ರಾಜಕೀಯ ಚದುರಂಗದಾಟ ಅದ್ಯಾವ ಮಟ್ಟಿಗೆ ಇದೆ ಅನ್ನೋದು ಊಹಿಸಲು ಅಸಾಧ್ಯವಾಗುವಂತ ಸ್ಟೋರಿ ಇದು. ಏಷ್ಯಾನೆಟ್ ಸುವರ್ಣನ್ಯೂಸ್ ಈ ಕುರಿತ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಸೋಲಿಸಲು ಕಾಂಗ್ರೆಸ್ ನಾಯಕನಿಗೆ 500 ಕೋಟಿ ರೂಪಾಯಿ ಸುಪಾರಿ ನೀಡಿದ ಮಹಾ Exclusive ಇಲ್ಲಿದೆ
ಬೆಂಗಳೂರು(ಜ.20): ಕರ್ನಾಟಕ ವಿಧಾಸಭಾ ಚುನಾವಣೆ ಜಿದ್ದಾಜಿದ್ದಿನಿಂದ ಕೂಡಿದೆ. ಹೀಗಾಗಿ ಒಂದೊಂದು ಮತ ಕೂಡ ಮುಖ್ಯವಾಗಿದೆ. ಅಧಿಕಾರಕ್ಕಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪೈಪೋಟಿ ನಡೆಸುತ್ತಿದೆ. ಇದರ ನಡುವೆ ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ಕಾಂಗ್ರೆಸ್ ನಾಯಕನಿಗೇ 500 ಕೋಟಿ ರೂಪಾಯಿ ಸುಪಾರಿ ನೀಡಲಾಗಿದೆ ಅನ್ನೋ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಸುದ್ದಿಗೋಷ್ಠಿ ಇದೀಗ ದೇಶದಲ್ಲೇ ಭಾರಿ ತಲ್ಲಣ ಸೃಷ್ಟಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ತೆಲಂಗಾಣ ಸಿಎಂ ಕೆ ಚಂದ್ರಶೇಕರ್ ರಾವ್, ಕರ್ನಾಟಕದ ಕಾಂಗ್ರೆಸ್ ನಾಯಕನೊಬ್ಬನ ಕರೆಸಿ ಮೂರು ಮೂರು ಬಾರಿ ಮೀಟಿಂಗ್ ನಡೆಸಿದ್ದಾರೆ. ಇಷ್ಟೇ ಅಲ್ಲ 500 ಕೋಟಿ ರೂಪಾಯಿ ಆಫರ್ ನೀಡಿದ್ದಾರೆ ಎಂದಿದ್ದಾರೆ.
ಇತ್ತೀಚೆಗೆ ನಡೆದ ಬಿಎಸ್ಆರ್ ಕಾರ್ಯಕ್ರಮದಲ್ಲಿ , ಕರ್ನಾಟಕದ ಮಾಜಿ ಸಿಎಂ ಕುಮಾರಸ್ವಾಮಿ, ದೇವೇಗೌಡರು ಕಾಣಿಸಿಕೊಂಡಿಲ್ಲ. ಇದಕ್ಕೆ ಕಾರಣವೇನು ಗೊತ್ತೆ?. ಪ್ರಶಾಂಕ್ ಕಿಶೋರ್ ಸೇರಿದಂತೆ ಕೆಲ ರಾಜಕೀಯ ಸ್ಟ್ರಾಟರ್ಜಿಗಳಿಂದ ಸಮೀಕ್ಷಾ ದಾಖಲೆ ಪಡೆದಿರುವ ಕೆ ಚಂದ್ರಶೇಖರ್ ರಾವ್, ಈ ಸುಪಾರಿ ತಂತ್ರ ಹೆಣೆಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ 120 ರಿಂದ 130 ಸ್ಥಾನ ಲಭ್ಯವಾಗಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಇದರಲ್ಲಿ ಕಡಿಮೆ ಅಂತರ ಅಂದರರೆ 1,500-3,000 ಮತಗಳಿಂದ ಗೆಲ್ಲುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ಕರ್ನಾಟಕದ ಕಾಂಗ್ರೆಸ್ ನಾಯಕನಿಗೆ ಈ ಜವಾಬ್ದಾರಿ ನೀಡಲಾಗಿದೆ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.
25 ರಿಂದ 30 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಸಲು ಕೆ ಚಂದ್ರಶೇಖರ್ ರಾವ್ ಪ್ಲಾನ್ ಮಾಡಿದ್ದಾರೆ. ಇದಕ್ಕಾಗಿ ಕರ್ನಾಟಕ ಕಾಂಗ್ರೆಸ್ ಪಕ್ಷದ ನಾಯಕನೊಬ್ಬನನ್ನು ಇತ್ತೀತೆಗೆ ಕೆಸಿಆರ್ ತೆಲಂಗಾಣಕ್ಕೆ ಕರೆಯಿಸಿಕೊಂಡು ಮಾತುಕತೆ ನಡೆಸಿದ್ದಾರೆ. ಫಾರ್ಮ್ ಹೌಸ್‌ಗೆ ಕರೆಯಿಸಿಕೊಂಡು 500 ಕೋಟಿ ರೂಪಾಯಿ ಆಫರ್ ನೀಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು 100 ಸ್ಥಾನದೊಳಗೆ ಸೀಮಿತಗೊಳಿಸಲು ಈ ಪ್ರಯತ್ನ ಮಾಡಲಾಗಿದೆ. ಕರ್ನಾಟಕದಿಂದ ಆಗಮಿಸಿ ಕೆಸಿಆರ್ ಜೊತೆ ಮಾತುಕತೆ ನಡೆಸಿದ ಕಾಂಗ್ರೆಸ್ ನಾಯಕನಿಗೆ ತೆಲಂಗಾಣದಲ್ಲಿ ವ್ಯವಹಾರಗಳಿವೆ ಎಂದು ರೇವಂತ್ ರೆಡ್ಡಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಇದೀಗ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು 500 ಕೋಟಿ ರೂಪಾಯಿ ಸುಪಾರಿ ಪಡೆದ ರಾಜ್ಯ ಕಾಂಗ್ರೆಸ್ ನಾಯಕ ಯಾರು ಅನ್ನೋ ಚರ್ಚೆ ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಜೋರಾಗಿದೆ. ಇತ್ತೀಚೆಗೆ ಕೆ ಚಂದ್ರಶೇಖರ್ ರಾವ್ ಅವರನ್ನು ಬೇಟಿಯಾಗಿರುವ ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ಮೇಲೆ ಅನುಮಾನಗಳು ವ್ಯಕ್ತವಾಗತೊಡಗಿದೆ. ತಿಂಗಳ ಹಿಂದೆಯಷ್ಟೇ ಹೈದರಾಬಾದ್ನಲ್ಲಿ ಕೆಸಿಆರ್ ಜೊತೆ ಜಮೀರ್ ಅಹಮ್ಮದ್ ಕಾಣಿಸಿಕೊಂಡಿದ್ದರು. ಇದೀಗ ಜಮೀರ್ ಹಾಗೂ ಕೆಸಿಆರ್ ಭೇಟಿ ಹಿಂದಿನ ರಹಸ್ಯವನ್ನು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಬಹಿರಂಗಗೊಳಿಸಿದ್ದಾರೆ.
ಕೆ ಚಂದ್ರಶೇಖರ್ ರಾವ್ ಇತ್ತೀಚೆಗೆ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷವನ್ನು ಭಾರತ್ ರಾಷ್ಚ್ರ ಸಮಿತಿ ಪಕ್ಷವನ್ನಾಗಿ ಪರಿವರ್ತಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ನಾಯಕತ್ವದ ಮೇಲೆ ಕಣ್ಣಿಟ್ಟಿದ್ದಾರೆ. ಇದಕ್ಕಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಲು, ಕರ್ನಾಟಕ ಕಾಂಗ್ರೆಸ್ ನಾಯಕನಿಗೆ ಸುಪಾರಿ ನೀಡಿದ್ದಾರೆ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.
ಕಿಂಗ್ ಮೇಕರ್ ಸುಪಾರಿ ಆರೋಪಕ್ಕೆ ಹೆಚ್‌ಡಿಕೆ ಪ್ರತಿಕ್ರಿಯೆ
ವಿಜಯಪುರ ಪಂಚರತ್ನ ಯಾತ್ರೆ ವೇಳೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸೋಲಿಸಲು ಕೆಸಿಆರ್ ಸುಪಾರಿ ನೀಡಿದ್ದಾರೆ ಅನ್ನೋ ವಿಚಾರ ನನಗೆ ಗೊತ್ತಿಲ್ಲ. ಯಾರು ಯಾರನ್ನೂ ಬೇಕಾದರೂ ಭೇಟಿ ಮಾಡುತ್ತಾರೆ. ಕಾಂಗ್ರೆಸ್ ಸೋಲಿಸಿದರೆ ಕೆ ಚಂದ್ರಶೇಖರ್ ರಾವ್‌ಗೆ ಲಾಭ ಏನು? ಕೆಸಿಆರ್ ಅವರ ಹೋರಾಟ ಬಿಜೆಪಿ ವಿರುದ್ಧ. ಕಾಂಗ್ರೆಸ್ ವಿರುದ್ಧ ಅಲ್ಲ. ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಯಾವ ಹಿನ್ನಲೆಯಲ್ಲಿ ಹೇಳಿದ್ದಾರೆ ಅನ್ನೋದು ಗೊತ್ತಿಲ್ಲ. ನನಗೆ ಜನತೆಯ ಆಶೀರ್ವಾದ, ನನಗೆ ಜನತೆಯ ಬೆಂಬಲ ಇದೆ. ಹೀಗಾಗಿ ಈ ವಿಚಾರಗಳ ಕುರಿತು ನಾನು ಗಮನ ಹರಿಸುವುದಿಲ್ಲ. ನನಗೆ ಹಣದ ಅವಶ್ಯಕತೆ ಇಲ್ಲ. ಕರ್ನಾಟಕದಲ್ಲಿ ಯಾತ್ರೆ ಮೂಲಕ ಸಂಚರಿಸುತ್ತಿದ್ದೇನೆ. ಅಭೂತಪೂರ್ವ ಯಶಸ್ಸು ಸಿಕ್ಕಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.