
ಮಂಡ್ಯ(ಮಾ.29): ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಾಗಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಸಂಸದೆ ಸುಮಲತಾ ಮೌನಕ್ಕೆ ಶರಣಾಗಿದ್ದಾರೆ. ಅಲ್ಲದೆ, ಗುರುವಾರ ನಗರದಲ್ಲಿ ನಡೆದ ಜೆಡಿಎಸ್-ಬಿಜೆಪಿ ಸಮನ್ವಯ ಸಮಿತಿ ಸಭೆಗೂ ಹಾಜರಾಗದೆ ದೂರ ಉಳಿದಿದ್ದು, ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ.
ಸುಮಲತಾ ಮೌನ ನಡೆಗೆ ಮೈತ್ರಿ ನಾಯಕರು ಮುನಿಸು ಪ್ರದರ್ಶಿಸುತ್ತಿರುವಂತೆ ಕಂಡು ಬರುತ್ತಿದೆ. ಹೀಗಾಗಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕೆ.ಸಿ.ನಾರಾಯಣಗೌಡ ಅವರೂ ಸಹ ಸುಮಲತಾ ಹೆಸರನ್ನು ಸ್ಮರಿಸುವ ಗೋಜಿಗೂ ಹೋಗಲಿಲ್ಲ.
ಸುಮಲತಾ ಜೊತೆ ಶೀಘ್ರ ಭೇಟಿ, ಪಕ್ಷದಲ್ಲಿ ಗೌರವಯುತ ಸ್ಥಾನದ ಭರವಸೆ: ವಿಜಯೇಂದ್ರ
ಬೆಂಬಲಿಗರ ಸಭೆ:
ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಅವರು ಶನಿವಾರ (ಮಾ.30) ಬೆಂಗಳೂರಿನ ತಮ್ಮ ನಿವಾಸದಲ್ಲಿ ಬೆಂಬಲಿಗರು, ಆಪ್ತರ ಸಭೆ ಕರೆದಿದ್ದು ತಮ್ಮ ಮುಂದಿನ ರಾಜಕೀಯ ನಡೆಯನ್ನು ನಿರ್ಧರಿಸಲಿದ್ದಾರೆ.
ಅಂದು ಮಧ್ಯಾಹ್ನ 2.30ಕ್ಕೆ ಸಭೆ ನಿಗದಿಪಡಿಸಿದ್ದು, ಮುಂದಿನ ರಾಜಕೀಯ ನಡೆ ಹೇಗಿರಬೇಕೆಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗುವ ಮೂಲಕ ಜೆಡಿಎಸ್-ಬಿಜೆಪಿ ಮೈತ್ರಿ ಒಪ್ಪಿ ಮೈತ್ರಿ ಧರ್ಮ ಪಾಲಿಸುವುದೋ ಅಥವಾ ಬಿಜೆಪಿ ಹೈಕಮಾಂಡ್‌ನಿಂದ ಸಿಗಬಹುದಾದ ಸ್ಥಾನ-ಮಾನಗಳನ್ನು ನಿರೀಕ್ಷಿಸುವುದೋ ಅಥವಾ ರಾಜಕೀಯವಾಗಿ ತಟಸ್ಥ ಧೋರಣೆ ಅನುಸರಿಸುವುದೋ ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.