ಬಿಜೆಪಿ, ಜೆಡಿಎಸ್‌ ತಿರಸ್ಕರಿಸಲು ತರೀಕೆರೆ ಜನತೆ ನಿರ್ಧಾರ: ಲೋಕೇಶ್‌ ತಾಳಿಕಟ್ಟೆ

By Kannadaprabha News  |  First Published Apr 9, 2023, 3:16 PM IST

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಹಾಗೂ ಕುಟಂಬ ಸ್ವಾರ್ಥದ ಜೆಡಿಎಸ್‌ನ್ನು ತಿರಸ್ಕರಿಸಲು ಜನತೆ ನಿರ್ಧರಿಸಿದ್ದಾರೆ ಎಂದು ತರೀಕೆರೆ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್‌ ಪಕ್ಷದ ಪ್ರಬಲ ಟಿಕೆಟ್‌ ಆಕಾಂಕ್ಷಿ ಲೋಕೇಶ್‌ ತಾಳಿಕಟ್ಟೆಹೇಳಿದ್ದಾರೆ.


ತರೀಕೆರೆ (ಏ.9) : ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಹಾಗೂ ಕುಟಂಬ ಸ್ವಾರ್ಥದ ಜೆಡಿಎಸ್‌ನ್ನು ತಿರಸ್ಕರಿಸಲು ಜನತೆ ನಿರ್ಧರಿಸಿದ್ದಾರೆ ಎಂದು ತರೀಕೆರೆ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್‌ ಪಕ್ಷದ ಪ್ರಬಲ ಟಿಕೆಟ್‌ ಆಕಾಂಕ್ಷಿ ಲೋಕೇಶ್‌ ತಾಳಿಕಟ್ಟೆ(Lokesh Talikatte) ಹೇಳಿದ್ದಾರೆ.

ಶನಿವಾರ ಪಟ್ಟಣದ ಅರಮನೆ ಹೋಟೆಲ್‌ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ನೀಡುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಸರ್ಕಾರ(BJP Government) ಜನರಿಗೆ ಮೂಲಭೂತ ಸೌಕರ್ಯ ನೀಡಲು ಮತ್ತು ಅಡಳಿತದಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಇವರು ಸಮಸ್ಯೆಗಳನ್ನು ಪರಿಹರಿಸುವ ಬದಲು, ಜನರ ಮನಸ್ಸಿನಲ್ಲಿ ಕೋಮು ದ್ವೇಷ ಬಿತ್ತುವ ಹಾಗೂ ದೇಶದ ಪ್ರಮುಖ ಆಸ್ತಿಗಳನ್ನು ತಮ್ಮ ಹಿತೈಷಿಗಳಿಗೆ ಪರಭಾರೆ ಮಾಡಿರುವ ಬಿಜೆಪಿಯನ್ನು ತರೀಕೆರೆ ಜನರು ಈ ಭಾರಿ ತಿರಸ್ಕರಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದರು.

Tap to resize

Latest Videos

undefined

ಕೂಸಳ್ಳಿ ಫಾಲ್ಸ್‌ನಲ್ಲಿ ಮುಳುಗಿ ಕೊಪ್ಪದ ಯುವಕ ಸಾವು

ಹಾಗೆಯೇ ನಮ್ಮದು ಜಾತ್ಯಾತೀತ ಪಕ್ಷ ಎಂದು ಸುಳ್ಳು ಹೇಳಿಕೊಂಡು ಕುಟುಂಬ ರಾಜಕಾರಣದಲ್ಲಿ ನಿರತರಾಗಿರುವ ಜೆಡಿಎಸ್‌ಗೆ ಮತ ಚಲಾಯಿಸದಿರಲು ನಿರ್ಧರಿಸಿದ್ದಾರೆ. ಜಾತ್ಯತೀತ, ಸಮಸಮಾಜ ತತ್ವದಡಿ ಸಾಗುತ್ತಿರುವ ಕಾಂಗ್ರೆಸ್‌ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷಿ ಆಗಿದ್ದೇನೆ. ಕಳೆದ ನಾಲ್ಕು ವರ್ಷಗಳಿಂದ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಬಯಲಿಗೆಳೆದು, ರಾಜ್ಯದ ಶಿಕ್ಷಣ ಇಲಾಖೆಯ ಅವ್ಯವಸ್ಥೆಗಳನ್ನು ಹಲವಾರು ವೇದಿಕೆಗಳಲ್ಲಿ ಚರ್ಚಿಸುವಂತೆ ಮಾಡಿ ಅದರಲ್ಲಿದ್ದ ಅನೇಕ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕಾರಣನಾಗಿರುವ ನನ್ನನ್ನು ಗುರುತಿಸಿ ಟಿಕೆಟ್‌ ನೀಡಿದರೆ ಪಕ್ಷದ ಸಿದ್ದಾಂತದಡಿ ತರೀಕೆರೆ ಜನತೆಯ ಸೇವೆ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಒಂದು ವೇಳೆ ಟಿಕೆಟ್‌ ಕೊಡದಿದ್ದರೂ ಸೈದ್ಧಾಂತಿಕವಾಗಿ ಪಕ್ಷವನ್ನು ಗಟ್ಟಿಯಾಗಿ ಕಟ್ಟಲು ಸಿದ್ದನಾಗಿರುವೆ ಎಂದು ತಿಳಿಸಿದರು.

ಕುರುಬ ಸಮಾಜದ ತಾಲೂಕು ಅಧ್ಯಕ್ಷ ಹಾಲವಜ್ರಪ್ಪ, ಪುರಸಭಾ ಮಾಜಿ ಅಧ್ಯಕ್ಷ ಈರಣ್ಣ, ಸೋಮಶೇಖರ್‌, ದೇವರಾಜ್‌, ಶಿವಣ್ಣ. ದೇವರಾಜ್‌ ಮತ್ತಿತರರು ಭಾಗವಹಿಸಿದ್ದರು.

ಡ್ಯಾಂನಲ್ಲಿ ಈಜಲು ಹೋಗಿ ಕಾಲೇಜು ವಿದ್ಯಾರ್ಥಿನಿಯರು ಸಾವು: ಟ್ರಿಪ್‌ಗೆ ಹೋದವರು ಮಸಣ ಸೇರಿದರು

click me!