ಬಾದ್ಯಾಪುರ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ ಇಂದು ಬಿಜೆಪಿ ಅಭ್ಯರ್ಥಿ ರಾಜುಗೌಡ ಯಾದಗಿರಿ ಜಿಲ್ಲಾಸ್ಪತ್ರೆಗೆ ತೆರಳಿ ಹಲ್ಲೆಗೊಳಗಾದ ಬಿಜೆಪಿ ಮುಖಂಡ ಆರೋಗ್ಯ ವಿಚಾರಿಸಿ ಅಗತ್ಯ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡುವುದಾಗಿ ಧೈರ್ಯ ತುಂಬಿದರು.
ಯಾದಗಿರಿ (ಮೇ.7): ಬಾದ್ಯಾಪುರ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ ಇಂದು ಬಿಜೆಪಿ ಅಭ್ಯರ್ಥಿ ರಾಜುಗೌಡ ಯಾದಗಿರಿ ಜಿಲ್ಲಾಸ್ಪತ್ರೆಗೆ ತೆರಳಿ ಹಲ್ಲೆಗೊಳಗಾದ ಬಿಜೆಪಿ ಮುಖಂಡ ಆರೋಗ್ಯ ವಿಚಾರಿಸಿ ಅಗತ್ಯ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡುವುದಾಗಿ ಧೈರ್ಯ ತುಂಬಿದರು.
ಬಿಜೆಪಿ ಮುಖಂಡ ಭೀಮಣ್ಣ ಬ್ಯಾಳಿ, ಕಾಂಗ್ರೆಸ್ ಕಾರ್ಯಕರ್ತರಿಂದ ಕಲ್ಲು ತೂರಾಟದ ವೇಳೆ ಗಂಭೀರ ಗಾಯಗೊಂಡಿದ್ದರು.
ಮತಗಟ್ಟೆ ಕೇಂದ್ರದಲ್ಲಿ ಮತ ಹಾಕಿ ಬರುವಾಗ ಬಿಜೆಪಿ ಲೀಡ್ ಬರುತ್ತೆ ಅನ್ನೋ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಈ ವೇಳೆ ಎರಡು ಕಡೆಯವರು ಪರಸ್ಪರ ಕಲ್ಲು ತೂರಾಡಿಕೊಂಡಿ ಕಾರ್ಯಕರ್ತರು. ಕಲ್ಲು ತೂರಾಟ ಹಿನ್ನೆಲೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದ್ದರು. ಬಿಜೆಪಿ ಲೀಡ್ ಬರುತ್ತದೆಂಬ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂದು ಭೀಮಣ್ಣ ಕುಟುಂಬಸ್ಥರು ಆರೋಪಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಪರ ಸರ್ಕಾರಿ ನೌಕರ ಪ್ರಚಾರ ಆರೋಪ; ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಬಿಜೆಪಿ ಮುಖಂಡ