
ಕೊಪ್ಪಳ (ಮೇ.27): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜವೆಂಕಟಪ್ಪ ನಾಯಕ ಗೆಲುವು ಸಾಧಿಸಿದ ಹಿನ್ನೆಲೆ ಕಾರ್ಯಕರ್ತರು ಸುರಪುರದಿಂದ ಅಂಜನಾದ್ರಿ ವರೆಗೆ ಪಾದಯಾತ್ರೆ ನಡೆಸಿದರು.
ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಸ್ಪರ್ಧೆ. ಈ ವೇಳೆ ರಾಜವೆಂಕಟಪ್ಪನಾಯಕರ ಅಭಿಮಾನಿಗಳು ದೇವರ ಮೊರೆ ಹೋಗಿದ್ದರು. ರಾಜಾವೆಂಕಟಪ್ಪ ನಾಯಕ್ ಗೆದ್ದರೆ ಅಂಜನಾದ್ರಿವರೆಗೆ ಪಾದಯಾತ್ರೆ ನಡೆಸೋದಾಗಿ ಹರಕೆ ಹೊತ್ತಿದ್ದ ಕಾರ್ಯಕರ್ತರು ಇದೀಗ ಗೆಲುವು ಸಾಧಿಸಿರುವ ಹಿನ್ನೆಲೆ ಸುರಪುರದಿಂದ ಅಂಜಾನಾದ್ರಿವರೆಗೆ ಸುಮಾರು 200 ಕಿಲೋಮೀಟರ್ ಪಾದಯಾತ್ರೆ ನಡೆಸುವ ಹರಕೆ ತೀರಿಸಿದ ಕಾರ್ಯಕರ್ತರು.
ರಾಜಾ ವೆಂಕಟಪ್ಪ ನಾಯಕ ಗೆಲುವು ಹಿನ್ನೆಲೆ 18ಕಿಮೀ ದೀಡ್ ನಮಸ್ಕಾರ ಹಾಕಿದ ಅಭಿಮಾನಿ
ಪಾದಯಾತ್ರೆ ಮೂಲಕ ಅಂಜನಾದ್ರಿಗೆ ಆಗಮಿಸಿದ 50 ಕ್ಕೂ ಹೆಚ್ಚು ಕಾರ್ಯಕರ್ತರು. ಕಾರ್ಯಕರ್ತರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಬರಮಾಡಿಕೊಂಡರು.
ಪೇಠ ಅಮ್ಮಾಪುರ ಗ್ರಾಮದಿಂದ ಪಾದಯಾತ್ರೆ ಆರಂಭಿಸಿದ್ದ ಕಾರ್ಯಕರ್ತರು. ಪಾದಯಾತ್ರೆಗೆ ಹಿರಿಯ ಕಾಂಗ್ರೆಸ್ ಮುಖಂಡ ವಿಠಲ್ ಯಾದವ್ ಚಾಲನೆ ನೀಡಿದ್ದರು.
2023ರ ವಿಧಾನಸಭೆ ಚುನಾವಣೆಯಲ್ಲಿ ಸುರಪುರ ಮತಕ್ಷೇತ್ರದಿಂದ ರಾಜಾ ವೆಂಕಟಪ್ಪ ನಾಯಕ ಅವರು ಗೆದ್ದು ಬರಲೆಂದು ಪೇಠ ಅಮ್ಮಾಪುರ ಗ್ರಾಮದಿಂದ ಅಂಜನಾದ್ರಿ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಬರುತ್ತೇನೆ ಎಂದು ಕಾಂಗ್ರೆಸ್ ಯುವ ಮುಖಂಡ ಮಹೇಶ ಯಾದವ್ ಬೇಡಿಕೊಂಡಿದ್ದ ಹರಕೆ ಪ್ರಯುಕ್ತ ಗ್ರಾಮದ ಹನುಮಂತ ದೇವರ ದೇವಸ್ಥಾನದಿಂದ ಪಾದಯಾತ್ರೆಯನ್ನು ಆರಂಭಿಸಲಾಗಿತ್ತು.
ರಾಜುಗೌಡ ಶಾಸಕರಾಗಲೆಂದು ನಾಲ್ಕು ವರ್ಷ ಬರಿಗಾಲಲ್ಲೇ ತಿರುಗಿದವರು!
ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು, ಸರ್ವ ಜನಾಂಗದವರ ಪ್ರೀತಿಗೆ ಪಾತ್ರರಾಗಿರುವ ಒಬ್ಬ ಜನಾನುರಾಗಿ ನಾಯಕರಾಗಿದ್ದಾರೆ. ಎಲ್ಲ ಸಮುದಾಯದ ಜನರನ್ನು ಸಮಾನಾಗಿ ಕಾಣುವ ಗುಣವನ್ನು ಹೊಂದಿರುವ ಅವರು ಕೊಟ್ಟಮಾತಿನಂತೆ ನಡೆದುಕೊಳ್ಳುವಂತ ವ್ಯಕ್ತಿಯಾಗಿದ್ದಾರೆ. ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ಗೆಲುವು ಸಾಧಿಸಿ ನಾಲ್ಕನೇ ಬಾರಿ ವಿಧಾನಸಭೆಗೆ ಪ್ರವೇಶಿಸಿದ್ದು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ತುಂಬಾ ಸಂತೋಷ ತಂದಿದೆ ಎಂದು ಹೇಳಿದರು.
- ವಿಠಲ್ ಯಾದವ್ ಹಿರಿಯ ಕಾಂಗ್ರೆಸ್ ಮುಖಂಡ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.