ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ: ಈ ಬಾರಿ ಸುಪ್ರೀಂಕೋರ್ಟ್​ನಿಂದ ನೋಟಿಸ್

By Suvarna NewsFirst Published Jun 3, 2020, 6:06 PM IST
Highlights

ಹಾಸನ ಕ್ಷೇತ್ರದ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಈ ಬಾರಿ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಏನಿದು ನೋಟಿಸ್?

ನವದೆಹಲಿ, (ಜೂನ್.03): ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಐಟಿ, ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಬಿಜೆಪಿ ನಾಯಕ ಎ.ಮಂಜು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.

ಈ ಹಿನ್ನೆಲೆಯಲ್ಲಿ ಅರ್ಜಿ ಸಂಬಂಧ ಪ್ರತಿಕ್ರಿಯಿಸಲು ಸುಪ್ರೀಂ ಕೋರ್ಟ್ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣಗೆ ನೋಟಿಸ್ ಜಾರಿ ಮಾಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಸ್ಟ ಎದುರಾಗಿದೆ.

ಸಂಸದ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್

2019ರ ಲೋಕಸಭಾ ಎಲೆಕ್ಷನ್ ವೇಳೆ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ ಅವರು ಐಟಿ, ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಎ.ಮಂಜು ಹೈಕೋರ್ಟ್ ಮೆಟ್ಟಿಲೇರಿದ್ದರು.

ಆದ್ರೆ, ಕರ್ನಾಟಕ ಹೈಕೋರ್ಟ್ ಆರ್ಜಿಯನ್ನು ವಜಾ ಮಾಡಿತ್ತು. ಇದರಿಂದ ಎ.ಮಂಜು ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆಗೆ ಸಮ್ಮತಿಸಿದ್ದು, ಮೊದಲ ಹಂತವಾಗಿ ಪ್ರಜ್ವಲ್‌ಗೆ ನೊಟೀಸ್ ನೀಡಿದೆ.

ಮಂಜು ಆರೋಪವೇನು..?

ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಆಸ್ತಿಗಳಿಕೆ ಮಾಡಿದ್ದಾರೆ. ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿದ್ದಾರೆ. ಹಲವು ಕಂಪನಿಗಳಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆದರೆ, ಆಸ್ತಿ ಘೋಷಣೆ ಮಾಡುವಾಗ ಪ್ರಮಾಣ ಪತ್ರದಲ್ಲಿ ಇದನ್ನು ಉಲ್ಲೇಖಿಸಿಲ್ಲ. ದೇವೇಗೌಡರ ಜೊತೆಗಿನ ಸಾಲದ ವ್ಯವಹಾರವನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿರುವ ಎ.ಮಂಜು, ಸಂಸದ ಸ್ಥಾನವನ್ನು ಅಸಿಂಧುಗೊಳಿಸಬೇಕೆಂದು ಅರ್ಜಿ ಸಲ್ಲಿಸಿದ್ದಾರೆ.

click me!