ಸಕ್ಕರೆ ಕಾರ್ಖಾನೆಗಳು ಉತ್ಪಾದಿಸೋ ವಿದ್ಯುತ್‌ ಸರ್ಕಾರಕ್ಕೆ: ಶಾಮನೂರು ಶಿವಶಂಕರಪ್ಪ

By Kannadaprabha NewsFirst Published Oct 16, 2023, 4:45 AM IST
Highlights

ವಿದ್ಯುತ್‌ ಕ್ಷಾಮ ಆವರಿಸಿರುವ ಹಿನ್ನೆಲೆಯಲ್ಲಿ ನವೆಂಬರ್‌ನಿಂದ ಕಬ್ಬು ಅರೆಯುವ ಕಾರ್ಯ ಆರಂಭಿಸುವ ರಾಜ್ಯದ 65 ಸಕ್ಕರೆ ಕಾರ್ಖಾನೆಗಳು ಉತ್ಪಾದಿಸುವ ವಿದ್ಯುತ್‌ ಅನ್ನು ಹೊರಗಿನವರಿಗೆ ಮಾರಾಟ ಮಾಡದೆ ಸರ್ಕಾರಕ್ಕೆ ನೀಡುವಂತೆ ಆದೇಶ ಹೊರಡಿಸಲಾಗಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು.

ದಾವಣಗೆರೆ (ಅ.16): ವಿದ್ಯುತ್‌ ಕ್ಷಾಮ ಆವರಿಸಿರುವ ಹಿನ್ನೆಲೆಯಲ್ಲಿ ನವೆಂಬರ್‌ನಿಂದ ಕಬ್ಬು ಅರೆಯುವ ಕಾರ್ಯ ಆರಂಭಿಸುವ ರಾಜ್ಯದ 65 ಸಕ್ಕರೆ ಕಾರ್ಖಾನೆಗಳು ಉತ್ಪಾದಿಸುವ ವಿದ್ಯುತ್‌ ಅನ್ನು ಹೊರಗಿನವರಿಗೆ ಮಾರಾಟ ಮಾಡದೆ ಸರ್ಕಾರಕ್ಕೆ ನೀಡುವಂತೆ ಆದೇಶ ಹೊರಡಿಸಲಾಗಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು. ಮಳೆ ಇಲ್ಲದೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚುತ್ತಿದೆ. 

ನವೆಂಬರ್‌ನಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುವ ಕಾರ್ಯ ಆರಂಭಿಸಲಿದ್ದು, ಆಗ ಒಂದಿಷ್ಟು ವಿದ್ಯುತ್ ಸಮಸ್ಯೆ ಕಡಿಮೆಯಾಗಬಹುದು ಎಂದರು. ಬೆಳಗಾವಿ, ಬಾಗಲಕೋಟೆ ಸೇರಿ ರಾಜ್ಯದ 65 ಸಕ್ಕರೆ ಕಾರ್ಖಾನೆಗಳಲ್ಲಿ ವಿದ್ಯುತ್ ಉತ್ಪಾದಿಸಲಾಗುತ್ತದೆ. ಸಕ್ಕರೆ ಕಾರ್ಖಾನೆಗಳು ಹೊರಗಡೆ ವಿದ್ಯುತ್ ಮಾರಾಟ ಮಾಡದೆ ಸರ್ಕಾರಕ್ಕೆ ಮಾರಾಟ ಮಾಡಬೇಕೆಂಬ ಆದೇಶ ಹೊರಡಿಸಿದೆ. ಸರ್ಕಾರವೇ ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿಸುವುದರಿಂದ ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಗಬಹುದು ಎಂದು ಹೇಳಿದರು.

ಚೀನಾದ ಫೋಟೋಗಳನ್ನ ಶೇರ್ ಮಾಡಿದ Dr Bro: ನಕಲಿಗಳ ಮಧ್ಯೆ ನೀವು ಕನ್ನಡದ ಅಸಲಿ ಚಿನ್ನ ಎಂದ ಫ್ಯಾನ್ಸ್!

ಸಿಎಂ ಭೇಟಿ ಆಗ್ತಿನಿ, ಅದರಲ್ಲೇನಿದೆ?: ವೀರಶೈವ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆಯೆಂಬ ಧ್ವನಿ ಎತ್ತಿದ್ದ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಸಂಜೆ ತಮ್ಮ ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿಗೆ ಪಯಣ ಬೆಳೆಸಿರುವುದು, ಅತ್ತ ದೆಹಲಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ಬರುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. 

ನಗರದ ಬಾಪೂಜಿ ಎಂಬಿಎ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್‌ನಲ್ಲಿ ಸೋಮವಾರ ಸಂಜೆ 4ರ ವೇಳೆ ಹೊರಟ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ, ವೀರಶೈವ ಲಿಂಗಾಯತ ಅಧಿಕಾರಿಗಳಿಗೆ ಆಗುತ್ತಿರುವ ತೊಂದರೆ ಬಗ್ಗೆ ಮುಖತಃ ಚರ್ಚೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಲಿಲ್ಲ. ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗಿರುವ ವಿಚಾರ ಮುಗಿದು ಹೋಗಿರುವ ಕಥೆ. ಅದೆಲ್ಲಾ ಬಗೆ ಹರಿದು ಹೋಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಯಾವಾಗಲೂ ಭೇಟಿಯಾಗುತ್ತೇನೆ. ಹೊಸದಾಗಿ ಏನೂ ಭೇಟಿಯಾಗುತ್ತಿಲ್ಲವಲ್ಲ. ಸಿದ್ದರಾಮಯ್ಯ ಭೇಟಿಯಾಗುವುದರಲ್ಲೇನಿದೆ ಎಂದು ಸಿಎಂ ಭೇಟಿ ವಿಚಾರವನ್ನು ಪರೋಕ್ಷವಾಗಿ ತಿಳಿಸಿದರು.

BBK 10 Breaking: ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಮೊದಲ ಸ್ಪರ್ಧಿ ಸ್ನೇಕ್ ಶ್ಯಾಮ್!

ಈಶ್ವರ ಖಂಡ್ರೆ ಮೊನ್ನೆ ಭೇಟಿಯಾಗಿದ್ದರು. ಖಂಡ್ರೆ, ನಾನು ಸಭೆಯಲ್ಲಿ ಪಾಲ್ಗೊಂಡಿದ್ದೆ ಎನ್ನುವ ಮೂಲಕ ಶಾಮನೂರು ಶಿವಶಂಕರಪ್ಪ ಡ್ಯಾಮೇಜ್‌ ಕಂಟ್ರೋಲ್‌ಗೆ ಪ್ರಯತ್ನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ತಂದೆ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹಿರಿಯರಿದ್ದಾರೆ. ಇಬ್ಬರೂ ಕುಳಿತು ಮಾತನಾಡುತ್ತಾರೆಂಬುದಾಗಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ ಪ್ರತಿಕ್ರಿಯಿಸಿದ್ದರು. ಅದರ ಬೆನ್ನಲ್ಲೇ ಶಾಮನೂರು ಶಿವಶಂಕರಪ್ಪ ಬೆಂಗಳೂರಿಗೆ ತೆರಳುತ್ತಿರುವ ವಿಚಾರವೂ ಸಾಕಷ್ಟು ಮಹತ್ವ ಪಡೆದಿದೆ.

click me!