇವೆ ಎಂಬ ಶಾಸಕ ಗವಿಯಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅವರು ಈ ರೀತಿ ಹೇಳಿದ್ದಾರೆ ಎಂದು ನಾನು ನಂಬುವುದಿಲ್ಲ. ಒಂದು ವೇಳೆ ಅವರು ಈ ಹೇಳಿಕೆ ಕೊಟ್ಟಿದ್ದೇ ಆಗಿದ್ದರೆ ವಿವರಣೆ ಕೇಳಿ ನೋಟೀಸ್ ನೀಡುತ್ತೇವೆ. ಎಂತಹದೆ ಪರಿಸ್ಥಿತಿ ಬಂದರೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು ಎಂದರು.
ಸಿಎಂ ನೋಡಿದ್ರೆ ಅಯ್ಯೋ ಪಾಪ ಅನಿಸುತ್ತೆ, ಗ್ಯಾರಂಟಿ ಹಣ ಹೊಂದಿಸಲು ಸಿದ್ದು ಪರದಾಟ: ವಿಜಯೇಂದ್ರ
ಬಿಪಿಎಲ್ ಕಾರ್ಡ್, ಯಾವ ಗ್ಯಾರಂಟಿ ಕೂಡ ಬಂದ್ ಆಗಲ್ಲ: ಬಿಜೆಪಿ ವಿರುದ್ಧ ಹರಿಹಾಯ್ದ ಡಿ.ಕೆ.ಶಿವಕುಮಾರ್
ಕಾರವಾರ: ಬಿಜೆಪಿ ಸರ್ಕಾರ ಇದ್ದಾಗ ಅವರು ಇನ್ಸ್ಟಿಟ್ಯೂಟ್ ಹಾಗೂ ಪಕ್ಷದ ಕಚೇರಿ ಕಟ್ಟಿಕೊಂಡಿದ್ದಾರೆ. ನಮ್ಮಲ್ಲಿ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು ಬೇರೆ ಕಡೆ ಸ್ಪ್ಲಿಟ್ ಆಗಿದ್ದಾರೆ. ಗಾಂಧೀಜಿ ಕಾಂಗ್ರೆಸ್ ನಾಯಕತ್ವ ವಹಿಸಿ ನೂರು ವರ್ಷ ಆಗ್ತಾ ಇದೆ. ಹಾಗಾಗಿ ಈ ವರ್ಷ ನೂರು ಕಚೇರಿ ಪ್ರಾರಂಭ ಮಾಡಬೇಕು ಅಂತ ತೀರ್ಮಾನ ಮಾಡಿದೇವೆ. ಆ ಉದ್ದೇಶಕ್ಕೆ ಗೃಹ ಸಚಿವ ಪರಮೇಶ್ವರ್ ಹೇಳಿರ್ತಾರೆ ಹೊರೆತು ಸರ್ಕಾರ ಬೀಳುವ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದರು.
ಯಾವ ಬಿಪಿಎಲ್ ಕಾರ್ಡ್, ಯಾವ ಗ್ಯಾರಂಟಿ ಕೂಡ ಬಂದ್ ಆಗಲ್ಲ. ಬಿಜೆಪಿಯವರು ಪ್ರತಿಭಟನೆ ಮಾಡುವುದರ ಮೂಲಕ ನಾವು ಬಡವರ ಪರ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಚಾರ ಕೊಡ್ತಾ ಇದ್ದಾರೆ ಎಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದರು.