
ಬೆಂಗಳೂರು/ತಮಿಳುನಾಡು (ಏ.01): ಮುಂಬರುವ 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಾದೇಶಿಕ ಪಕ್ಷದೊಂದಿಗೆ ಮೈತ್ರಿ ಕಾಡಿಕೊಂಡು ತನ್ನ ಬೇರು ಗಟ್ಟಿಗೊಳಿಸುವ ಪ್ರಯತ್ನಕ್ಕೆ ಮುಂದಾಗಿದೆ. ಆದರೆ, ಇದೀಗ ಎಐಎಡಿಎಂಕೆ ಅಣ್ಣಾ ಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ಪಟ್ಟು ಹಿಡಿದಿದ್ದು, ಮೈತ್ರಿಗಾಗಿ ಅಣ್ಣಾ ಮಲೈನನ್ನು ಬಲಿಪಶು ಮಾಡುವ ಸಾಧ್ಯತೆ ಕಂಡುಬರುತ್ತಿದೆ.
ಲೋಕಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಳ್ಳುವುದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾ ಮಲೈ ಹೇಳಿದ್ದರು. ಈ ವೇಳೆ ಬಿಜೆಪಿ ಎಲ್ಲಿಯೂ ಗೆಲುವು ಸಾಧಸಲಿಲ್ಲ. ಸ್ವಃ ಅಣ್ಣಾ ಮಲೈ ಕಡ ಸೋತಿದ್ದರು. ಡಿಎಂಕೆ 39 ಸೀಟುಗಳನ್ನು ಪಡೆದುಕೊಂಡಿತ್ತು. ಕಳೆದ 2-3 ತಿಂಗಳಲ್ಲಿ ಬಿಜೆಪಿ ಎಐಎಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಸಾಧ್ಯತೆ ಇದೆಯೇ ಎಂಬುದನ್ನು ಚರ್ಚಿಸಲು ಮುಂದಾಗಿತ್ತು. ಕಳೆದ ಕೆಲವು ದಿನಗಳ ಹಿಂದೆ ಪಳನಿಸ್ವಾಮಿ ಅವರೊಂದಿಗೆ ಚರ್ಚೆಯನ್ನೂ ಮಾಡಲಾಗಿದ್ದು, ಎಐಎಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅಣ್ಣಾ ಮಲೈ ಸ್ವತಃ ಸೋತಿದ್ದರಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯ ಎಂಬಂತಾಗಿದೆ.
ಇದನ್ನೂ ಓದಿ: ಸೆಪ್ಟೆಂಬರ್‌ನಲ್ಲಿ ಮೋದಿ ನಿವೃತ್ತಿ, ನಾಯಕತ್ವ ಬದಲಾವಣೆಗೆ ಸಂಘ ನಿರ್ಧಾರ: ಸಂಜಯ್ ರಾವುತ್
ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷವು ಮತ್ತೊಮ್ಮೆ ಅಧಿಕಾರಕ್ಕೆ ಬರದಂತೆ ತಡೆಯಲು ಹಾಗೂ ಬಿಜೆಪಿ ತನ್ನ ಸ್ಥಾನವನ್ನು ಬೇರೂರಲು ಸ್ಥಳೀಯ ಪ್ರಾದೇಶಿಕ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಅಗತ್ಯವಾಗಿದೆ. ಹೀಗಾದಲ್ಲಿ ಮಾತ್ರ ಡಿಎಂಕೆಯನ್ನು ಕಟ್ಟಿ ಹಾಕಬಹುದು. ಜೊತೆಗೆ, ಸ್ಥಳೀಯವಾಗಿ ಡಿಎಂಕೆ ಪಕ್ಷಕ್ಕೆ ವಿರೋಧ ಪಕ್ಷವಾಗಿರುವ ಎಐಎಡಿಎಂಕೆಗೆ ತಾವು ಅಧಿಕಾರಕ್ಕೆ ಬರುವುದಿಲ್ಲ ಎಂಬ ನಂಬಿಕೆಯೂ ಇದೆ. ಆದರ ಜೊತೆಗೆ, ಇತ್ತೀಚೆಗೆ ರಾಜಕೀಯಕ್ಕೆ ಧುಮುಕಿರುವ ತಳಪತಿ ವಿಜಯ್ ಕೂಡ ಕೆಲವು ಮತಗಳನ್ನು ಆಕರ್ಷಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ದ್ರಾವಿಡ ವಿರೋಧ ನಡೆಯಿರುವ ಕೆಲವು ಮತಗಳು ಎಐಎಡಿಎಂಕೆ ಹಾಗೂ ಡಿಎಂಕೆ ಪಕ್ಷವನ್ನು ಬಿಟ್ಟು ದಳಪತು ವಿಜಯ್ ಅವರಿಗೆ ಹೋಗುವ ಸಾಧ್ಯತೆ ಇದೆ. ಹೀಗಾಗಿ, ಇಂತಹ ಮತಗಳನ್ನು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೆ ಸುಲಭವಾಗಿ ತಮ್ಮತ್ತ ಸೆಳೆಯಬಹುದು ಎಂಬ ಲೆಕ್ಕಾಚಾರವನ್ನು ಹಾಕಲಾಗಿದೆ.
ಇದನ್ನೂ ಓದಿ: ಜನತೆ ಹೇಳಿದರೆ ಹೊಸ ಪಕ್ಷ ಕಟ್ಟುವೆ ಎಂದ ಯತ್ನಾಳ್! ವಿಜಯದಶಮಿಗೆ ನಿರ್ಧಾರ ರೆಬೆಲ್ಸ್?
ಹಿಂದಿ ವಿರೋಧಿ, ಮೋದಿ ವಿರೋಧಿ ಹಾಗೂ ತ್ರಿಭಾಷಾ ಸೂತ್ರದ ವಿರೋಧಿ ನಡೆಗಳು ಹೆಚ್ಚಾಗಿವೆ. ಇದೆಲ್ಲವನ್ನೂ ಅಳೆದು ತೂಗಿ ಎಐಎಡಿಎಂಕೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಮುಂದಾಗಿದೆ. ಆದ್ದರಿಂದ ಇಲ್ಲಿ ಬಿಜೆಪಿ ಹಾಗೂ ಮೋದಿ ಪರ ಅಲೆಯನ್ನು ಎಬ್ಬಿಸುತ್ತಿರುವ ಅಣ್ಣಾ ಮಲೈ ಅವರನ್ನು ಬಿಜೆಪಿ ರಾಜ್ಯಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಎಐಎಡಿಎಂಕೆ ಪಟ್ಟು ಹಿಡಿದಿದೆ. ಒಟ್ಟಾರೆಯಾಗಿ, ಎಐಎಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡುವುದಕ್ಕೆ ತಮಿಳುನಾಡಿನಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದ್ದ ಅಣ್ಣಾ ಮಲೈ ಅವರನ್ನು ಬಲಿಪಶು ಮಾಡುವ ಸಾಧ್ಯತೆ ನಿಚ್ಚಳವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.