ದೆಹಲಿಯ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಹೆಚ್ಚು ಸೂಟ್‌ಕೇಸ್ ತುಂಬಿಸುವ ಟಾರ್ಗೆಟ್ ನೀಡುವ ಸಂಬಂಧ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಸೂಚನೆ ನೀಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಲೇವಡಿ ಮಾಡಿದ್ದಾರೆ.
ಬೆಂಗಳೂರು (ಆ.03): ದೆಹಲಿಯ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಹೆಚ್ಚು ಸೂಟ್‌ಕೇಸ್ ತುಂಬಿಸುವ ಟಾರ್ಗೆಟ್ ನೀಡುವ ಸಂಬಂಧ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಸೂಚನೆ ನೀಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಲೇವಡಿ ಮಾಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರು ಕರ್ನಾಟಕದ ಎಲ್ಲ ಸಚಿವರನ್ನು ಕರೆದು ಪ್ರತಿಯೊಬ್ಬ ಸಚಿವರಿಗೆ ಟಾರ್ಗೆಟ್ ಕೊಡುತ್ತಿದ್ದಾರೆ.
ಸೂಟ್‌ಕೇಸ್‌ಗಳನ್ನು ತಂದು ಕೊಡಿ ಎಂಬ ಗುರಿ ನೀಡುವ ಸಭೆ ಇದಾಗಿದೆ. ಕರ್ನಾಟಕದ ರೈತರು, ಕಾರ್ಮಿಕರು, ಸಾಮಾನ್ಯ ಜನರು ಅತ್ಯಂತ ಹೆಚ್ಚು ಬೆಲೆ ಏರಿಕೆಯಿಂದ ಆತಂಕಕ್ಕೊಳಗಾಗಿದ್ದಾರೆ ಎಂದರು. ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದು ಎರಡು ತಿಂಗಳು ಪೂರೈಸಿದ ಬಳಿಕ ಗಂಭೀರವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಿದೆ, ಜನರಿಗೆ ನೆರವಾಗಲಿದೆ ಎಂದು ಭಾವಿಸಿದ್ದೆ. ಅನೇಕ ಜಿಲ್ಲೆಗಳಲ್ಲಿ ವಿಪರೀತ ಮಳೆ ಬರುತ್ತಿದೆ. ಅನೇಕ ಜಿಲ್ಲೆಗಳಲ್ಲಿ ಮಳೆಯೇ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಸಭೆ ಮಾಡುತ್ತಿದ್ದಾರೆ. ಇಡೀ ಕರ್ನಾಟಕದ ಸಚಿವ ಸಂಪುಟ ಈ ಸಭೆಯಲ್ಲಿ ಭಾಗವಹಿಸಿದೆ.
ಮರಣ ದೃಢೀಕರಣ ಪತ್ರ ನೀಡಲು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸೀಟು ಪಡೆಯಬೇಕೆಂದು ಚರ್ಚಿಸಲು ನಡೆಯುತ್ತಿರುವ ಸಭೆ ಇದಲ್ಲ ಎಂದು ಹೇಳಿದರು. ಅನೇಕ ಜಿಲ್ಲೆಗಳಲ್ಲಿ ಮಳೆ, ಪ್ರವಾಹದಿಂದಾಗಿ ಬಿತ್ತನೆ ಮಾಡಿಲ್ಲ. ಒಂದೆಡೆ ಹಸಿರು ಬರ, ಇನ್ನೊಂದೆಡೆ ಒಣ ಬರ ರಾಜ್ಯವನ್ನು ಕಾಡುತ್ತಿದೆ. ಇದರ ಜೊತೆಗೆ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಬರೆಯೂ ಜನರ ಮೇಲೆ ಬಿದ್ದಿದೆ. ಕರ್ನಾಟಕದಲ್ಲಿ ಹಾಲು, ಮೊಸರು, ಮಜ್ಜಿಗೆ, ತರಕಾರಿ, ವಿದ್ಯುತ್, ಕಟ್ಟಡ ಶುಲ್ಕ, ಬಸ್ ಟಿಕೆಟ್, ಮದ್ಯದ ದರ ಹೆಚ್ಚಿಸಲಾಗಿದೆ. ಗ್ಯಾರಂಟಿ ಹೆಸರಿನಲ್ಲಿ ಸಂಗ್ರಹ ನಡೆದಿದೆ. ಸೂಟ್‌ಕೇಸ್ ತುಂಬಿಸಿಕೊಂಡು ದೆಹಲಿಗೆ ಕೊಡುವುದು, ಚುನಾವಣೆ ತಯಾರಿ ಮಾಡುವುದು ಕಾಂಗ್ರೆಸ್ ಸರ್ಕಾರದ ಉದ್ದೇಶ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರದಿಂದ ಜನ ವಿರೋಧಿ ನೀತಿ: ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಇದು ಖಂಡನೀಯ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಹೇಳಿದ್ದಾರೆ. ನಗರದ ಫ್ರೀಡಂಪಾರ್ಕ್ ಬಳಿ ವಿಧಾನಸಭೆಯಲ್ಲಿ ಬಿಜೆಪಿಯ 10 ಶಾಸಕರ ಅಮಾನತು ಮತ್ತು ಪ್ರತಿಪಕ್ಷಗಳ ಒಕ್ಕೂಟದ ಸಭೆಗೆ ಆಗಮಿಸಿದ ರಾಜಕೀಯ ಪಕ್ಷಗಳ ನಾಯಕರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳ ನಿಯೋಜನೆ ಮಾಡಿದ ಕ್ರಮವನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೇವಲ 60 ದಿನದಲ್ಲಿ ಜನತೆ ತತ್ತರಿಸಿ ಹೋಗುವಂತಾಗಿದೆ.
ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ರಾಜ್ಯ ಸರ್ಕಾರದ ನಡವಳಿಕೆ, ಧೋರಣೆ, ಕಾರ್ಯವೈಖರಿಯು ಸಮಾಜಕ್ಕೆ ನಿರಾಸೆಯನ್ನು ತಂದಿದೆ ಎಂದು ಟೀಕಿಸಿದರು. ರಾಜ್ಯ ಸರ್ಕಾರ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಕಾನೂನು, ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಸಮಾಜವಿರೋಧಿ ಶಕ್ತಿಗಳನ್ನು ಹೇಳುವವರು, ಕೇಳುವವರಿಲ್ಲವಾಗಿದೆ. ಇಡೀ ಕರ್ನಾಟಕದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಜೈನ ಮುನಿಯನ್ನು ಬರ್ಬರವಾಗಿ ಕತ್ತರಿಸಿ ಹಾಕಿದ್ದಾರೆ. ಯುವಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದೇಶದ್ರೋಹಿಗಳು, ಭಯೋತ್ಪಾದಕರನ್ನು ಸದೆಬಡಿಯಬೇಕು ಎಂದು ಹೇಳಿದರು.