ದೇಶದ ಸಂಸ್ಕೃತಿ, ಧರ್ಮ ಉಳಿಬೇಕಂದ್ರ ಬಿಜೆಪಿಗೆ ವೋಟು ಹಾಕಿ: ಪಿಎಫ್ ಪಾಟೀಲ್

Published : Feb 26, 2023, 12:49 PM IST
ದೇಶದ ಸಂಸ್ಕೃತಿ, ಧರ್ಮ ಉಳಿಬೇಕಂದ್ರ ಬಿಜೆಪಿಗೆ ವೋಟು ಹಾಕಿ: ಪಿಎಫ್ ಪಾಟೀಲ್

ಸಾರಾಂಶ

ಭಾರತ ಮಹಿಳೆಯನ್ನು ಪೂಜಿಸಿ, ಆರಾಧಿಸುವ ದೇಶವಾಗಿದೆ. ದೇಶವನ್ನು ಮಾತೆಗೆ ಹೊಲಿಸಿ, ಪೂಜೆ ಸಲ್ಲಿಸುವ ಅಭಿಯಾನ ಪ್ರಾರಂಭಿಸಿದ್ದು ಶ್ಲಾಘನೀಯ. ದೇಶದ ಸಂಸ್ಕೃತಿ, ಧರ್ಮದ ಉಳಿವಿಗಾಗಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಬೇಕಾದ ಅಗತ್ಯತೆ ಇದೆ ಎಂದು ಬಿಜೆಪಿ ಮುಖಂಡ ಪಿ.ಎಫ್‌.ಪಾಟೀಲ ಹೇಳಿದರು.

ರಾಮದುರ್ಗ (ಫೆ.26) : ಭಾರತ ಮಹಿಳೆಯನ್ನು ಪೂಜಿಸಿ, ಆರಾಧಿಸುವ ದೇಶವಾಗಿದೆ. ದೇಶವನ್ನು ಮಾತೆಗೆ ಹೊಲಿಸಿ, ಪೂಜೆ ಸಲ್ಲಿಸುವ ಅಭಿಯಾನ ಪ್ರಾರಂಭಿಸಿದ್ದು ಶ್ಲಾಘನೀಯ. ದೇಶದ ಸಂಸ್ಕೃತಿ, ಧರ್ಮದ ಉಳಿವಿಗಾಗಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಬೇಕಾದ ಅಗತ್ಯತೆ ಇದೆ ಎಂದು ಬಿಜೆಪಿ ಮುಖಂಡ ಪಿ.ಎಫ್‌.ಪಾಟೀಲ ಹೇಳಿದರು.

ಭಾರತೀಯ ಜನತಾ ಪಕ್ಷದ(BJP) ವಿಜಯ ಸಂಕಲ್ಪಯಾತ್ರೆ(Vijaya sankalpa yatre)ಯ ಪ್ರಯುಕ್ತ ಗುರುವಾರ ತಾಲೂಕಿನ ಮನಿಹಾಳ ಗ್ರಾಮ ಪಂಚಾಯತಿಯಲ್ಲಿ ನ್ಯಾಯವಾದಿ ಹಾಗೂ ಬಿಜೆಪಿ ಮುಖಂಡ ಪಿ.ಎಫ್‌.ಪಾಟೀಲ(PF Patil) ಅಭಿಮಾನಿ ಬಳಗದ ನೇತೃತ್ವದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಭಾರತ ಮಾತಾ ಫೋಟೋ ಪೂಜಾ ಅಭಿಯಾನ ಚಾಲನೆಯಲ್ಲಿ ಮಾತನಾಡಿದ ಅವರು, ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳ ಕೈ ಬಲಪಡಿಸಿ, ರಾಜ್ಯದಲ್ಲಿ ಜನಪರ ಸರ್ಕಾರ ಅಧಿಕಾರಕ್ಕೆ ಬರಬೇಕಾದಲ್ಲಿ ಬಿಜೆಜಿ ಪಕ್ಷದಕಾರ್ಯಕರ್ತರು ಹಾಗೂ ಅಭಿಮಾನಿಗಳು ಈ ಬಾರಿ ರಾಜ್ಯಾದ್ಯಂತ 150ಕ್ಕೂ ಹೆಚ್ಚು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಸನ್ನಧರಾಗಿದ್ದಾರೆ. ರಾಮದುರ್ಗ ಮತಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿ ಆಯ್ಕೆಗೆ ಕಾರ್ಯಕರ್ತರು ಹಾಗೂ ಮುಖಂಡರು ಉಭಯ ಸರ್ಕಾರಗಳ ಸಾಧನೆಗಳನ್ನು ಜನತೆಗೆ ತಿಳಿಸಿ ಪಕ್ಷ ಸಂಘಟಿಸಬೇಕು ಎಂದು ಮನವಿ ಮಾಡಿದರು.

ಶಿವಾಜಿ ಪ್ರತಿಮೆಗೆ ಅಡ್ಡಿಪಡಿಸಿಲ್ಲ, ಕೀಳು ರಾಜಕೀಯ ಮಾಡಲ್ಲ: ರಮೇಶ್‌ ಜಾರಕಿಹೊಳಿ

ಇದೇ ಸಂದರ್ಭದಲ್ಲಿ ಸುರೇಬಾನ, ಮನಿಹಾಳ ಸೇರಿದಂತೆ ಸುತ್ತಮುತ್ತಲಿನ ವಿವಿಧ ಗ್ರಾಮಗಳಿಗೆ ಬೇಟಿ ನೀಡಿ ಪಕ್ಷದಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಚರ್ಚೆ ನಡಿಸಿ, ಬೂತ್‌ ಕಮಿಟಿಗಳನ್ನು ಬಲಿಷ್ಠಗೊಳಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾರುತಿ ಪ್ಯಾಟಿ, ಮೈಲಾರಪ್ಪ ಶಿರಿಯನ್ನವರ, ಪ್ರವೀಣ ಗೊಣಬಾಳ, ಪ್ರಭುಗೌಡ ಪಾಟೀಲ, ಈಶ್ವರ ಮೆಳ್ಳಿಕೇರಿ, ಚೇತನಗಾಣಿಗೇರ, ಇಮಾಮಸಾಬ ಮುಜಾವರ ಸೇರಿದಂತೆ ಪಿ.ಎಫ್‌.ಪಾಟೀಲ ಅಭಿಮಾನಿ ಬಳಗದವರು ಇದ್ದರು.

ಒಳ್ಳೆ ಮಠಾಧೀಶರು ರಾಜಕೀಯಕ್ಕೆ ಬಂದರೆ ಸ್ವಾಗತ

ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳ ಕೈ ಬಲಪಡಿಸಿ, ರಾಜ್ಯದಲ್ಲಿ ಜನಪರ ಸರ್ಕಾರ ಅಧಿಕಾರಕ್ಕೆ ಬರಬೇಕಾದಲ್ಲಿ ಬಿಜೆಜಿ ಪಕ್ಷದಕಾರ್ಯಕರ್ತರು ಹಾಗೂ ಅಭಿಮಾನಿಗಳು ಈ ಬಾರಿ ರಾಜ್ಯಾದ್ಯಂತ 150ಕ್ಕೂ ಹೆಚ್ಚು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಸನ್ನಧರಾಗಿದ್ದಾರೆ. ರಾಮದುರ್ಗ ಮತಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿ ಆಯ್ಕೆಗೆ ಕಾರ್ಯಕರ್ತರು ಹಾಗೂ ಮುಖಂಡರು ಉಭಯ ಸರ್ಕಾರಗಳ ಸಾಧನೆಗಳನ್ನು ಜನತೆಗೆ ತಿಳಿಸಿ ಪಕ್ಷ ಸಂಘಟಿಸಬೇಕು.

ಪಿ.ಎಫ್‌.ಪಾಟೀಲ, ಬಿಜೆಪಿ ಮುಖಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ