ಜನಾರ್ದನ ರೆಡ್ಡಿ ಬಳ್ಳಾರಿ ಭೇಟಿಗೆ ಸುಪ್ರೀಂಕೋರ್ಟ್‌ ನಿರಾಕರಣೆ

By Kannadaprabha News  |  First Published Apr 20, 2023, 11:27 AM IST

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿಗೆ ಭೇಟಿ ನೀಡಲು ಅವಕಾಶ ಕೋರಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದ್ದು, ಅವರಿಗೆ ಬಳ್ಳಾರಿಗೆ ಭೇಟಿ ನೀಡಲು ಅನುಮತಿ ನಿರಾಕರಿಸಿದೆ. 


ನವದೆಹಲಿ (ಏ.20): ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿಗೆ ಭೇಟಿ ನೀಡಲು ಅವಕಾಶ ಕೋರಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದ್ದು, ಅವರಿಗೆ ಬಳ್ಳಾರಿಗೆ ಭೇಟಿ ನೀಡಲು ಅನುಮತಿ ನಿರಾಕರಿಸಿದೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮಗೆ ನೀಡಲಾಗಿರುವ ಜಾಮೀನಿನ ಷರತ್ತನ್ನು ಸಡಿಲಗೊಳಿಸಬೇಕು.  

ಬಳ್ಳಾರಿಗೆ ಭೇಟಿ ನೀಡಲು ಅವಕಾಶ ನೀಡಬೇಕು ಎಂದು ಕೋರಿ ಅವರು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ಆರ್‌.ಶಾ ಮತ್ತು ನ್ಯಾ.ಸಿ.ಟಿ.ರವಿಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಅವರ ಮನವಿಯನ್ನು ತಿರಸ್ಕರಿಸಿತು. ಅಕ್ರಮ ಗಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಗುರಿಯಾಗಿರುವ ರೆಡ್ಡಿಗೆ, ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ಬಳ್ಳಾರಿಗೆ ಭೇಟಿ ನೀಡಬಾರದು ಎಂಬುದು ಜಾಮೀನಿನ ಷರತ್ತುಗಳಲ್ಲಿ ಒಂದಾಗಿದೆ.

Tap to resize

Latest Videos

ಜೆಡಿಎಸ್‌ನಲ್ಲಿ ಒಟ್ಟು 54 ಒಕ್ಕಲಿಗರಿಗೆ, 37 ಲಿಂಗಾಯತರಿಗೆ ಟಿಕೆಟ್‌

ಜನಸಾಗರದ ಮಧ್ಯ ಜನಾರ್ದನ ರೆಡ್ಡಿ ನಾಮಪತ್ರ ಸಲ್ಲಿಕೆ: ಕಲ್ಯಾಣ ಕರ್ನಾಟಕ ಪಕ್ಷದ ಸಂಸ್ಥಾಪಕ ಅಧ್ಯಕ್ಷ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಇದಕ್ಕಿಂತ ಪೂರ್ವದಲ್ಲಿ ಕನಕಗಿರಿ ರಸ್ತೆಯಲ್ಲಿರುವ ತಾಲೂಕು ಕ್ರೀಡಾಂಗಣದಿಂದ ತೆರೆದ ವಾಹನದಲ್ಲಿ ರೆಡ್ಡಿ ಪತ್ನಿ ಲಕ್ಷ್ಮೇ ಅರುಣಾ, ಪುತ್ರಿ ಬ್ರಹ್ಮೀಣಿ, ಅಳಿಯ ರಾಜೀವ್‌ ರೆಡ್ಡಿಯೊಂದಿಗೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

ಜನಸಾಗರ: ಗಂಗಾವತಿ ವಿಧಾನ ಸಭಾ ಕ್ಷೇತ್ರದಿಂದ ಅಸಂಖ್ಯಾತ ಕಾರ್ಯಕರ್ತರು ಭಾಗವಹಿಸಿದ್ದ ಮೆರವಣಿಯಲ್ಲಿ ಮಹಿಳೆಯರು, ಯುವಕರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಚೆನ್ನಬಸವ ಸ್ವಾಮಿ ವೃತ್ತ, ಮಹಾವೀರ ವೃತ್ತ,ಮಹಾತ್ಮಗಾಂಧಿ ವೃತ್ತ, ಬಸವಣ್ಣ ವೃತ್ತದಿಂದ ಶ್ರೀಕಷ್ಣ ದೇವರಾಯ ವೃತ್ತದವರಿಗೂ ಮೆರವಣಿಗೆ ಜರುಗಿತು.ಮೆರೆವಣಿಗೆಯಲ್ಲಿ ಡೊಳ್ಳು ಕುಣಿತ, ತಾಷ ಸೇರಿದಂತೆ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು.

ಜೆಸಿಬಿಯಿಂದ ಬೃಹತ್‌ ಹಾರ: ಕೆಆರ್‌ಪಿಪಿ ಅಭ್ಯರ್ಥಿ ಜನಾರ್ದನ ರೆಡ್ಡಿ ಗಾಂಧಿ ವೃತ್ತಕ್ಕೆ ಬರುತ್ತಿದ್ದಂತೆ ಅಭಿಮಾನಿಗಳು ಜೆಸಿಬಿ ಮೂಲಕ ಬೃಹತ್‌ ಹೂವಿನ ಹಾರ ಮತ್ತು ಪಕ್ಷದ ಚಿಹ್ನೆಯಾಗಿರುವ ಫುಡ್‌ಬಾಲ್‌ನ ಸರ ಹಾಕಿದರು. ಅಲ್ಲದೆ ಹೂವಿನ ಮಳೆಗೈದರು. ಸುಡ ಬಿಸಿಲಿನಲ್ಲಿ ಜನ ಸಾಗರ ಹರಿದು ಬಂದು ರೆಡ್ಡಿ ಬೆಂಬಲ ವ್ಯಕ್ತಪಡಿಸಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ನನ್ನನ್ನು ಸೋಲಿಸಲು ಜೆಡಿಎಸ್‌-ಬಿಜೆಪಿ ಒಳಒಪ್ಪಂದ: ಸಿದ್ದರಾಮಯ್ಯ

ಪೊಲೀಸರ ಹರಸಾಹಸ: ನಗರದಲ್ಲಿ ಜೆಡಿಎಸ್‌ ಮತ್ತು ಕೆಆರ್‌ಪಿಪಿ ಪಕ್ಷದ ಅಭ್ಯರ್ಥಿಗಳು ಒಂದೇ ದಿನ ನಾಮಪತ್ರ ಸಲ್ಲಿಸುವ ಸಮಯ ನಿಗದಿಯಾಗಿದ್ದರಿಂದ ಮೆರವಣಿಗೆಯನ್ನು ತ್ವರಿತಗತಿಯಲ್ಲಿ ಸಾಗಿಸಲು ಪೊಲೀಸರು ಹರಸಾಹಸ ಮಾಡಿದರು. ಮೊದಲಿಗೆ ಜೆಡಿಎಸ್‌ ಮೆರವಣಿಗೆ ಪ್ರಾರಂಭವಾಗಿದ್ದರು ಸಹ ತ್ವರಿತಗತಿಯಲ್ಲಿ ಮೆರವಣಿಗೆ ಸಾಗದ ಕಾರಣ ಪೊಲೀಸರು ಜನರನ್ನು ಮುಂದೆ ಸಾಗಿಸಲು ಹರಸಾಹಸ ನಡೆಸಿದರು. ನಂತರ ಕೆಆರ್‌ಪಿಪಿ ಪಕ್ಷದ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು.

click me!