ಗೋ ಹತ್ಯೆ, ಅಕ್ರಮ ಗೋ ಸಾಗಾಟ, ಕಳ್ಳತನಕ್ಕೆ ಕಠಿಣ ಕ್ರಮ: ಸಚಿವ ಪರಮೇಶ್ವರ್ ಭರವಸೆ

By Kannadaprabha News  |  First Published Jul 25, 2024, 6:49 AM IST

ರಾಜ್ಯದಲ್ಲಿ ಗೋವು ಕಳ್ಳತನ, ಅಕ್ರಮ ಗೋವು ಸಾಗಾಟ ಮತ್ತು ಗೋ ಹತ್ಯೆ ಪ್ರಕಾರಣಗಳಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. 
 


ಬೈಂದೂರು (ಜು.25): ರಾಜ್ಯದಲ್ಲಿ ಗೋವು ಕಳ್ಳತನ, ಅಕ್ರಮ ಗೋವು ಸಾಗಾಟ ಮತ್ತು ಗೋ ಹತ್ಯೆ ಪ್ರಕಾರಣಗಳಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 447 ಗೋವು ಕಳ್ಳತನ ಪ್ರಕರಣಗಳು ಹಾಗೂ 657 ಅಕ್ರಮ ಗೋವು ಸಾಗಾಟ ಪ್ರಕರಣಗಳು ದಾಖಲಾಗಿವೆ. 

ಉಡುಪಿ ಜಿಲ್ಲೆಯಲ್ಲಿ 2023-24ರಲ್ಲಿ 8 ಗೋವು ಕಳ್ಳತನ ಹಾಗೂ 12 ಅಕ್ರಮ ಸಾಗಾಟ ಪ್ರಕರಣ ದಾಖಲಾಗಿವೆ ಎಂದರು. ಗೋವು ಕಳ್ಳತನ, ಅಕ್ರಮ ಗೋವು ಸಾಗಾಟ ಮತ್ತು ಗೋ ಹತ್ಯೆ ಪ್ರಕಾರಣಗಳಲ್ಲಿ ಭಾಗಿಯಾದವರ ವಿರುದ್ಧ ಈ ಕೆಳಗಿನಂತೆ ಕ್ರಮ ಜಾರಿಗೊಳಿಸಲಾಗಿದೆ. ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದ್ದು. ಅನುಮಾನಾಸ್ಪದ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ದನ ಕಳವು / ಸಾಗಾಟ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರ ಪರೇಡನ್ನು ನಡೆಸಿದ್ದು ಅವರು ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುತ್ತದೆ. 

Latest Videos

undefined

ರಾಜ್ಯದಲ್ಲಿ ಆನ್‌ಲೈನ್ ಉದ್ಯೋಗದ ಹೆಸರಲ್ಲಿ 2348 ಕೋಟಿ ವಂಚನೆ: ಸಚಿವ ಪರಮೇಶ್ವರ್

ಈ ಹಿಂದೆ ವರದಿಯಾದ ಪ್ರಕರಣಗಳಲ್ಲಿ ಆರೋಪಿತರಿಗೆ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸೂಕ್ತ ಸಮಯದವರೆಗೆ ಬಾಂಡ್ ಪಡೆದುಕೊಳ್ಳಲಾಗುತ್ತಿದೆ. ಬೀಟ್ ಸಿಬ್ಬಂದಿಗೆ ಈ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಿದ್ದು, ಅವರ ಬೀಟ್ ವ್ಯಾಪ್ತಿಯಲ್ಲಿ ನಿಗಾ ಇಡಲು ಸೂಚಿಸಲಾಗಿದೆ. ರಾತ್ರಿ ಗಸ್ತು, ರಾತ್ರಿ ಬೀಟ್ ಕಡ್ಡಾಯವಾಗಿ ನಡೆಸಲಾಗುತ್ತಿದೆ ಎಂದು ಸಚಿವರು ಬೈಂದೂರು ಶಾಸಕರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಆನ್‌ಲೈನ್ ವಂಚನೆಗೆ ಕಡಿವಾಣ ಹಾಕಲು ಸರ್ಕಾರ ಚಿಂತನೆ: ಹೆಚ್ಚುತ್ತಿರುವ ಸೈಬರ್ ಕ್ರೈಮ್ ಮತ್ತು ವಂಚನೆ ಸಮಸ್ಯೆಗಳ ವಿರುದ್ಧ ಹೋರಾಡಲು ಹಾಗೂ ಸೈಬರ್ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ನಗರದ ಶ್ರೀ ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬೆಂಗಳೂರಿನ ಐಎಸ್‌ಎಸಿ ಫೌಂಡೇಶನ್ ಸಹಯೋಗದಲ್ಲಿ ಪರಸ್ಪರ ಮಾತುಕತೆ ನಡೆಸಿ, ಒಡಂಬಡಿಕೆ ಸಹಿ ಮಾಡಲಾಯಿತು. 

ನಗರದ ಎಸ್‌ಎಸ್‌ಐಟಿ ಕ್ಯಾಂಪಸ್‌ನ ಸಭಾಂಗಣದಲ್ಲಿ ನಡೆದ ಈ ಮಾತುಕತೆಯ ವೇಳೆ ಸೈಬರ್ ಅಪರಾಧ ಸಂತ್ರಸ್ತರಿಗೆ ಸಹಾಯ ಮಾಡಲು ಮತ್ತು ಸೈಬರ್ ಭದ್ರತೆಯನ್ನು ಸ್ಥಾಪಿಸಲು "ಕಾಪ್ ಕನೆಕ್ಟ್ ಕೆಫೆ" ಅನ್ನು ಕೇಂದ್ರವನ್ನು ಕಾಲೇಜಿನಲ್ಲಿ ಸ್ಥಾಪಿಸುವ ಉದ್ದೇಶದಿಂದ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಜಿ.ಪರಮೇಶ್ವರ್‌ ಹಾಗೂ ಐಎಸ್‌ಎಸಿ ಫೌಂಡೇಶನ್ ನಿರ್ದೇಶಕ ಕ್ಯಾಪ್ಟನ್ ಪಿ ಆನಂದ್ ನಾಯ್ಡು ಅವರನ್ನು ಒಳಗೊಂಡ ನಿಯೋಗ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿ, ಪರಸ್ಪರ ವಿನಿಮಯ ಮಾಡಿಕೊಂಡಿತು.

ಡಾ.ಜಿ.ಪರಮೇಶ್ವರ್‌ ಮಾತನಾಡಿ, ಎರಡು ಸಂಸ್ಥೆಗಳ ಜೊತೆಗೂಡಿ ಆನ್‌ಲೈನ್ ಬೆದರಿಕೆಗಳನ್ನು ಎದುರಿಸಲು ಅಗತ್ಯವಿರುವ ಜ್ಞಾನ, ತರಬೇತಿ ಮತ್ತು ಸಂಪನ್ಮೂಲ ವ್ಯಕ್ತಿಗಳಿಗೆ ಅಧಿಕಾರ ನೀಡುವ ಮೂಲಕ ಸೈಬರ್‌ ಸೆಕ್ಯುರಿಟಿ ನೆಟ್‌ವರ್ಕ್‌ನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದೇವೆ. ಕೆಫೆಯು ಸಾಮಾನ್ಯ ಸೈಬರ್ ಸುರಕ್ಷತೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ಕಾಲೇಜುಗಳಲ್ಲಿ ಸೈಬರ್ ನೈರ್ಮಲ್ಯವನ್ನು ಹೆಚ್ಚಿಸಲು ಮಹಿಳಾ ಸುರಕ್ಷತಾ ಕ್ಲಬ್‌ಗಳನ್ನು ಸ್ಥಾಪಿಸುತ್ತದೆ ಎಂದು ಹೇಳಿದರು.

ಪಾರ್ಕಿಂಗ್ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಬಿಬಿಎಂಪಿ, ಸಾರಿಗೆ ಇಲಾಖೆ ಜೊತೆ ಚರ್ಚೆ: ಪರಮೇಶ್ವರ್‌

ಸೈಬರ್ ವಂಚನೆ ಸಮಸ್ಯೆಗಳ ಕುರಿತು ತಜ್ಞರ ಸಹಾಯ ಮತ್ತು ಸಲಹೆಯನ್ನು ಪಡೆಯಲು ಸುರಕ್ಷಿತ ವಾತಾವರಣವನ್ನು ಒಳಗೊಂಡ ಕೇಂದ್ರವನ್ನು ಕ್ಯಾಂಪಸ್ ನಲ್ಲಿ ತೆರೆದು ಸೈಬರ್ ಅಪರಾಧಗಳಿಂದ ಪ್ರಭಾವಿತರಾದವರಲ್ಲಿ ಜಾಗೃತಿ ಮೂಡಿಸಲು ಸೈಬರ್ ಮನಶಾಸ್ತ್ರಜ್ಞರು, ತಾಂತ್ರಿಕ ತಜ್ಞರು ಮತ್ತು ಕಾನೂನು ಸಲಹೆಗಾರರ ತಂಡವನ್ನು ಸಂಯೋಜಿಸುತ್ತದೆ ಎಂದು ತಿಳಿಸಿದರು.

click me!