
ಬೆಳಗಾವಿ, (ಏ.27): ಕೇಂದ್ರದ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ಪತ್ನಿ ಹಾಗೂ ಲೋಕಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಫೇಸ್‍ಬುಕ್‍ನಲ್ಲಿ ಮಾಹಿತಿ ಹಂಚಿಕೊಂಡಿರುವ ಮಂಗಳಾ ಅಂಗಡಿ ಅವರು, ರೋಗದ ಲಕ್ಷಣಗಳು ಇಲ್ಲದಿದ್ದರೂ ಕೋವಿಡ್ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿರುವೆ. ನನ್ನ ಸಂಪರ್ಕಕ್ಕೆ ಬಂದವರು ಸಹ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಬೆಳಗಾವಿ ಬೈ ಎಲೆಕ್ಷನ್: ಮಂಗಳಾ ಅಂಗಡಿಗೆ ಬಿಜೆಪಿ ಟಿಕೆಟ್ ಕೊಡುವುದಕ್ಕೆ 5 ಕಾರಣಗಳು
ಸದ್ಯ ಅವರು ಬೆಳಗಾವಿ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕ್ವಾರಂಟೈನ್‍ನಲ್ಲಿದ್ದಾರೆ. ಇನ್ನು ಕಳೆದ ಕೊರೋನಾ ಮೊದಲ ಅಲೆಯಲ್ಲಿ ಸಂದರ್ಭದಲ್ಲಿ ಮಂಗಳ ಅವರ ಪತಿ ಸುರೇಶ್ ಅಂಗಡಿ ಅವರಿಗೂ ಸಹ ಕೊರೋನಾ ಸೋಂಕು ತಗುಲಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.
ಕೋವಿಡ್ ತಪಾಸಣೆಗೆ ಒಳಪಟ್ಟಾಗ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಆದರೂ ವೈದ್ಯರ ಸಲಹೆ ಮೇರೆಗೆ...
Posted by Mangal Suresh Angadi on Monday, April 26, 2021
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.