Rajya Sabha Election: ಸಂಸತ್ತಿನಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕಾರ: ಜಗ್ಗೇಶ್‌

Published : Jun 11, 2022, 08:12 AM IST
Rajya Sabha Election: ಸಂಸತ್ತಿನಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕಾರ: ಜಗ್ಗೇಶ್‌

ಸಾರಾಂಶ

*  ಕನ್ನಡದ ದನಿಯಾಗಿ ಕೆಲಸ ಮಾಡುವೆ *  ಕನ್ನಡ ನನ್ನ ಪ್ರಥಮ ಆಯ್ಕೆ *  ಪತಿ ರಾಜ್ಯಸಭೆಗೆ ಆಯ್ಕೆಯಾಗಿರುವುದು ತುಂಬಾ ಸಂತಸ ತಂದಿದೆ: ಪರಿಮಳ

ಬೆಂಗಳೂರು(ಜೂ.11): ಕನ್ನಡ ನನ್ನ ಪ್ರಥಮ ಆಯ್ಕೆಯಾಗಿರುತ್ತದೆ. ಸಂಸತಿನಲ್ಲಿ ಯಾವಾಗಲೂ ಕನ್ನಡದ ದನಿಯಾಗಿರುತ್ತೇನೆ ಎಂದು ರಾಜ್ಯಸಭೆಗೆ ಆಯ್ಕೆಯಾಗಿರುವ ನಟ ಜಗ್ಗೇಶ್‌ ತಿಳಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಗೆ ನನ್ನನ್ನು ಆಯ್ಕೆ ಮಾಡಿದ ಎಲ್ಲ ಶಾಸಕರು ಹಾಗೂ ಕಾರ್ಯಕರ್ತರಿಗೂ ಧನ್ಯವಾದ ಅರ್ಪಿಸುತ್ತೇನೆ. ಸಂಸತ್ತಿನಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತೇನೆ. ನನ್ನ ಕರ್ನಾಟಕದ ದನಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

Rajya Sabha Election: ಬಿಜೆಪಿಗೆ ಒಕ್ಕಲಿಗರ ಸೆಳೆಯಲು ಜಗ್ಗೇಶ್‌ ರಾಜ್ಯಸಭೆಗೆ ಆಯ್ಕೆ?

ನನ್ನ ಬೆಳವಣಿಗೆಗೆ ಕಾರಣಕರ್ತರಾದ ಎಲ್ಲಾ ಕನ್ನಡಿಗರಿಗೂ ಹಾಗೂ ಪಕ್ಷದ ಕಾರ್ಯಕರ್ತರಿಗೂ ಧನ್ಯವಾದ ಹೇಳುತ್ತೇನೆ. ಅನೇಕ ಕಾರ್ಯಕ್ರಮಗಳು ಇವೆ. ಆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಕೆಲಸ ಮಾಡುತ್ತೇನೆ ಎಂದು ಜಗ್ಗೇಶ್‌ ತಿಳಿಸಿದರು. ಇದೇ ವೇಳೆ ಮಾತನಾಡಿದ ಜಗ್ಗೇಶ್‌ ಪತ್ನಿ ಪರಿಮಳ, ಜಗ್ಗೇಶ್‌ ರಾಜ್ಯಸಭೆಗೆ ಆಯ್ಕೆಯಾಗಿರುವುದು ಬಹಳ ಸಂತೋಷವಾಗಿದೆ. ಕಳೆದ 40 ವರ್ಷಗಳಿಂದ ಜಗ್ಗೇಶ್‌ ಕನ್ನಡದ ಸೇವೆ ಮಾಡಿಕೊಂಡು ಬಂದಿದ್ದಾರೆ. ಅದರ ಬಗ್ಗೆ ಜನರಿಗೆ ಚೆನ್ನಾಗಿ ಗೊತ್ತಿದೆ. ಪತಿ ರಾಜ್ಯಸಭೆಗೆ ಆಯ್ಕೆಯಾಗಿರುವುದು ತುಂಬಾ ಸಂತಸ ತಂದಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ