ಕೊಡಗಿನಲ್ಲಿ ಚಿತ್ರ ಬಿಡಿಸಿ ಮತದಾನ ಜಾಗೃತಿ ಮೂಡಿಸಿದ ವಿದ್ಯಾರ್ಥಿಗಳು, ವಯಸ್ಕರು

By Govindaraj S  |  First Published Apr 15, 2023, 11:30 PM IST

ಮೇ 10ರಂದು ರಾಜ್ಯದಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಚಿತ್ರಕಲಾ ಸ್ಪರ್ಧೆ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನ ನಡೆಯಿತು. 
 


ವರದಿ: ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್ 

ಕೊಡಗು (ಏ.15): ಮೇ 10ರಂದು ರಾಜ್ಯದಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಚಿತ್ರಕಲಾ ಸ್ಪರ್ಧೆ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನ ನಡೆಯಿತು. ಮಡಿಕೇರಿಯ ರಾಜಾಸೀಟಿನಲ್ಲಿ ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಹಾಗೂ ಮಡಿಕೇರಿ ತಾಲ್ಲೂಕು ಜಾನಪದ ಸಾಹಿತ್ಯ ಪರಿಷತ್ತುಗಳ ಸಹಯೋಗದಲ್ಲಿ ಚಿತ್ರಕಲಾ ಸ್ಪರ್ಧೆ ನಡೆಯಿತು. ವಿಶ್ವ ಚಿತ್ರಕಲಾ ದಿನದ ಅಂಗವಾಗಿ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು, ಮತ್ತು ಸಾರ್ವಜನಿಕರಿಗಾಗಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು. 

Latest Videos

undefined

ಜೊತೆಗೆ ಸಹಿಸಂಗ್ರಹ ಕಾರ್ಯಕ್ರಮ ಕೂಡ ನಡೆಯಿತು. ವಿದ್ಯಾರ್ಥಿಗಳು, ಸಾರ್ವಜನಿಕರು ಮತದಾನದ ಮಹತ್ವ, ಅಗತ್ಯತೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಚಿತ್ರಗಳನ್ನು ಬಿಡಿಸಿ ಎಲ್ಲರ ಆಕರ್ಷಣೆಗೊಳಿಸಿದರು. ಚಿತ್ರಗಳನ್ನು ಬಿಡಿಸುವ ಜೊತೆಗೆ ಇದೇ ಮೊದಲ ಬಾರಿಗೆ ಮತದಾನವನ್ನು ಮಾಡುತ್ತಿರುವ ವಿದ್ಯಾರ್ಥಿಗಳು ನಾವು ಮೊದಲ ಬಾರಿಗೆ ಇಂತಹದ್ದೊಂದು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ಖುಷಿ ನೀಡಿದೆ ಎಂದು ವಿದ್ಯಾರ್ಥಿನಿ ಲೀಲಾವತಿ ಹೇಳಿದರು. ಜಿಲ್ಲಾಧಿಕಾರಿ ಡಾ ಬಿ. ಸಿ. ಸತೀಶ್ ಅವರು ಚಿತ್ರಕಾರರೊಬ್ಬರು ಬಿಡಿಸಿದ್ದ ಚಿತ್ರದ ಬೆರಳಿಗೆ ಇಂಕು ಹಚ್ಚುವ ಮೂಲಕ ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಿದರು. 

ಹೊಸ ಮತದಾರರ ಒಲವು ಬಿಜೆಪಿಯತ್ತ: ಸಚಿವ ಸಿ.ಸಿ.ಪಾಟೀಲ್‌

‘ಕೊಡಗು ಮತ್ತು ಮತದಾನ’ ಚಿತ್ರಕಲಾ ಸ್ಪರ್ಧೆ ಮತ್ತು ನಾನು ಮತ ಹಾಕುವೆ ಎಂಬ ಬೃಹತ್ ಕ್ಯಾನ್ವಸ್ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವೀಪ್ ಸಮಿತಿ ವತಿಯಿಂದ ನಾನಾ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದೆ. ಮತದಾನದ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುವಂತೆ ಮಾಡುವ ಹೊಣೆಗಾರಿಕೆ ಸಮಿತಿ ಮೇಲಿದೆ. ಈ ನಿಟ್ಟಿನಲ್ಲಿ ಮತದಾನದ ಮಹತ್ವ ಸಾರುವ ಚಿತ್ರಕಲಾ ಸ್ಪರ್ಧೆಯನ್ನೂ ಮಡಿಕೇರಿ ತಾಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ಆಯೋಜಿಸಲಾಗಿದೆ. ಇದಕ್ಕೆ ಉತ್ತಮ ಸ್ಪಂದನೆ ದೊರಕಿರುವುದು ಹರ್ಷ ತಂದಿದೆ ಎಂದರು. 

ಭಾನುವಾರ ಮಡಿಕೇರಿಯಲ್ಲಿ ಮತದಾನ ಮಹತ್ವ ಸಾರುವ ಬೈಕ್ ಜಾಥಾ, ಏಪ್ರಿಲ್, 30 ರಂದು ರಂಗೋಲಿ ಸ್ಪರ್ಧೆ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು. ಚಿತ್ರಕಲಾ ಸ್ಪರ್ಧೆಯಲ್ಲಿ  132 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 14 ವರ್ಷದೊಳಗಿನ ಮಕ್ಕಳು ಕೂಡ ಮತದಾನದ ಮಹತ್ವ ಅರಿಯಲು ಚಿತ್ರಕಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ ಕೊಡಗು ಜಿಲ್ಲಾಡಳಿತದ ರಾಯಭಾರಿಗಳಾದ ಬಸವರಾಜ ಬಡಿಗೇರ್ ಮತದಾನದ ಮಹತ್ವ ಸಾರುವ ಹಾಡಿನ ಸಾಲುಗಳ ಮೂಲಕ ಗಮನ ಸೆಳೆದರು. 

ಕಾಂಗ್ರೆಸ್‌ನಿಂದ ಮಾತ್ರ ಸಂವಿಧಾನ ರಕ್ಷಣೆ: ಶಾಸಕ ಎಚ್‌.ಕೆ.ಪಾಟೀಲ್

ರಾಯಭಾರಿ ವಿಶೇಷ ಚೇತನರಾದ ಎಸ್.ಕೆ. ಈಶ್ವರಿ ಮಾತನಾಡಿ, ಹಿರಿಯ ನಾಗರಿಕರು, ವಿಶೇಷ ಚೇತನರು ಕೂಡ ಈ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು ಎಂದು ಕೋರಿದರು. ಮುಳುಗು ತಜ್ಞ ಮತ್ತು ಚುನಾವಣಾ ರಾಯಭಾರಿ ಕೆ.ರವಿಮುತ್ತಪ್ಪ ಮಾತನಾಡಿ ನಿರ್ಭೀತಿಯಿಂದ ಎಲ್ಲರೂ ಮತದಾನ ಮಾಡಬೇಕೆಂದು ಕರೆ ನೀಡಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!