
ತುಮಕೂರು (ಮಾ.09): ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸುತ್ತಿದೆ. ಹಾಗಾಗಿ ದಲಿತ ಮುಖ್ಯಮಂತ್ರಿ ಬಗ್ಗೆ ಮಾತನಾಡುವುದು ಅಷ್ಟೊಂದು ಪ್ರಸ್ತುತವಲ್ಲ ಎಂದು ಪರಮೇಶ್ವರ್ ತಿಳಿಸಿದರು. ಅವರು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಲೋಕಸಭಾ ಚುನಾವಣೆಗೆ ಟಿಕೆಟ್ ಸಂಬಂಧ ಸಿಇಸಿ ಸಭೆಯಲ್ಲಿ ಚರ್ಚಿಸಿ, ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಗೆ ತೆಗೆದುಕೊಂಡು ಹೋಗಲಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ಅಭ್ಯರ್ಥಿಗಳ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಎನ್ನುವುದನ್ನು ಅಂತಿಮಗೊಳಿಸಲಿದೆ ಎಂದು ಅವರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು. ಕಾಂಗ್ರೆಸ್ ಯುವ ನಾಯಕ ರಾಹುಲ್‌ಗಾಂಧಿಯವರು ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರ ನನಗೆ ಗೊತ್ತಿಲ್ಲ ಎಂದು ಅವರು ಹೇಳಿದರು.
ಕೆಫೆ ಬಾಂಬರ್ ಬಗ್ಗೆ ಮಹತ್ವದ ಲೀಡ್: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಯಾರನ್ನೂ ಬಂಧನ ಮಾಡಿಲ್ಲ. ಹಲವರನ್ನು ಕರೆದು ವಿಚಾರಣೆ ನಡೆಸಿದ್ದು, ತನಿಖೆಯಲ್ಲಿ ಮಹತ್ವದ ಲೀಡ್ ಸಿಕ್ಕಿದೆ. ಶೀಘ್ರದಲ್ಲೇ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಬಂಧನ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ಯಾವ ಕಡೆ ಹೋಗಿದ್ದಾನೆ? ಯಾವ ಬಸ್ಸಿನಲ್ಲಿ ಪ್ರಯಾಣ ಮಾಡಿದ್ದಾನೆ? ಎಲ್ಲಿ ಬಟ್ಟೆ ಬದಲಿಸಿಕೊಂಡಿದ್ದಾನೆ ಎಂಬ ಬಗ್ಗೆ ಉತ್ತಮ ಲೀಡ್‌ಗಳು ದೊರೆತಿವೆ. ಬೆಂಗಳೂರಿನಲ್ಲಿಯೇ ಇದ್ದಾನಾ? ಅಥವಾ ಬೇರೆ ಕಡೆಗೆ ಹೋಗಿದ್ದಾನಾ ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದು, ಸದ್ಯದಲ್ಲೇ ಆತನನ್ನು ಹಿಡಿಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Karnika: ಮುಳ್ಳುಗದ್ದುಗೆ ಮೇಲೆ ರಾಮಲಿಂಗೇಶ್ವರ ಸ್ವಾಮಿ ನುಡಿದ ಕಾರ್ಣಿಕ ಏನು ಗೊತ್ತಾ?
ಆ್ಯಸಿಡ್ ನಿಷೇಧದ ಬಗ್ಗೆ ಎರಡು ದಿನದಲ್ಲಿ ಕ್ರಮ: ರಾಜ್ಯದಲ್ಲಿ ಆ್ಯಸಿಡ್ ನಿಷೇಧ ಮಾಡುವ ಬಗ್ಗೆ ಎರಡು ದಿನದಲ್ಲಿ ಕ್ರಮ ಆಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ರಾಜ್ಯದಲ್ಲಿ ಯಾರು ಬೇಕಾದರೂ ಆ್ಯಸಿಡ್ ಖರೀದಿಸುವ ಪರಿಸ್ಥಿತಿ ಇದೆ. ಇದರಿಂದ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಕಾರಣವಾಗುತ್ತಿದೆ. ಹೀಗಾಗಿ ರಾಸಾಯನಿಕ ಕಾರ್ಖಾನೆಯಂತಹ ಅಗತ್ಯವಿರುವವರು ಮಾತ್ರ ಸಿಗುವಂತಾಗಬೇಕು. ಉಳಿದಂತೆ ಸಾರ್ವಜನಿಕರಿಗೆ ಸಿಗುವುದನ್ನು ನಿಷೇಧ ಮಾಡಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಮಹಾನಿರ್ದೇಶಕರು ಎರಡು ದಿನಗಳಲ್ಲಿ ಸರ್ಕಾರಕ್ಕೆ ಪತ್ರ ಬರೆಯಲಿದ್ದು, ಅದರ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.