ಲೋಕಸಭೆ ಚುನಾವಣೆ ಎಂಪಿ ಅಭ್ಯರ್ಥಿ ನಾನೇ ಎಂದು ಬೆಂಬಲಿಸಿ: ಎಚ್‌.ಡಿ.ಕುಮಾರಸ್ವಾಮಿ

By Govindaraj SFirst Published Mar 14, 2024, 5:43 AM IST
Highlights

ಪ್ರಜ್ವಲ್ ರೇವಣ್ಣ ಈ ಕ್ಷೇತ್ರದ ಅಭ್ಯರ್ಥಿ ಅಲ್ಲ. ಕುಮಾರಸ್ವಾಮಿಯೇ ಈ ಕ್ಷೇತ್ರದ ಅಭ್ಯರ್ಥಿ ಎಂದುಕೊಂಡು ಗೆಲ್ಲಿಸಿ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಕಂಬನಿ ಮಿಡಿದರು.

ಹಾಸನ (ಮಾ.14): ಪ್ರಜ್ವಲ್ ರೇವಣ್ಣ ಈ ಕ್ಷೇತ್ರದ ಅಭ್ಯರ್ಥಿ ಅಲ್ಲ. ಕುಮಾರಸ್ವಾಮಿಯೇ ಈ ಕ್ಷೇತ್ರದ ಅಭ್ಯರ್ಥಿ ಎಂದುಕೊಂಡು ಗೆಲ್ಲಿಸಿ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಕಂಬನಿ ಮಿಡಿದರು. ಇನ್ನೊಂದೆಡೆ ನಾನು ಚಿಕಿತ್ಸೆ ಪಡೆದು ರಾಜ್ಯಾದ್ಯಂತ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುವುದಾಗಿ ಹೇಳಿದ ವೇಳೆ ಸ್ಥಳದಲ್ಲೆ ಇದ್ದ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಕಣ್ಣು ಕೂಡ ತೇವವಾದ ಪ್ರಸಂಗ ನಡೆಯಿತು. ನಗರದ ಬಿ.ಎಂ.ರಸ್ತೆ ಬಳಿ ಇರುವ ಜ್ಷಾನಾಕ್ಷಿ ಕಲ್ಯಾಣ ಮಂಟಪದಲ್ಲಿ ನಡೆದ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಡೆಯಲು ಸಮಸ್ಯೆ ಇದ್ದರೂ ರಾಜ್ಯಸಭೆಯ ಅಧಿವೇಶನದಲ್ಲಿ ಭಾಗವಹಿಸಿ ರಾಜ್ಯದ ರೈತರ ನೀರಾವರಿ ಕೊಬ್ಬರಿ ಬೆಲೆಯ ಬಗ್ಗೆ ಮಾತನಾಡಿ ಸರ್ಕಾರದ ಗಮನ ಸೆಳೆದಿದ್ದಾರೆ. ಇದು ಹಾನಸ ಜಿಲ್ಲೆಯ ಜನತೆ ಕೊಟ್ಟ ಶಕ್ತಿ. ಶ್ರೀರಾಮ ದೇವರ ಕಟ್ಟೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಮುಂದಿನ ಅಭ್ಯರ್ಥಿ ಎಂದು ದೇವೇಗೌಡರು ಘೋಷಣೆ ಮಾಡಿದರು. ನಂತರ ಯಾವ ರೀತಿ ಚರ್ಚೆಗಳು ಹಾಸನ ಜಿಲ್ಲೆ ಹಾಗೂ ರಾಜ್ಯದಲ್ಲಿ ನಡೆಯುತ್ತಿದೆ ಎಂದು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. 

ಪಕ್ಷ ಗುಡಿಸು ಅಂದ್ರೆ ಗುಡಿಸ್ತೀನಿ, ಒರೆಸು ಅಂದ್ರೆ ಒರೆಸ್ತೀನಿ: ನಳಿನ್ ಕುಮಾರ್ ಕಟೀಲ್

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಪ್ರಾರಂಭವಾಗಿ ಒಂದು ವರ್ಷ ಪೂರೈಸಿ ಪ್ರತಿ ದಿನ ೫ ಗ್ಯಾರಂಟಿ ಮೇಲೆ ಲೋಕಸಭೆ ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ ಎಂದು ಹೇಳಿದರು. ‘೫೨ ಸಾವಿರ ಕೋಟಿ ರು. ವೆಚ್ಚದ ೫ ಗ್ಯಾರಂಟಿ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಗ್ಯಾರಂಟಿಗಳಿಗಾಗಿ ೧ ಲಕ್ಷದ ೫ ಸಾವಿರ ಕೋಟಿ ರು. ಹಣ ಒಂದೇ ವರ್ಷದಲ್ಲಿ ರಾಜ್ಯ ಸರ್ಕಾರ ಖರ್ಚು ಮಾಡಿದೆ. ಅದಕ್ಕೆ ಜಾಹೀರಾತು ಕೊಡುತ್ತಾರೆ. ಸಾಲ ಮಾಡಿ ತುಪ್ಪ ತಿನ್ನುವ ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದರು.

ಮೈತ್ರಿಯಿಂದ ಬಿಜೆಪಿ ಶಕ್ತಿ ಹೆಚ್ಚಾಗಿದೆ: ಬಿಜೆಪಿ- ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಕೂಡ ಶಕ್ತಿ ಜಾಸ್ತಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ೨ ಲಕ್ಷ ಜೆಡಿಎಸ್ ಮತ ಇದೆ. ಅದೇ ರೀತಿ ಶಿವಮೊಗ್ಗದಲ್ಲಿ ಪಕ್ಷದ ಶಕ್ತಿ ಇದೆ. ಅದನ್ನು ಹಾಸನ ಜಿಲ್ಲೆಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ಪಕ್ಷದವರು ಜೆಡಿಎಸ್ ಸೋಲಿಸಲು ಪಕ್ಷ ಕಡಿಮೆ ಮತ ಪಡೆದಿದೆ ಎಂದು ತಿಳಿಸಿದರು.

‘ಭವಿಷ್ಯದಲ್ಲಿ ಮಂಡ್ಯ. ಹಾಸನ ಕೋಲಾರದಲ್ಲಿ. ಜೆಡಿಎಸ್ ಅಭ್ಯರ್ಥಿ ನಿಲ್ಲಿಸಲು ಬಿಜೆಪಿ ಅವಕಾಶ ನೀಡಿದೆ. ನಾವು ಕೇಳಿದರೆ ಇನ್ನೂ ಎರಡು ಕ್ಷೇತ್ರ ಕೊಡುತ್ತಿದ್ದರು. ಅದರೆ ಚುನಾವಣೆ ನಡೆಯುವ ರೀತಿ ನೋಡಿದರೆ ನಮ್ಮಿಂದ ಸೇವೆ ಪಡೆದವರು ಕೈ ಕೊಟ್ಟಿದ್ದಾರೆ. ಜಾತಿಯಲ್ಲಿ ಬಡತನ ಇಲ್ಲ. ಲಿಂಗಾಯಿತರು, ಒಕ್ಕಲಿಗರಲ್ಲಿ ಬಡವರಿದ್ದಾರೆ. ಅದೇ ರೀತಿ ದಲಿತರಲ್ಲೂ ಕೂಡ ಬಡವರಿದ್ದಾರೆ. ಎಲ್ಲಾ ಜಾತಿಯವರು ಬಡವರಿದ್ದಾರೆ. ಜಾತಿಗಣತಿ ವರದಿ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ಕಾಂತೇಶ್‌ ಟಿಕೆಟ್‌ಗಾಗಿ ಈಶ್ವರಪ್ಪ ನನ್ನ ಜೊತೆ ದೆಹಲಿಗೆ ಬರಲಿ: ಬಿ.ಎಸ್‌.ಯಡಿಯೂರಪ್ಪ

ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಶಾಸಕರಾದ ಎಚ್.ಪಿ. ಸ್ವರೂಪ್, ಸಿ.ಎನ್. ಬಾಲಕೃಷ್ಣ, ಎ. ಮಂಜು, ಮಾಜಿ ಸಚಿವರಾದ ಎಚ್.ಕೆ. ಕುಮಾರಸ್ವಾಮಿ, ಲಿಂಗೇಶ್, ಬಿ.ವಿ. ಕರೀಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಭೋಜರಾಜ್, ತೋ.ಚ. ಅನಂತಸುಬ್ಬರಾಯ್, ಹುಡಾ ಮಾಜಿ ಅಧ್ಯಕ್ಷ ಕೆ.ಎಂ. ರಾಜೇಗೌಡ, ಮುಖಂಡರಾದ ಸಂತೋಷ್, ಎಚ್‌ಡಿಎಫ್‌ಸಿ ಬ್ಯಾಂಕ್ ಅಧ್ಯಕ್ಷ ನಾಗರಾಜು, ಬಿದರಿಕೆರೆ ಜಯರಾಂ, ಗಿರೀಶ್ ಚನ್ನವೀರಪ್ಪ, ಪ್ರಭುಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಸಿ.ಆರ್. ಶಂಕರ್, ಅಶೋಕ್, ಮಾಧ್ಯಮ ವಕ್ತಾರ ಹೊಂಗೆರೆ ರಘು ಇದ್ದರು.

click me!